ಸಹಕಾರಿ ಕ್ಷೇತ್ರ ಉಳಿಸಿ-ಬೆಳೆಸೋದು ಎಲ್ಲರ ಕರ್ತವ್ಯ 


Team Udayavani, Nov 2, 2021, 1:28 PM IST

ಸಹಕಾರಿ ಕ್ಷೇತ್ರ ಉಳಿಸಿ-ಬೆಳೆಸೋದು ಎಲ್ಲರ ಕರ್ತವ್ಯ 

ಶಿವಮೊಗ್ಗ: ಸಹಕಾರಿ ತತ್ವ ಅತ್ಯಂತ ಅಮೂಲ್ಯವಾಗಿದೆ. ಉತ್ತಮ ವ್ಯಕ್ತಿಗಳಿಂದ ಸಹಕಾರಿ ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳಾಗುತ್ತವೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್‌ ಜನರಲ್‌ ಅಶೋಕ್‌ ಹಾರನಹಳ್ಳಿ ಹೇಳಿದರು.

ಸೋಮವಾರ ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣಮಹಾಸಭಾ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ವಿಪ್ರ ಸಹಕಾರಿ ನಿರ್ದೇಶಕರ ಹಾಗೂ ಪ್ರಮುಖರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಅನೇಕ ಮಹನೀಯರ ತ್ಯಾಗದಿಂದ ಈ ರಾಜ್ಯರಚನೆಯಾಗಿದೆ. ಸರ್ದಾರ್‌ ವಲ್ಲಭ ಭಾಯ್‌ ಪಟೇಲ್‌ ಅವರಿಗೆ ಕರ್ನಾಟಕ ರಾಜ್ಯ ಒಗ್ಗೂಡಿಸಿದ ಶ್ರೇಯಸ್ಸು ಸಲ್ಲಬೇಕು ಎಂದರು.

ವಿಪ್ರ ಸಹಕಾರಿಗಳ ಸಮಾವೇಶ ಬೇಕಿತ್ತಾ ಎನ್ನುವ ಪ್ರಶ್ನೆ ಕೆಲವರಲ್ಲಿ ಕಾಡುತ್ತಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳು ಕೂಡ ಹಲವು ಬಾರಿ ಜಾತಿಗಳಿಗೆ ನಿಗಮ ಮತ್ತು ಅಭಿವೃದ್ಧಿ ಮಂಡಳಿಗಳು ಬೇಕಾ ಎಂದು ಪ್ರಶ್ನಿಸಿದ್ದಾರೆ. ಆದರೆ, ಸಂವಿಧಾನ ರಚನೆಯಾಗಿ ಹಲವು ವರ್ಷಗಳಾದರೂ ಸಂವಿಧಾನದ ಅಡಿಯಲ್ಲೇ ಜಾತಿ ಆಧಾರದ ಮೇಲೆ ಮೀಸಲಾತಿಯನ್ನು ಇಂದಿಗೂ ನೀಡಲಾಗುತ್ತಿದೆ. ಅಂದಮೇಲೆ, ಎಲ್ಲಾ ಜಾತಿಗಳಿಗೂ ಸಮಾವೇಶದ ಮತ್ತು ನಿಗಮಗಳ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದಲ್ಲಿ ಸಂಖ್ಯೆಯೇ ಪ್ರಮುಖವಾಗಿದೆ. ಆದ್ದರಿಂದ ಜಾತಿ ಆಧಾರಿತ ಕಾರ್ಯಕ್ರಮಗಳು ಅನಿವಾರ್ಯವಾಗಿವೆ. ಸಹಕಾರಿಕ್ಷೇತ್ರದಲ್ಲಿ ವಿಪ್ರ ಸಹಕಾರಿಗಳಿಗೆ ವಿಫುಲವಾದಅವಕಾಶವಿದೆ. ದೇಶದಲ್ಲಿ ಅನೇಕ ಪ್ರಮುಖರು ಸಹಕಾರಿ ರಂಗದಲ್ಲಿ ಹೆಸರು ಗಳಿಸಿದ್ದಾರೆ. ಅಮುಲ್‌, ಲಿಜ್ಜತ್‌ ಪಾಪಡ್‌ ಸೇರಿದಂತೆ ಅನೇಕ ಫರ್ಟಿಲೈಸರ್ಸ್‌ ಕೋ-ಆಪರೇಟಿವ್‌ ಸಂಸ್ಥೆಗಳು ದೇಶದಲ್ಲಿ ಅತ್ಯುನ್ನತ ಸ್ಥಾನ ಪಡೆದಿವೆ ಎಂದರು.

ಅನೇಕ ಕೋ-ಆಪರೇಟಿವ್‌ ಬ್ಯಾಂಕ್‌ ಗಳಲ್ಲಿರಾಜಕೀಯ ಪ್ರವೇಶವಾಗಿದೆ ಎಂಬ ಆರೋಪವಿದೆ. ನಿರ್ದೇಶಕರ ಹುದ್ದೆಗಳಿಗೆ ಪೈಪೋಟಿ ಇದೆ. ಸ್ವಯಂಕೃತ ಅಪರಾಧದಿಂದ ಮಾತ್ರ ಕೆಲವು ಸಹಕಾರಿ ಸಂಸ್ಥೆಗಳುನಷ್ಟ ಅನುಭವಿಸಿವೆ. ಆದರೆ, ಸಹಕಾರಿ ಕ್ಷೇತ್ರದಲ್ಲಿ ಪರಸ್ಪರ ಸಹಕಾರದಿಂದ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಅನೇಕ ಸಂಸ್ಥೆಗಳು ತೋರಿಸಿವೆ. ಸಾರ್ವಜನಿಕರ ನಂಬಿಕೆಯನ್ನು ಸಹಕಾರಿ ಸಂಸ್ಥೆಗಳು ಕಳೆದುಕೊಳ್ಳಬಾರದು ಎಂದರು.

ದುರಂತವೆಂದರೆ ಸಹಕಾರಿ ಕ್ಷೇತ್ರದಲ್ಲಿರುವಷ್ಟು ವ್ಯಾಜ್ಯಗಳು ಬೇರೆ ಯಾವ ಕ್ಷೇತ್ರದಲ್ಲೂ ಇಲ್ಲ. ರಾಜಕೀಯ ಪ್ರವೇಶದ ಹಿಂದೆ ಸಹಕಾರಿ ಕ್ಷೇತ್ರವನ್ನುನಿಯಂತ್ರಿಸುವ ಉದ್ದೇಶ ಅಡಗಿದೆ ಎಂಬುದು ಸತ್ಯ. ಆದರೆ, ಕೆಲವೊಂದು ಬದಲಾವಣೆ ಸಹಕಾರಿ ಕ್ಷೇತ್ರದಲ್ಲೂ ಅಗತ್ಯವಿದೆ. ಸಾರ್ವಜನಿಕರಿಗೆಬಹುಉಪಯೋಗವಾಗುವ ಸಹಕಾರಿ ಕ್ಷೇತ್ರವನ್ನುಬೆಳೆಸುವುದು, ಅಭಿವೃದ್ಧಿಪಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಹೊಯ್ಸಳ ಕರ್ನಾಟಕ ಸೌಹಾರ್ದ ಸಹಕಾರಿ ಅಧ್ಯಕ್ಷ ಎಂ. ಶಂಕರ್‌ ಮಾತನಾಡಿ, ಜಿಲ್ಲಾ ಸಹಕಾರ ಸಂಸ್ಥೆಗಳು ಅನೇಕ ಸಮಾಜಮುಖಿ ಕಾರ್ಯಗಳನ್ನುಮಾಡುತ್ತಿವೆ. ಧಾರ್ಮಿಕ, ಶೈಕ್ಷಣಿಕ, ಆರ್ಥಿಕ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬ್ರಾಹ್ಮಣ ಸಮಾಜ ಮಹತ್ತರ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ 650 ಕ್ಕೂ ಹೆಚ್ಚು ವಿಪ್ರ ಸಹಕಾರಿಗಳಿದ್ದಾರೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಜಿಲ್ಲಾ ಸಹಕಾರಿ ಕ್ಷೇತ್ರಗಳಿಂದ ಸಹಾಯವಾಗಿದೆ. 8 ಸಹಕಾರಿ ಸಂಸ್ಥೆಗಳು ವಿಪ್ರರ ನೇತೃತ್ವದಲ್ಲಿ 350 ಕೋಟಿ ರೂ.ಗೂ ಹೆಚ್ಚು ವಾರ್ಷಿಕ ವಹಿವಾಟು ನಡೆಸುತ್ತಿವೆ. ಇದೊಂದು ಇತಿಹಾಸ.

ಸಮಾಜಕ್ಕೆ ವಿಪ್ರ ಸಹಕಾರಿಗಳ ಕೊಡುಗೆ ಏನು? ಮತ್ತು ಅವರ ಐಡೆಂಟಿಟಿ ಸಮಾಜಕ್ಕೆ ಗೊತ್ತಾಗಬೇಕು ಎನ್ನುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದರು.

ಮುಖ್ಯ ಅತಿಥಿಗಳಾಗಿ ಸಹಕಾರಿ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್‌ ವೈದ್ಯ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ್‌, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ ಭಾಗವತ್‌, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿನಿಗಮದ ನಿಗಮದ ನಿರ್ದೇಶಕರಾದ ಎ.ಆರ್‌.ಪ್ರಸನ್ನಕುಮಾರ್‌ ಸೇರಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು, ವಿಪ್ರಸಮಾಜದ ಪ್ರಮುಖರು ಉಪಸ್ಥಿತಿರಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.