ಗೋಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಿರಿ : ಸಚಿವೆ ಜೊಲ್ಲೆ ಮನವಿ

Team Udayavani, Nov 2, 2021, 9:30 PM IST

ಗೋಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಿರಿ : ಸಚಿವೆ ಜೊಲ್ಲೆ ಮನವಿ

ಬೆಂಗಳೂರು : ದೀಪಾವಳಿಯ ಬಲಿಪಾಡ್ಯದ ದಿನವಾದ ನವೆಂಬರ್ 5ರಂದು ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ನಡೆಯುವ ಗೋಪೂಜಾ ಅಭಿಯಾನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಮನವಿ ಮಾಡಿದ್ದಾರೆ.

ಬಲಿಪಾಡ್ಯ ದಿನ ಇಲಾಖೆಯ ದೇವಾಲಯಗಳಲ್ಲಿ ನಡೆಯುವ ಗೋಪೂಜೆ ಅಂಗವಾಗಿ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚನೆಗಳನ್ನು ನೀಡಿ ಮಾತನಾಡಿದ ಅವರು, ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಗೋಪೂಜೆಗೆ ತನ್ನದೇ ಆದ ಮಹತ್ವವಿದೆ ಎಂದರು.

ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನವೆಂಬರ್ 5ರ ಬಲಿಪಾಡ್ಯ ದಿವಸದಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಗೋಮಾತೆ ಪೂಜೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಗೋಮಾತೆಯನ್ನು ಪೂಜಿಸುವ ಸನಾತನ ಧರ್ಮದ ಸಂಪ್ರದಾಯವನ್ನು ನಮ್ಮ ಮುಂದಿನ ಪೀಳಿಗೆಗೂ ತಲುಪಿಸಬೇಕಾದ ಜವಾಬ್ದಾರಿಯೂ ನಮ್ಮೆಲ್ಲರದಾಗಿದೆ. ಪ್ರತಿ ರೈತಕುಟುಂಬಗಳಲ್ಲಿ ಕನಿಷ್ಠ ಒಂದಾದರೂ ದೇಶೀಯ ಗೋವು ಸಾಕಲು ಪ್ರೋತ್ಸಾಹಿಸುವುದು. ಗೋವುಗಳ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರ ಗೋವುಗಳ ರಕ್ಷಣೆ ಮಾಡುವ ಸದುದ್ದೇಶದಿಂದ ‘ಗೋ ಸಂರಕ್ಷಣಾ ಕಾಯ್ದೆ-2021’ನ್ನು ಜಾರಿಗೊಳಿಸಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ : ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸದಸ್ಯರ ಅಪಹರಣ : ಗುಡಿಬಂಡೆಯಲ್ಲಿ ಭುಗಿಲೆದ್ದ ಆಕ್ರೋಶ

ಆಯಾ ಭಾಗದಲ್ಲಿ ನಡೆಯುವ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ ಗೋಪೂಜೆ ಮಹತ್ವ ಮತ್ತು ದೇಶೀಯ ಗೋತಳಿ ಸಾಕುವ ಕುರಿತು ಜಾಗೃತಿ ಮೂಡಿಸುವಂತೆ ನಾನು ಮಾನ್ಯ ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಮಾನ್ಯ ಸದಸ್ಯರುಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳೂ ಸಹ ಸದರಿ ದಿನ ಗೋಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಪರಿಷತ್ತಿನ ಸದಸ್ಯರು, ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯರರನ್ನು ಗೋಪೂಜೆಗೆ ಆಹ್ವಾನಿಸುವುದು ಎಂದು ಅವರು ಹೇಳಿದರು.

ಗೋಪೂಜೆಯಲ್ಲಿ ಸಾರ್ವಜನಿಕರು ಭಾಗಿಯಾಗುವಂತೆ ಪೂರ್ವಭಾವಿಯಾಗಿ ವ್ಯಾಪಕ ಪ್ರಚಾರ ನೀಡುವುದು. ಗೋಪೂಜೆಯನ್ನು ಒಂದು ವ್ಯಾಪಕ ಅಭಿಯಾನದ ರೂಪದಲ್ಲಿ ಕೈಗೊಳ್ಳುವುದು. ಗೋಪೂಜೆಯ ಮಹತ್ವ ಎಲ್ಲರಿಗೂ ಗೊತ್ತಾಗಲು ಆಯಾ ಭಾಗದಲ್ಲಿ ಸ್ಥಳೀಯ ಮಾಧ್ಯಮಗಳಿಗೆ ಅಂದು ಆಹ್ವಾನ ನೀಡುವುದು. ಗೋವುಗಳು ಪೂಜಾ ಸಮಯದಲ್ಲಿ ಜನಸಂದಣಿ, ಮಾಧ್ಯಮ ಸಹೋದರರ ಕ್ಯಾಮರಾಗಳಿಂದ ಬೆದರಿ ನುಗ್ಗಿ ಹಾನಿ ಮಾಡದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾದಂತೆ ಗಮನ ಹರಿಸುವುದು ಸೇರಿದಂತೆ ಸಚಿವರು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಪೂಜೆಗೆ ಅವಶ್ಯವಾಗಿ ದೇಶೀಯ ಗೋವುಗಳನ್ನೇ ಕರೆತರುವುದು. ಗೋಪೂಜಾ ಅಭಿಯಾನಕ್ಕೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಸಹಾಯ ಪಡೆಬಹುದು. ಈಗಾಗಲೇ ಮುಜರಾಯಿ ಇಲಾಖೆಯ ಆಯುಕ್ತರು ಸಂಬಂಧಿಸಿದ ದೇವಾಲಯಗಳಿಗೆ ಗೋಪೂಜೆ ಕುರಿತಾದ ಆದೇಶಗಳನ್ನು ಕಳಿಸಿದ್ದು, ವಿಧಿವಿಧಾನದಲ್ಲಿ ಯಾವುದೇ ಲೋಪವಾಗದಂತೆ ಪೂಜೆ ನೆರವೇರಿಸಬೇಕೆಂದು ಸಚಿವರು ತಿಳಿಸಿದರು.

ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯ ಯಾವುದಾದರೊಂದು ದೇವಾಲಯದಲ್ಲಿ ನಡೆಯುವ ಗೋಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆದೇಶ ನೀಡಲು ಪ್ರಧಾನ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದರು.

ಅಭಿಯಾನದಲ್ಲಿ ಸಾರ್ವಜನಿಕರಿಗೆ ಗೋಪೂಜೆ ಮಹತ್ವ ಮತ್ತು ದೇಶೀಯ ಗೋವುಗಳನ್ನು ಸಾಕುವ ಕುರಿತು ತಿಳಿವಳಿಕೆ ಮೂಡಿಸಬೇಕೆಂದು ಜೊಲ್ಲೆ ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಜರಾಯಿ ಇಲಾಖೆ ಆಯುಕ್ತೆ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯದ ವಿವಿಧ ಜಿಲ್ಲೆಗಳ ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ದೇವಾಲಯ ವ್ಯವಸ್ಥಾಪನ ಮಂಡಳಿಗಳ ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.