ಅಂತೂ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ರವಿ ವರ್ಗಾವಣೆ

Team Udayavani, Nov 15, 2021, 8:35 PM IST

ಅಂತೂ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ರವಿ ವರ್ಗಾವಣೆ

ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ಡಾ. ರವಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಚಾಮರಾಜನಗರ: ಅಂತು ಇಂತೂ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಗೆ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ನೇಮಕಗೊಂಡಿದ್ದಾರೆ.

ಚಾರುಲತಾ ಅವರು 2012ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದರು. ಅಕ್ಟೋಬರ್ 18ರವೆರಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದರು. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದರು. ಸೋಮವಾರ ಅವರನ್ನು ಚಾಮರಾಜನಗರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಜಿಲ್ಲೆಯಿಂದ ವರ್ಗಾವಣೆಗೊಂಡ ಎಂ.ಆರ್. ರವಿ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ.

ಅಧಿಕಾರ ಸ್ವೀಕಾರ: ಸೋಮವಾರ ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲೇ ಚಾರುಲತಾ ಸೋಮಲ್ ಅವರು ನಗರಕ್ಕೆ ಆಗಮಿಸಿ, ಸೋಮವಾರ ಸಂಜೆ 7.15ರಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಜಿಲ್ಲೆಯಿಂದ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಗೆ ನಗರದ ಜಿಲ್ಲಾಸ್ಪತ್ರೆಯ ಆಕ್ಸಿಜನ್ ದುರಂತ ಸಂಭವಿಸುವ ಮುಂಚಿನ ದಿನಗಳಲ್ಲೇ ಅಂದರೆ ಫೆ. 13ರಂದು ವರ್ಗಾವಣೆಯಾಗಿತ್ತು. ಆಗ ವರ್ಗಾವಣೆಗೊಂಡಿದ್ದ ಡೀಸಿ ಸತೀಶ್ ಅವರು ಅಧಿಕಾರ ಸ್ವೀಕರಿಸಲು ನಗರಕ್ಕೆ ಬರುತ್ತಿರುವಾಗ ಮಾರ್ಗಮಧ್ಯದಲ್ಲೇ ವರ್ಗಾವಣೆ ರದ್ದಾಗಿತ್ತು.

ಇದನ್ನೂ ಓದಿ:ವಾಕಿಂಗ್ ಹೋಗುತ್ತಿದ್ದಾಗ ನಟಿಗೆ ಹಲ್ಲೆ; ಮೊಬೈಲ್ ಕಿತ್ತುಕೊಂಡು ಪರಾರಿ

ಇದೇ ವರ್ಷದ ಮೇ 2ರ ರಾತ್ರಿ 10.30ರಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 35ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದರು. ಈ ದುರಂತಕ್ಕೆ ಜಿಲ್ಲಾಧಿಕಾರಿ ಡಾ. ರವಿ ಅವರ ನಿರ್ಲಕ್ಷ್ಯವೇ ಕಾರಣ ಎಂಬ ವ್ಯಾಪಕ ಆರೋಪ ಕೇಳಿಬಂದಿತ್ತು. ಅವರನ್ನು ವರ್ಗಾವಣೆ ಮಾಡಬೇಕೆಂದು ಅನೇಕ ಪ್ರತಿಭಟನೆಗಳು ನಡೆದಿದ್ದವು. ತೀವ್ರ ರೀತಿಯಲ್ಲಿ ಸಾರ್ವಜನಿಕರು ಆಕೊ್ರೀಶ ವ್ಯಕ್ತಪಡಿಸಿದ್ದರು. ಆದರೂ ಸರ್ಕಾರ ಅವರ ವರ್ಗಾವಣೆ ಮಾಡಿರಲಿಲ್ಲ.

ಅನಂತರ ಮೇ 19ರಂದು ಅವರ ವರ್ಗಾವಣೆಯಾಗಿದೆ ಎನ್ನಲಾಗಿತ್ತು. ಮೇ 20ರಂದು ವರ್ಗಾವಣೆ ರದ್ದಾಗಿದೆ ಎಂದೂ ಇದರಲ್ಲಿ ಪ್ರಮುಖ ರಾಜಕಾರಣಿಯೊಬ್ಬರ ಪಾತ್ರವಿದೆ ಎಂದು ಹೇಳಲಾಗಿತ್ತು. ಎರಡು ಬಾರಿ ವರ್ಗಾವಣೆಯಾಗಿದ್ದರೂ, ಅದನ್ನು ರದ್ದುಮಾಡಿಸಿಕೊಂಡು ಉಳಿಯಲು ಪ್ರಭಾವಿ ರಾಜಕಾರಣಿಯೊಬ್ಬರ ಕೃಪಾ ಕಟಾಕ್ಷವೇ ಕಾರಣ ಎಂದು ಹೇಳಲಾಗಿತ್ತು.

ಸೋಮವಾರ ಮೂರನೇ ಬಾರಿ ಅವರ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರು ಅಧಿಕಾರವನ್ನೂ ಸ್ವೀಕರಿಸಿರುವುದರಿಂದ ಮತ್ತೆ ಅವರ ವರ್ಗಾವಣೆ ರದ್ದಾಗುವುದಿಲ್ಲ ಎಂಬುದು ಖಚಿತವಾದಂತಾಗಿದೆ.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.