ರಾಜ್ಯಕ್ಕೆ ಮುದ್ರಾದಲ್ಲಿ 4ನೇ, ಪಿಎಂ ಸನ್ನಿಧಿಯಲ್ಲಿ 5ನೇ ಸ್ಥಾನ!

ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ (ಎಸ್‌.ಎಲ್‌.ಬಿ.ಸಿ)ಯ 155ನೇ ಸಭೆ

Team Udayavani, Nov 13, 2021, 9:46 AM IST

ರಾಜ್ಯಕೆ ಮುದ್ರಾದಲ್ಲಿ 4ನೇ ಪಿಎಂ ಸನ್ನಿಧಿಯಲ್ಲಿ 5ನೇ ಸ್ಥಾನ!

ಬೆಂಗಳೂರು: ಮಂಜೂರಾತಿ ಮತ್ತು ವಿತರಣೆಯಲ್ಲಿ “ಮುದ್ರಾ” ಯೋಜನೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿ 4ನೇ ಹಾಗೂ “ಪಿಎಂ-ಸ್ವನಿಧಿ” ಯೋಜನೆಯಲ್ಲಿ 5ನೇ ಸ್ಥಾನ ಪಡೆದಿದೆ ಎಂದು ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕ ಬ್ರಿಜ್‌ ಮೋಹನ್‌ ಶರ್ಮಾ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ “ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ” (ಎಸ್‌.ಎಲ್‌ .ಬಿ.ಸಿ)ಯ 155ನೇ ಸಭೆಯಲ್ಲಿ ಅವರು ಮಾತನಾಡಿದರು.

ಈ ಸಭೆಯಲ್ಲಿ 2021ರ ಸೆಪ್ಟೆಂಬರ್‌ ವರೆಗಿನ ತ್ರೈಮಾಸಿಕ ಪ್ರಗತಿ ಪರಿಶೀಲನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಬ್ರಿಜ್‌ ಮೋಹನ್‌ ಶರ್ಮಾ, ಕೇಂದ್ರ ಸರ್ಕಾರ ಅತ್ಮ ನಿರ್ಭರ ಅಭಿಯಾನದಡಿ ಇಸಿಜಿಎಲ್‌ಎಸ್‌ 1.0 ರಿಂದ ಇಸಿಜಿಎಲ್‌ಎಸ್‌ 4.0, ಪಿಎಂ-ಸ್ವನಿಧಿ ಪ್ರಥಮ ಹಾಗೂ ಎರಡನೇ ಹಂತ, ಪಿಎಂಎಫ್‌ಎಂಇ, ಒಂದು ಜಿಲ್ಲೆ ಒಂದು ಉತ್ಪನ್ನ, ಕೃಷಿ ಮೂಲಸೌಕರ್ಯ ನಿಧಿ ಯೋಜನೆ, ಪಶುಸಂಗೋಪನೆ ಮೂಲಸೌಕರ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

ಇದನ್ನೂ ಓದಿ:- ಪ್ರಧಾನಿ ಮೋದಿ 4 ಗಂಟೆಯ ಕಾರ್ಯಕ್ರಮಕ್ಕೆ 23 ಕೋಟಿ ರೂ ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

ಈ ಯೋಜನೆಗಳ ನಿಗದಿತ ಗುರಿ ಸಾಧಿಸುವಂತೆ ಶರ್ಮಾ ಎಲ್ಲಾ ಬ್ಯಾಂಕುಗಳಿಗೆ ಮನವಿ ಮಾಡಿದರು. ಡಿಜಿಟಲ್‌ ಫೈನಾನ್ಷಿಯಲ್‌ ಸರ್ವಿಸಸ್‌ (ಡಿಎಫ್‌ ಎಸ್‌) 2021ರ ನ.8ರವರೆಗೆ ಜಿಲ್ಲಾ ಮಟ್ಟದಲ್ಲಿ ಮೂರು ತಿಂಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಮಂಜೂರಾತಿ ಮತ್ತು ವಿತರಣೆಯಲ್ಲಿ “ಮುದ್ರಾ” ಯೋಜನೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿ 4ನೇ ಹಾಗೂ “ಪಿಎಂ-ಸ್ವನಿಧಿ” ಯೋಜನೆಯಲ್ಲಿ 5ನೇ ಸ್ಥಾನ ಪಡೆದಿದೆ ಎಂದು ಮಾಹಿತಿ ನೀಡಿದರು.

” ಫ್ರೂಟ್ಸ್” ಪೋರ್ಟಲ್‌ ಫ್ರೂಟ್ಸ್ ಟೀಮ್‌, ಇ-ಆಡಳಿತ ಕಾರ್ಯಾಗತಗೊಳಿಸುವ ವಿಚಾರದಲ್ಲಿ ಬಹುತೇಕ ಬ್ಯಾಂಕುಗಳು ಅಂತಿಮ ಹಂತದಲ್ಲಿವೆ. ಫ್ರೂಟ್ಸ್ ಪೋರ್ಟಲ್‌ ಅನುಷ್ಠಾನಕ್ಕೆ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳನ್ನು ಕಂದಾಯ ಇಲಾಖೆ ನ.1 ರಿಂದ ಸಜ್ಜುಗೊಳಿಸಿದೆ ಎಂದು ಶರ್ಮಾ ಮಾಹಿತಿ ನೀಡಿದರು. 2021-22ನೇ ಸಾಲಿನ ಆದ್ಯತಾ ವಲಯದ ಸಾಲಗಳ ಒಟುx 2,92,392 ಕೋಟಿ ರೂ. ಗುರಿ ಪೈಕಿ 2021 ರ ಸೆಪ್ಟೆಂಬರ್‌ ತ್ರೈಮಾಸಿಕದವರೆಗೆ 93 ಸಾವಿರ ಕೋಟಿ (ಶೇ.31.96) ಗುರಿ ಸಾಧಿಸಲಾಗಿದೆ.

ಒಟುx ಆದ್ಯತಾ ವಲಯದ ಸಾಲಗಳಲ್ಲಿ ಕೃಷಿ ಶೇ. 40.96, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಶೇ. 30.80 ಗುರಿ ಸಾಧಿಸಲಾಗಿದೆ. ಆಜಾದಿ ಕಾ ಅಮೃತ್‌ ಮಹೋತ್ಸವ ಅಡಿಯಲ್ಲಿ ಉಳಿತಾಯ ಮತ್ತು ಚಾಲ್ತಿ ಖಾತೆಗಳನ್ನು ಶೇ 100ರಷ್ಟು ಡಿಜಿಟಲ್‌ ಸೇವೆಗೆ ಸಾಧ್ಯವಾಗಿಸಿದ ರಾಯಚೂರು ಜಿಲ್ಲೆಯ ಎಲ್ಲಾ ಬ್ಯಾಂಕುಗಳಿಗೆ ಶರ್ಮಾ ಅಭಿನಂದನೆ ಸಲ್ಲಿಸಿದರು.

ಅಕ್ಟೋಬರ್‌ 13 ರಿಂದ ನಡೆದ ರಾಜ್ಯವ್ಯಾಪಿ ಸಾಲ ಅರಿವು ಕಾರ್ಯಕ್ರಮದಡಿ 27 ಜಿಲ್ಲೆಗಳಲ್ಲಿ ಎಲ್ಲಾ ಲೀಡ್‌ ಬ್ಯಾಂಕುಗಳ ಮೂಲಕ 5871.98 ಕೋಟಿ ರೂ. ಮೊತ್ತದ ವಿವಿಧ 1.54 ಲಕ್ಷ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ಶರ್ಮಾ ತಿಳಿಸಿದರು. ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪ್ರಾದೇಶಿಕ ನಿರ್ದೇಶಕ ಆರ್‌. ಗುರುಮೂರ್ತಿ, ನಬಾರ್ಡ್‌ ಚೀಫ್‌ ಜನರಲ್‌ ಮ್ಯಾನೇಜರ್‌ ನೀರಜ್‌ ಕುಮಾರ್‌ ವರ್ಮಾ ಸೇರಿದಂತೆ ವಿವಿಧ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.