ವಿಜಯಪುರ-ಬಾಗಲಕೋಟೆ; ಪರಿಷತ್‌ ಟಿಕೆಟ್‌ ಯಾರಿಗೆ?


Team Udayavani, Nov 10, 2021, 4:04 PM IST

25election

ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ದ್ವಿಸದಸ್ಯರ ಸ್ಥಳೀಯ ಸಂಸ್ಥೆಯ ಮೇಲ್ಮನೆ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ.

ಮೇಲ್ಮನೆ ವಿಪಕ್ಷ ನಾಯಕರಾಗಿರುವ ಎಸ್‌.ಆರ್‌.ಪಾಟೀಲ ಹಾಗೂ ಸುನೀಲಗೌಡ ಪಾಟೀಲ ಅವಧಿ 2022, ಜ.5ರಂದು ಮುಕ್ತಾಯವಾಗಲಿದೆ. ಕಾಂಗ್ರೆಸ್‌ ತೆಕ್ಕೆಯಲ್ಲಿರುವ ತೆರವಾಗುವ ಈ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ದಿನಾಂಕ ಪ್ರಕಟಿಸಿದೆ.

ಸ್ಥಳೀಯ ಸಂಸ್ಥೆಗಳ ಈ ಕ್ಷೇತ್ರದಲ್ಲಿ ಎರಡು ಸ್ಥಾನಗಳಿರುವ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಹೀಗಾಗಿ ಕಳೆದ ಕೆಲ ತಿಂಗಳಿಂದ ಈ ಬಗ್ಗೆ ಸಣ್ಣದಾಗಿ ಇದ್ದ ರಾಜಕೀಯ ಚಟುವಟಿಕೆಗಳು ಇದೀಗ ಚುರುಕುಗೊಳ್ಳಲು ವೇದಿಕೆ ಸಿಕ್ಕಂತಾಗಿದೆ.

ಕಳೆದ 3-4 ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯವರೇ ಎರಡೂ ಸ್ಥಾನಗಳಿಗೆ ಆಯ್ಕೆ ಆಗುತ್ತಿದ್ದರು. ಹೀಗಾಗಿ 2016ರಲ್ಲಿ ನಡೆದ ಚುನಾವಣೆಯಲ್ಲಿ ನಮ್ಮ ಜಿಲ್ಲೆಗೂ ಆದ್ಯತೆ ನೀಡಬೇಕೆಂದು ಸ್ಥಳೀಯ ಆಸ್ಮಿತೆಯನ್ನು ಮುಂದಿಟ್ಟುಕೊಂಡು ವಿಜಯಪುರ ಜಿಲ್ಲೆಯಲ್ಲಿ ಸ್ವಾಭಿಮಾನ ಧ್ವನಿ ಎದ್ದಿತ್ತು. ಆದರೂ ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ಎರಡು ಕ್ಷೇತ್ರ ಎರಡು ತಲಾ ಒಬ್ಬೊಬ್ಬರನ್ನೇ ಕಣಕ್ಕಿಳಿಸಿದ್ದು, ಎರಡೂ ಪಕ್ಷಗಳು ಬಾಗಲಕೋಟೆ ಜಿಲ್ಲೆಯರಿಗೆ ಟಿಕೆಟ್‌ ನೀಡಿದ್ದವು.

ಆಗ ಹಾಲಿ ಸದಸ್ಯರಾಗಿದ್ದ ಕಾಂಗ್ರೆಸ್‌ ಪಕ್ಷ ಬಾಗಲಕೋಟೆ ಜಿಲ್ಲೆಯ ಎಸ್‌.ಆರ್‌.ಪಾಟೀಲ ಅವರಿಗೆ ಟಿಕೆಟ್‌ ನೀಡಿದ್ದರೆ, ಬಿಜೆಪಿ ಜಿ.ಎ.ನ್ಯಾಮಗೌಡ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿತ್ತು. ಇದರಿಂದ ಕೆರಳಿದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಬಸನಗೌಡ ಪಾಟೀಲ ಯತ್ನಾಳ ಪಕ್ಷೇತರರಾಗಿ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಜಯ ಸಾಧಿಸಿದ್ದರು.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ಯಾರ ಮೇಲಾದ್ರೂ ಆಪಾದನೆಯಿದ್ರೆ ತಕ್ಷಣ ಕ್ರಮ : ಈಶ್ವರಪ್ಪ 

ಆಗ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಯತ್ನಾಳ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು. ಅಲ್ಲದೇ ವಿಜಯಪುರ ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್‌ ಖಚಿತಪಡಿಸಿಕೊಂಡು ಮೇಲ್ಮನೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯತ್ನಾಳ ಅವರಿಂದ ತೆರವಾಗಿದ್ದ ಸ್ಥಾನಕ್ಕೆ 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ ಅವರ ಸಹೋದರ ಸುನೀಲಗೌಡ ಪಾಟೀಲ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.

ಆಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಕಾರಣ ಜೆಡಿಎಸ್‌ ಜತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. 8111 ಮತಗಳಲ್ಲಿ 4819 ಮತ ಪಡೆದಿದ್ದ ಮೈತ್ರಿ ಪಕ್ಷಗಳ ಕಾಂಗ್ರೆಸ್‌ ಅಭ್ಯರ್ಥಿ ಸುನೀಲಗೌಡ ಪಾಟೀಲ 2040 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ವಿಜಯಪುರ ಪಾಲಿಕೆ ಸದಸ್ಯರಾಗಿದ್ದ ಬಿಜೆಪಿ ಉಮೇದುವಾರ ಗೂಳಪ್ಪ ಶೆಟಗಾರ 2779 ಪಡೆದು ಹೀನಾಯ ಸೋಲುಂಡಿದ್ದರು.

ಕಾಂಗ್ರೆಸ್‌ನಿಂದ ಯಾರು?

ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳಿಂದ ಅ.30ರೊಳಗೆ 1 ಲಕ್ಷ ರೂ. ಶುಲ್ಕವನ್ನು ಡಿಡಿ ಸಹಿತ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅರ್ಜಿ ಆಹ್ವಾನಿಸಿತ್ತು. ಹಾಲಿ ಸದಸ್ಯರಾದ ಎಸ್‌.ಆರ್‌.ಪಾಟೀಲ, ಸುನೀಲಗೌಡ ಪಾಟೀಲ ಮಾತ್ರವಲ್ಲ ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಕಳೆದ ತಿಂಗಳು ಬಿಜೆಪಿ ಸೂಚನೆ ಮೇರೆಗೆ ಮೇಲ್ಮನೆ ಸದಸ್ಯ ಪ್ರದೀಪ ಶೆಟ್ಟರ್‌ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರು ಜಿಲ್ಲೆಗೆ ಆಗಮಿಸಿ ಮಂಡಲ ಅಧ್ಯಕ್ಷರ ಸಭೆ, ಆಕಾಂಕ್ಷಿಗಳ ಮಾಹಿತಿ ಸಂಗ್ರಹಿಸಿದ್ದಾರೆ.

ಇದಲ್ಲದೇ ನ. 21ರಂದು ಜನಸ್ವರಾಜ್‌ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ನ. 12ರಂದು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ರಾಜ್ಯ ಕಾರ್ಯದರ್ಶಿ ಎನ್‌.ರವಿಕುಮಾರ, ರಾಜ್ಯ ಕಾರ್ಯದರ್ಶಿ, ನವೀನಕುಮಾರ ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆಗ ಮೇಲ್ಮನೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಜಯಪುರ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಗೂಳಪ್ಪ ಶೆಟಗಾರ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕಾಶ ತಪಶೆಟ್ಟಿ, ಪಿ.ಎಚ್‌.ಪೂಜಾರ, ಎಸ್‌.ಪಿ.ಪಾಟೀಲ, ಅರವಿಂದ ಮಂಗಳೂರು, ಜಗದೀಶ ಗುಡಗುಂಟಿ, ಮಲ್ಲಿಕಾರ್ಜುನ ಚರಂತಿಮಠ ಇವರು ತಮ್ಮನ್ನು ಪರಿಗಣಿಸುವಂತೆ ಕೋರಿಕೆ ಸಲ್ಲಿಸಿದ್ದಾರೆ.

ನಾನು ಸೇರಿದಂತೆ ಅವಳಿ ಜಿಲ್ಲೆಯಲ್ಲಿ ಸುಮಾರು 10-12 ಜನರು ಟಿಕೆಟ್‌ ಆಕಾಂಕ್ಷಿಗಳಿದ್ದೇವೆ. ಪಕ್ಷದ ವರಿಷ್ಠರು ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಮಾಹಿತಿಯನ್ನೂ ಸಂಗ್ರಹಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ತಲೆ ಬಾಗಬೇಕು. -ಆರ್‌.ಎಸ್‌. ಪಾಟೀಲ, ಕೂಚಬಾಳ, ಜಿಲ್ಲಾಧ್ಯಕ್ಷರು, ಬಿಜೆಪಿ, ವಿಜಯಪುರ

ಅಲ್ಪಸಂಖ್ಯಾತರು ಕಾಂಗ್ರೆಸ್‌ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದು, ಉತ್ತರ ಕರ್ನಾಟಕದಲ್ಲಿ ಎಲ್ಲಿಯೂ ಮೇಲ್ಮನೆಗೆ ಅವಕಾಶ ನೀಡಿಲ್ಲ. ಹೀಗಾಗಿ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ನನಗೆ ಟಿಕೆಟ್‌ ನೀಡಿ ಎಂದು ಮನವಿ ಮಾಡಿಕೊಂಡಿದ್ದೇವೆ. -ಎಸ್‌.ಎಂ.ಪಾಟೀಲ, ಗಣಿಹಾರ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ, ವಿಜಯಪುರ

-ಜಿ.ಎಸ್‌. ಕಮತರ

 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.