ಸಿಬಿಐ Vs ಸ್ಟೇಟ್ಸ್‌

Team Udayavani, Nov 12, 2021, 3:18 AM IST

ಸಿಬಿಐ Vs ಸ್ಟೇಟ್ಸ್‌

ಸಿಬಿಐಗೆ ನೀಡಲಾಗಿದ್ದ “ಸಾಮಾನ್ಯ ಒಪ್ಪಿಗೆ’ಯನ್ನು ದೇಶದ ಕೆಲವು ರಾಜ್ಯಗಳು ಹಿಂಪಡೆದಿದ್ದು, ಇದರ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಸರ್ವೋಚ್ಚ ನ್ಯಾಯಾಲಯವೂ ಈ ಬಗ್ಗೆ ವಿಚಾರಣೆ ನಡೆಸಿದ್ದು, ಇದೊಂದು ಗಂಭೀರವಾದ ಬೆಳವಣಿಗೆ ಎಂದಿದೆ. ಹಾಗಾದರೆ, ಈ ಜನರಲ್‌ ಕನ್ಸೆಂಟ್‌ ಅಥವಾ ಸಾಮಾನ್ಯ ಒಪ್ಪಿಗೆ ಎಂದರೇನು? ರಾಜ್ಯಗಳೇಕೆ ಸಾಮಾನ್ಯ ಒಪ್ಪಿಗೆ ಹಿಂಪಡೆದಿವೆ?

ಜನರಲ್‌ ಕನ್ಸೆಂಟ್‌ ಎಂದರೇನು?
ಸಿಬಿಐನ ಮುಖ್ಯ ಕಚೇರಿ ದಿಲ್ಲಿಯಲ್ಲಿದ್ದು, ಇದು ದಿಲ್ಲಿ ವಿಶೇಷ ಪೊಲೀಸ್‌ ಕಾಯ್ದೆಯಡಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ. ಹೀಗಾಗಿ ದಿಲ್ಲಿ ಬಿಟ್ಟು ಉಳಿದೆಡೆ ಯಾವುದೇ ಪ್ರಕರ

ಣದ ತನಿಖೆ ನಡೆಸಬೇಕು ಎಂದರೂ ಸಿಬಿಐ ಆ ರಾಜ್ಯದ ಒಪ್ಪಿಗೆ ಪಡೆಯಲೇಬೇಕು. ಸಿಬಿಐ ರಚನೆಯಾದಾಗಿನಿಂದಲೂ ಬಹುತೇಕ ಎಲ್ಲ ರಾಜ್ಯಗಳು ತನಿಖೆಗಾಗಿ ಜನರಲ್‌ ಕನ್ಸೆಂಟ್‌ ಅನ್ನು ನೀಡಿದ್ದವು. ಇತ್ತೀಚೆಗೆ ಎಂದರೆ 2-3 ವರ್ಷಗಳಿಂದ 8 ಬಿಜೆಪಿಯೇತರ ರಾಜ್ಯಗಳು ಈ ಸಾಮಾನ್ಯ ಒಪ್ಪಿಗೆಯನ್ನು ವಾಪಸ್‌ ಪಡೆದಿವೆ.

ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವ ರಾಜ್ಯಗಳು ಯಾವುವು?
ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ, ಪಶ್ಚಿಮ ಬಂಗಾಲ, ಝಾರ್ಖಂಡ್‌, ಛತ್ತೀಸ್‌ಗಢ, ಕೇರಳ ಮತ್ತು ಮಿಜೋರಾಂ. ಇವುಗಳಲ್ಲಿ 2015ರಲ್ಲೇ ಮಿಜೋರಾಂ ರಾಜ್ಯವು ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆದಿತ್ತು. 2018ರಲ್ಲಿ ಉಳಿದ ರಾಜ್ಯಗಳು ಸಾಮಾನ್ಯ ಒಪ್ಪಿಗೆ ಹಿಂಪಡೆದಿವೆ.

ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವುದಕ್ಕೆ ಕಾರಣವೇನು?
ಕೇಂದ್ರ ಸರಕಾರ, ತನಿಖಾ ಸಂಸ್ಥೆಗಳನ್ನು ರಾಜಕೀಯ ಕಾರಣಕ್ಕಾಗಿ ಬಳಸಿಕೊಳ್ಳುತ್ತಿದೆ. ವಿಪಕ್ಷ ನಾಯಕರು ಮತ್ತು ಬಿಜೆಪಿಯೇತರ ರಾಜ್ಯಗಳಲ್ಲಿನ ಅಧಿಕಾರಿಗಳನ್ನು ಟಾರ್ಗೆಟ್‌ ಮಾಡಿಕೊಂಡು ದಾಳಿ, ನಡೆಸಿ ಅವರನ್ನು ಬಂಧಿಸಿ ಸಿಲುಕಿಸುತ್ತಿದೆ. ಹೀಗಾಗಿ ಸಿಬಿಐಗೆ ನೀಡಿದ್ದ ಜನರಲ್‌ ಕನ್ಸೆಂಟ್‌ ವಾಪಸ್‌ ಪಡೆದಿದ್ದೇವೆ ಎಂಬುದು ಈ ರಾಜ್ಯಗಳ ಹೇಳಿಕೆ.

ಆಗಿರುವ ಸಮಸ್ಯೆ ಏನು?
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ, ರಾಜ್ಯಗಳು ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವುದರಿಂದ ಶೇ.70ರಷ್ಟು ಕೇಸುಗಳು ಪೆಂಡಿಂಗ್‌ ಆಗಿವೆ ಎಂದಿದೆ. 2018ರಿಂದ ಇಲ್ಲಿವರೆಗೆ ಈ 8 ರಾಜ್ಯಗಳಿಗೆ 150 ಮನವಿಗಳನ್ನು ಕಳುಹಿಸಲಾಗಿದೆ. ಇದುವರೆಗೂ ಈ ರಾಜ್ಯಗಳು ಶೇ.30 ಕೇಸುಗಳ ವಿಚಾರಣೆಗೆ ಒಪ್ಪಿಗೆ ನೀಡಿವೆ ಎಂದಿತ್ತು. ಏಕೆಂದರೆ ಈ ರಾಜ್ಯಗಳಲ್ಲಿ ಯಾವುದೇ ಭ್ರಷ್ಟ ಅಧಿಕಾರಿ ಅಥವಾ ರಾಜಕಾರಣಿ ಕುರಿತಂತೆ ತನಿಖೆ ನಡೆಸಬೇಕಾದರೆ ಇವುಗಳ ಒಪ್ಪಿಗೆ ಬೇಕೇಬೇಕು.

ಕೇಂದ್ರ ಸರಕಾರಿ ನೌಕರರ ವಿರುದ್ಧ ತನಿಖೆ ನಡೆಸಬಹುದೇ?
ಇತ್ತೀಚೆಗಷ್ಟೇ ಕಲ್ಕತ್ತಾ ಹೈಕೋರ್ಟ್‌ ತೀರ್ಪೊಂದನ್ನು ನೀಡಿದ್ದು, ಕೇಂದ್ರ ಸರಕಾರಿ ನೌಕರಿಯಲ್ಲಿ ಇರುವ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಬೇಕಾದರೆ, ಸಿಬಿಐಗೆ ಆಯಾ ರಾಜ್ಯಗಳ ಒಪ್ಪಿಗೆ ಬೇಕಿಲ್ಲ ಎಂದು ಹೇಳಿದೆ. ಸದ್ಯ ಈ ತೀರ್ಪು ಪ್ರಶ್ನಿಸಿ ಪಶ್ಚಿಮ ಬಂಗಾಲ ಸರಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಇನ್ನೂ ತೀರ್ಪು ಬಂದಿಲ್ಲ. ಸದ್ಯ ಇದನ್ನೇ ದಾಳವಾಗಿ ಇರಿಸಿಕೊಂಡು ಸಿಬಿಐ ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳ ವಿರುದ್ಧದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.