ಕಾಂಗ್ರೆಸ್ ಮಾಡಿದ ರಸ್ತೆ,ವಿಮಾನ ನಿಲ್ದಾಣ ಸೇರಿ ಎಲ್ಲವನ್ನೂ ಬಿಜೆಪಿ ಮಾರುತ್ತಿದೆ:ಪ್ರಿಯಾಂಕಾ

Team Udayavani, Oct 31, 2021, 6:20 PM IST

ಪ್ರಿಯಾಂಕ

ನವದೆಹಲಿ:’ಕಳೆದ 70 ವರ್ಷಗಳಿಂದ ಕಾಂಗ್ರೆಸ್ ನಿರ್ಮಿಸಿದ ರೈಲ್ವೆ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ಬಿಜೆಪಿ ಮಾರಾಟ ಮಾಡುತ್ತಿದೆ’ ಎಂದು ಭಾನುವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಾಂಗ್ರೆಸ್ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ನಿರ್ಮಿಸಿತು. ಅವೆಲ್ಲವನ್ನೂ ಮಾರುತ್ತಿದ್ದಾರೆ. 70 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂದು ಅವರು ಕೇಳುತ್ತಾರೆ. ಅವರು ಕೇವಲ 7 ವರ್ಷಗಳಲ್ಲಿ 70 ವರ್ಷಗಳ ಪ್ರಯತ್ನವನ್ನು ವ್ಯರ್ಥ ಮಾಡಿದ್ದಾರೆ, ”ಎಂದರು.

‘ನಿರುದ್ಯೋಗವನ್ನು ರಾಜ್ಯದ ಪ್ರಮುಖ ಸಮಸ್ಯೆಯಾಗಿದೆ. ಯುಪಿಯಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ,” ಎಂದರು.

ಇದನ್ನೂ ಓದಿ:- ರಬಕವಿಯಲ್ಲಿ 4 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

‘ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ’ ಎಂದು ಅವರು ಆರೋಪಿಸಿದರು.

“ದಲಿತರು, ನೇಕಾರರು, ಒಬಿಸಿಗಳು, ಬಡವರು, ಅಲ್ಪಸಂಖ್ಯಾತರು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರತಿನಿತ್ಯ ಜನರ ಮೇಲೆ ಹಲ್ಲೆ ನಡೆಸುತ್ತಿದೆ” ಎಂದು ಗಾಂಧಿ ಹೇಳಿದರು.

ಯುಪಿ ಚುನಾವಣೆಗಾಗಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಸಹಯೋಗದಲ್ಲಿ ಕೆಲಸ ಮಾಡಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು.

“ಎಸ್‌ಪಿ ಮತ್ತು ಬಿಎಸ್‌ಪಿಯವರು ಕಾಂಗ್ರೆಸ್ ಬಿಜೆಪಿಯೊಂದಿಗೆ ಶಾಮೀಲಾಗಿ ಕೆಲಸ ಮಾಡುತ್ತಿದೆ ಎಂದು ಹೇಳುತ್ತಾರೆ. ನಾನು ಆರೋಪಿಸುವವರಿಗೆ ಕೇಳಲು ಬಯಸುತ್ತೇನೆ – ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮ್ಮೊಂದಿಗೆ ಏಕೆ ನಿಲ್ಲಬಾರದು. ಕಾಂಗ್ರೆಸ್ ಮಾತ್ರ ಹೋರಾಡುತ್ತಿದೆ ಎಂದು ಯಾಕೆ ಹೇಳುತ್ತೀರಿ. ನಾನು ಬೇಕಾದರೆ ಸಾಯುತ್ತೇನೆ ಆದರೆ ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಹೊಂದುವುದಿಲ್ಲ” ಎಂದು ಅವರು ಪ್ರತಿಪಾದಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.