ಕೋವಿಡ್ ನಿಯಂತ್ರಣ ಮಾಡಿದ್ದೇ ಸರಕಾರದ ದೊಡ್ಡ ಸಾಧನೆ: ಸಚಿವ ಬಿ.ಸಿ. ಪಾಟೀಲ್

Team Udayavani, Nov 9, 2021, 10:57 AM IST

6bcpatil

ಗದಗ: ಕಳೆದ ಎರಡು ವರ್ಷದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇ ಸರಕಾರದ ದೊಡ್ಡ ಸಾಧನೆ. ಜೊತೆಗೆ ರಾಜ್ಯದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಕಾಂಗ್ರೆಸ್ ಬಳಿ ಕೇಳಿ ಬಿಜೆಪಿ ಜನ ಸ್ವರಾಜ್ ಕಾರ್ಯಕ್ರಮ ಮಾಡಬೇಕಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಮಂಗಳವಾರ ತಿರುಗೇಟು ನೀಡಿದರು.

ನರಗುಂದ ಪಟ್ಟಣದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ವೀರಗಲ್ಲಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಜಾಥಾ, ಅಭಿಯಾನ ನಡೆಸುವುದು ಸಾಮಾನ್ಯ. ಆ‌ ಮೂಲಕ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತದೆ. ಅಲ್ಲದೇ ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದಿದ್ದರೆ, ರಾಜ್ಯವನ್ನೇ ಮಾರಿಬಿಡುತ್ತಿದ್ದರು. ಇಲ್ಲವೇ ಹಾದಿ ಬೀದಿಯಲ್ಲೇ ಸಾಲು ಸಾಲ ಮೃತದೇಹಗಳು ಬೀಳುತ್ತಿದ್ದವು.  ಈ ಹಿಂದೆ 18 ತಿಂಗಳು ಅಧಿಕಾರ ನಡೆಸಿದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಕೊಡುಗೆ ಏನು ಎಂದು ಕುಟುಕಿದರು.

ದೇಶದ 100 ಕೋಟಿ‌ ಜನರಿಗೆ ಲಸಿಕೆ ನೀಡಿದ್ದು ಸಾಮಾನ್ಯ ಕೆಲಸವಲ್ಲ. ಬಿಜೆಪಿ ಸರಕಾರದ ಸಾಧನೆ ಪ್ರಶ್ನಿಸುವವರಿಗೆ ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಯಲ್ಲಿ ಮತ ಪೆಟ್ಟಿಗೆ ಮೂಲಕ ಉತ್ತರ ನೀಡುತ್ತೇವೆ ಎಂದರು.

ಇದನ್ನೂ ಓದಿ: ಚೆನ್ನೈನಲ್ಲಿ ಮತ್ತೆ ಮಳೆ ಅಬ್ಬರ,ನಾಲ್ವರು ಬಲಿ: ಆರೆಂಜ್ ಅಲರ್ಟ್

ಯಾರದ್ದೋ ಕುತಂತ್ರದಲ್ಲಿ ಸಿಲುಕಿದ್ದ ರಮೇಶ ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯ ದಿನಗಳು ಬರುತ್ತವೆ ಎಂದರು.

ಮೇಕೆದಾಟು ಯೋಜನೆ ಕೋರ್ಟ್ ನಲ್ಲಿದ್ದು, ಅಲ್ಲಿ ಕ್ಲಿಯರೆನ್ಸ್ ದೊರಕುತ್ತಿದ್ದಂತೆ ನಾವೇ ಮಾಡುತ್ತೇವೆ. ಈ ಬಗ್ಗೆ ಕಾಂಗ್ರೆಸ್ ನವರಿಂದ ಹೇಳಿಸಿಕೊಳ್ಳಬೇಕಿಲ್ಲ. ಇದು ತಮ್ಮದೇ ಯೋಜನೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್, ತಮ್ಮ ಅಧಿಕಾರದಲ್ಲಿ ಏಕೆ ಮಾಡಲಿಲ್ಲ ಎಂದು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಟೀಲ, ಸಂಸದ ಪಿ.ಸಿ.ಗದ್ದಿಗೌಡರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.