ಡಾ| ಸ್ವಾಮಿನಾಥನ್‌ ವರದಿ ಜಾರಿಗೆ ರೈತ ಸಂಘ ಒತ್ತಾಯ

Team Udayavani, Nov 15, 2021, 1:42 PM IST

ಡಾ| ಸ್ವಾಮಿನಾಥನ್‌ ವರದಿ ಜಾರಿಗೆ ರೈತ ಸಂಘ ಒತ್ತಾಯ

ದಾವಣಗೆರೆ: ಕೇಂದ್ರ ಸರ್ಕಾರ ಆದಷ್ಟು ಬೇಗ ಸ್ವಾಮಿನಾಥನ್‌ ವರದಿ ಜಾರಿಗೆ ತರಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಒತ್ತಾಯಿಸಿದರು.

ತಾಲೂಕಿನ ನೀರ್ಥಡಿ ಗ್ರಾಮದಲ್ಲಿ ಭಾನುವಾರ ರೈತ ಸಂಘ ಮತ್ತು ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಬದ್ರಿ ಸ್ವಾಮಿನಾಥನ್‌ ವರದಿ ಜಾರಿಗೆ ತರಲಾಗುವುದು ಎಂಬ ಭರವಸೆ ನೀಡಿತ್ತು. ಆಧಿಕಾರಕ್ಕೆ ಬಂದು ಎಂಟು ವರ್ಷಗಳೇ ಕಳೆದರೂ ಸ್ವಾಮಿನಾಥನ್‌ ವರದಿ ಜಾರಿಗೆ ತಂದಿಲ್ಲ. ಈಗಲಾದರೂ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಒಂದೊಮ್ಮೆ ಸ್ವಾಮಿನಾಥನ್‌ ವರದಿ ಜಾರಿಗೆ ಬಂದಿದ್ದಲ್ಲಿ ರೈತರು ಬೆಳೆದಂತಹ ಮುಖ್ಯ ಬೆಳೆಗಳಿವೆ ಉತ್ತಮ, ವೈಜ್ಞಾನಿಕ ಧಾರಣೆ ದೊರೆಯುತ್ತಿತ್ತು. ಸಾಕಷ್ಟು ಅನುಕೂಲ ಆಗುತ್ತಿತ್ತು. ಆದರೆ, ವರದಿ ಜಾರಿಯಾಗದ ಕಾರಣ ರೈತರು ಬೆಳೆದಂತಹ ಬೆಳೆಗಳಿಗೆ ಸಮರ್ಪಕವಾಗಿ ಸರಿಯಾದ ಬೆಲೆ ದೊರೆಯದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ವಾಮಿನಾಥನ್‌ ವರದಿ ಜಾರಿಗೆ ತರದ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಂಪನಿ ಖರೀದಿದಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ರೈತರ ಬೆಳೆಗಳಿಗೆ ಬೆಲೆ ಸಿಗದಂತೆ ಮಾಡಲಾಗುತ್ತಿದೆ. ಈ ಸಮಸ್ಯೆಯಿಂದ ರೈತರು ಹೊರ ಬರುವಂತಾಗಲು ಕನಿಷ್ಟ ಬೆಂಬಲ ಬೆಲೆಗೆ ಕಾಯ್ದೆ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಸಂಘಟಿತ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ದಾವಣಗೆರೆ ತಾಲೂಕು ಸಂಘದ ಅಧ್ಯಕ್ಷ ನೀರ್ಥಡಿ ತಿಪ್ಪೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್‌, ಕೆಂಚಮ್ಮನಹಳ್ಳಿ ಹನುಮಂತಪ್ಪ, ತುಂಬಿಗೆರೆ ನಾಗರಾಜ್‌, ನೀರ್ಥಡಿ ಭೀಮಣ್ಣ, ಬಸವರಾಜಪ್ಪ, ಹುಚ್ಚವ್ವನಹಳ್ಳಿ ಸಿದ್ದಪ್ಪನಾಯ್ಕ, ಹುಚ್ಚವ್ವನಹಳ್ಳಿ ಪ್ರಕಾಶ್‌, ನೀರ್ಥಡಿ ಅಜ್ಜಯ್ಯ, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಇತರರು ಇದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.