ಹಿಂಗಾರು ಉತ್ತಮ ಆರಂಭ; ವಾಡಿಕೆ ಮಳೆ ಸಾಧ್ಯತೆ

Team Udayavani, Nov 4, 2021, 7:10 AM IST

ಹಿಂಗಾರು ಉತ್ತಮ ಆರಂಭ; ವಾಡಿಕೆ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯದೆ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಈಗ ಹಿಂಗಾರು ಮಳೆ ಆರಂಭವಾಗಿದೆ. ಆಗಮನದಲ್ಲೇ ಉತ್ತಮ ಮಳೆ ಸುರಿಸುತ್ತಿರುವ ಹಿಂಗಾರು ಮತ್ತಷ್ಟು ನಿರೀಕ್ಷೆ ಮೂಡಿಸಿದೆ.

ಕರಾವಳಿ ಪ್ರದೇಶದ ಪ್ರಮುಖ ಬೆಳೆಯಾಗಿರುವ ಅಡಿಕೆಗೆ ಹಿಂಗಾರು ಮಳೆ ಪೂರಕವಾಗಿದ್ದು ಉತ್ತಮ ಫಸಲು ನಿರೀಕ್ಷಿಸಬಹುದಾಗಿದೆ. ಭಾರತೀಯ ಹವಾಮಾನ ಇಲಾಖೆಯ ವಾಡಿಕೆಯಂತೆ ಅಕ್ಟೋಬರ್‌ 1ರಿಂದ ಹಿಂಗಾರು ಆರಂಭಗೊಂಡಿದ್ದರೂ ಅಕ್ಟೋಬರ್‌ ಕೊನೆಯ ವಾರದಲ್ಲಿ ಹಿಂಗಾರು ಮಾರುತ ಅಪ್ಪಳಿಸಿದೆ. ಮುಂದಿನ ಕೆಲವು ದಿನಗಳವರೆಗೆ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಕಳೆದ ತಿಂಗಳಲ್ಲಿ ಅಧಿಕ
ಕಳೆದ ಒಂದು ತಿಂಗಳಿನಿಂದ ಕರಾವಳಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ದ.ಕ. ಜಿಲ್ಲೆಯಲ್ಲಿ 271 ಮಿ.ಮೀ. ವಾಡಿಕೆ ಮಳೆಯಲ್ಲಿ 497 ಮಿ.ಮೀ. ಮಳೆಯಾಗಿ ಶೇ. 83, ಉಡುಪಿ ಜಿಲ್ಲೆಯಲ್ಲಿ 227 ಮಿ.ಮೀ. ವಾಡಿಕೆ ಮಳೆಯಲ್ಲಿ 398 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ. 75 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 144 ಮಿ.ಮೀ. ವಾಡಿಕೆ ಮಳೆಯಲ್ಲಿ 196 ಮಿ.ಮೀ. ಮಳೆಯಾಗಿ ಶೇ. 36 ಹೆಚ್ಚು ಮಳೆಯಾಗಿದೆ. ಇನ್ನು ಒಟ್ಟಾರೆ ಕರಾವಳಿ ವಿಭಾಗದಲ್ಲಿ 193 ಮಿ.ಮೀ. ವಾಡಿಕೆ ಮಳೆಯಲ್ಲಿ 310 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ. 61ರಷ್ಟು ಹೆಚ್ಚು ಮಳೆ ಯಾಗಿದೆ.

ವಾಡಿಕೆಯಂತೆ ಮಳೆ: ಮುನ್ಸೂಚನೆ
ರಾಜ್ಯ ಕರಾವಳಿ ಭಾಗದಲ್ಲಿ ಈ ಬಾರಿ ವಾಡಿಕೆಯಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಕೃಷಿಕರಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

ಇದನ್ನೂ ಓದಿ:ಭಾರತೀಯ ಬಾಲಕಿಯ ಭಾಷಣಕ್ಕೆ ಮೆಚ್ಚುಗೆ

ಕಳೆದ ಎರಡು ವರ್ಷ ಹಿಂಗಾರು ಅವಧಿಯಲ್ಲಿ ರಾಜ್ಯದಲ್ಲಿಯೇ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿತ್ತು. 2016ರಿಂದ 2018ರವರೆಗೆ ಸತತ ನಾಲ್ಕು ವರ್ಷ ಹಿಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಆದರೆ ಕಳೆದ ವರ್ಷ ವಾಡಿಕೆಗಿಂತ ಶೇ.27ರಷ್ಟು ಹೆಚ್ಚು ಮಳೆ ಯಾಗಿದೆ. ರಾಜ್ಯಕ್ಕೆ ಹೋಲಿಕೆ ಮಾಡಿದರೆ ಕರಾವಳಿ ಭಾಗದಲ್ಲಿ ಮಾತ್ರ ಅತ್ಯಧಿಕ ಮಳೆಯಾಗಿತ್ತು.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ ಅಕ್ಟೋಬರ್‌ ಕೊನೆಯ ವಾರದಲ್ಲಿ ರಾಜ್ಯಕ್ಕೆ ಹಿಂಗಾರು ಅಪ್ಪಳಿಸಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಅಷ್ಟೊಂದು ಉತ್ತಮವಾಗಿರಲಿಲ್ಲ. ಆದರೆ ಹಿಂಗಾರು ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮುಂದಿನ ಕೆಲ ದಿನಗಳಲ್ಲಿ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
– ಸುನಿಲ್‌ ಗವಾಸ್ಕರ್‌,
ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.