ಅಕ್ಷರ ಸಂತ ಹಾಜಬ್ಬನ ಶಾಲೆಗೆ ದೇಣಿಗೆ ನೀಡಿದ ತುಳಸಿ ಗೌಡ

Team Udayavani, Nov 14, 2021, 6:52 AM IST

ಹರೇಕಳ: ಅಕ್ಷರಸಂತ – ವೃಕ್ಷಮಾತೆ ಸಮಾಗಮ

ಉಳ್ಳಾಲ: ಅಕ್ಷರ ಸಂತ ಹಾಜಬ್ಬ ಅವರನ್ನು ಭೇಟಿಯಾಗಬೇಕು, ಅವರ ಶಾಲೆಗೆ ಕಿಂಚಿತ್ತಾದರೂ ದೇಣಿಗೆ ನೀಡಬೇಕು…

ಇದು ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ 82ರ ಹಿರಿಯಜ್ಜಿ ಅಂಕೋಲಾದ ತುಳಸಿ ಗೌಡ ಅವರ ಮನದಿಚ್ಛೆಯಾಗಿತ್ತು. ಅದರಂತೆ ಶನಿವಾರ ಬೆಳಗ್ಗೆ ಹರೇಕಳ ಹಾಜಬ್ಬ ಆವರ ಮನೆಗೆ ತನ್ನ ಕುಟುಂಬದ ಮೂವರು ಸದಸ್ಯರೊಂದಿಗೆ ಆಗಮಿಸಿದ ತುಳಸಿ ಅವರು ಹಾಜಬ್ಬರ ಮನೆಗೆ ಬಳಿಕ ಹಾಜಬ್ಬರ ಸರಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಕಳೆದುದಲ್ಲದೆ ಕಿಂಚಿತ್‌ ದೇಣಿಗೆ ನೀಡುವ ಮೂಲಕ ಧನ್ಯತೆ ಮೆರೆದರು.

ಪದ್ಮಶ್ರೀ ಸ್ವೀಕಾರಕ್ಕೆಂದು ದಿಲ್ಲಿಗೆ ತೆರಳುವಾಗ ಹಾಜಬ್ಬರನ್ನು ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದ ತುಳಸಿ ಅವರಿಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ದಿಲ್ಲಿಯಲ್ಲಿ ಹಾಜಬ್ಬ ಹೊಟೇಲ್‌ನಲ್ಲಿ ತಂಗಿದ್ದರೆ, ತುಳಸಿ ಕರ್ನಾಟಕ ಭವನದಲ್ಲಿ ತಂಗಿದ್ದರು. ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಆಗಮಿಸಿದರೆ ತುಳಸಿ ಗೌಡ ದಿಲ್ಲಿಯಲ್ಲಿ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಿಂದ ಅಂಕೋಲಾಕ್ಕೆ ಹೋಗುವ ಮೊದಲು ಹಾಜಬ್ಬರ ಶಾಲೆಗೆ ಭೇಟಿ ನೀಡುವ ಇಚ್ಛೆ ವ್ಯಕ್ತಪಡಿಸಿದ್ದರು. ಶುಕ್ರವಾರ ಮಂಗಳೂರಿಗೆ ತಲುಪಿ ಶನಿವಾರ ಬೆಳಗ್ಗೆ 9.30ಕ್ಕೆ ಹಾಜಬ್ಬರ ಮನೆಗೆ ಭೇಟಿ ನೀಡಿದರು.

ಹರೇಕಳದ ನ್ಯೂಪಡು³ ಮನೆಗೆ ಬಂದ ಪದ್ಮಶ್ರೀ ತುಳಸಿ ಗೌಡರನ್ನು ಹಾಜಬ್ಬರು ಸ್ವಾಗತಿಸಿ ಕಾರಿನಿಂದ ಸ್ವತಃ ತಾವೇ ಇಳಿಸಿ ಮನೆಯೊಳಗೆ ಕರೆದುಕೊಂಡು ಹೋಗಿ ಗೌರವಿಸಿದರು. ಬೆಳಗ್ಗಿನ ಉಪಾಹಾರ ನೀಡಿ ಶಾಲೆ ಆರಂಭದಿಂದ ಪದ್ಮಶ್ರೀ ಪುರಸ್ಕಾರ ಸ್ವೀಕಾರ ವರೆಗಿನ ವಿಚಾರಗಳನ್ನು ತಿಳಿಸಿದರು. ವಿವಿಧ ಸಂಘ-ಸಂಸ್ಥೆಗಳು ಮತ್ತು ಸರಕಾರದಿಂದ ಲಭಿಸಿದ ಗೌರವದ ಫಲಕಗಳನ್ನು ತೋರಿಸಿದರು.

ಅತ್ಯಪೂರ್ವ ಕ್ಷಣ:

ತುಳಸಿ ಗೌಡ ನೀಡಿದ ದೇಣಿಗೆ ಸ್ವೀಕರಿಸಿ ಮಾತನಾಡಿದ ಹಾಜಬ್ಬ, ನನಗೆ ಇದು ಅತ್ಯಪೂರ್ವ ಕ್ಷಣ. ಹಿರಿಯಾಕೆ ತುಳಸಿ ಗೌಡರು ನಮ್ಮ ಮನೆ ಹಾಗೂ ಶಾಲೆಗೆ ಬಂದಿರುವುದು ಸಂತಸ ತಂದಿದೆ. ಅವರು ನೀಡಿದ ಮೊತ್ತವನ್ನು ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಇಲ್ಲಿಗೆ ಪದವಿ ಪೂರ್ವ ಕಾಲೇಜು ಮಂಜೂರುಗೊಳ್ಳುವ ಆಶಯ ಬೇಗನೆ ಈಡೇರಲಿ ಎಂದರು.

“ವೃಕ್ಷಮಾತೆ’ಯ ಆಶೀರ್ವಾದ :

ಶಾಲೆಗೆ ಆಗಮಿಸಿದ ತುಳಸಿ ಗೌಡ ಅವರಿಗೆ ವಿದ್ಯಾರ್ಥಿಗಳು ಸಂಭ್ರಮದ ಸ್ವಾಗತ ನೀಡಿದರು. ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠ ಹಾಗೂ ಭಕ್ತರು ಸಂಗ್ರಹಿಸಿ ನೀಡಿದ್ದ ದೇಣಿಗೆಯಲ್ಲಿ ಒಂದು ಪಾಲನ್ನು ತುಳಸಿ ಗೌಡ ಅವರಿಗೆ ಹಾಜಬ್ಬರ ಶಾಲೆಗೆ ದೇಣಿಗೆಯಾಗಿ ನೀಡಿದಾಗ ಹಾಜಬ್ಬ ಸ್ವೀಕರಿಸಿ ಕಾಲು ಮುಟ್ಟಿ ನಮಸ್ಕರಿಸಿದರು. ತುಳಸಿ ಅವರು ಹಾಜಬ್ಬರ ತಲೆಗೆ ಕೈಇರಿಸಿ ಆಶೀರ್ವದಿಸಿದರು. ಬಳಿಕ ಮಾತನಾಡಿದ ತುಳಸಿ, ಶಾಲೆಗೆ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಸರಕಾರ ಹಾಜಬ್ಬರ ಪದವಿ ಪೂರ್ವ ಕಾಲೇಜು ತೆರೆಯುವ ಆಸೆಯನ್ನು ಈಡೇರಿಸಬೇಕು ದಾನಿಗಳು ಅವರನ್ನು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಪರಿಸರ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.