ದೇವರು ಕಾಲೋನಿಯಲ್ಲಿ ಸ್ವಚ್ಛತಾ ಅಭಿಯಾನ

Team Udayavani, Nov 16, 2021, 5:52 PM IST

23clean

ರಾಯಚೂರು: ನಗರದ ಕೆಲವು ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು, ಸಮಾನ ಮನಸ್ಕರು ಒಗ್ಗೂಡಿ “ಸ್ವಚ್ಛ-ಸುಂದರ ಶಾಲೆ, ನಮ್ಮನಿಮ್ಮೆಲ್ಲರ ಹೊಣೆ’ ಎಂಬ ಧ್ಯೇಯವಾಕ್ಯದೊಂದಿಗೆ “ಸಂಕಲ್ಪ’ ಹೆಸರಿನ ಶಾಲಾ ಸ್ವಚ್ಛತಾ ಅಭಿಯಾನ ನಡೆಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಲಯನ್ಸ ಕ್ಲಬ್‌, ಗ್ರೀನ್‌ ರಾಯಚೂರು, ಶಿಲ್ಪಾ ಫೌಂಡೇಶನ್‌, ಲಿಯೋ ಕ್ಲಬ್‌, ಪರ್ಯಾವರಣ ಸಂರಕ್ಷಣೆ ಗತಿವಿ ಸಹಯೋಗದಲ್ಲಿ ನಗರದ ದೇವರು ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವತ್ಛತಾ ಕಾರ್ಯ ನಡೆಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ್‌ ರಮೇಶ್‌ ಅಪ್ಪಾಸಾಹೇಬ್‌ ಮಾತನಾಡಿ, ಲಾಕ್‌ ಡೌನ್‌ನಲ್ಲಿ ಎಲ್ಲ ಶಾಲೆಗಳು ಸಂಪೂರ್ಣ ಮುಚ್ಚಿದ್ದರಿಂದ ಗಿಡ-ಗಂಟಿ ಬೆಳೆದಿದ್ದು, ತ್ಯಾಜ್ಯ ಸಂಗ್ರಹಗೊಂಡಿದೆ. ಮಕ್ಕಳಿಗೆ ಓದುವ ವಾತಾವರಣ ಇಲ್ಲದಾಗಿದೆ. ಇಂಥ ವೇಳೆ ಎಲ್ಲರೂ ಸೇರಿ ಶಾಲಾವರಣ ಸ್ವಚ್ಛತೆ ಮಾಡಿದ್ದು ಶ್ಲಾಘನೀಯ ಕೆಲಸ. ಸಸಿ ನೆಟ್ಟು ಅದರ ಪೋಷಣೆ ಜವಾಬ್ದಾರಿ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳಿಗೆ ನೀಡಿರುವುದು ಉತ್ತಮ ನಿರ್ಧಾರ ಎಂದರು.

ಲಯನ್ಸ್ ಕ್ಲಬ್‌ ಅಧ್ಯಕ್ಷ ಡಾ| ಮಹಾಲಿಂಗಪ್ಪ ಮಾತನಾಡಿ, ನಾನು ಕೂಡ ಸರ್ಕಾರಿ ಶಾಲೆಯಲ್ಲಿಯೇ ಓದಿದ್ದೇನೆ. ಆರೋಗ್ಯ ರಕ್ಷಣೆ, ಪೌಷ್ಟಿಕ ಆಹಾರ ಸೇವನೆ, ಶಾಲೆ-ಮನೆ-ಬೀದಿಗಳಲ್ಲಿ ಸ್ವತ್ಛತೆ ಕಾಪಾಡುವುದು ಅಗತ್ಯ. ಎಲ್ಲರೂ ಮುಂದೆ ಇಂಥ ಸಾಮಾಜಿಕ ಕಾರ್ಯ ಮಾಡಬೇಕು ಎಂದರು.

ಗ್ರೀನ್‌ ರಾಯಚೂರು ಕಾರ್ಯದರ್ಶಿ ರಾಜೇಂದ್ರಕುಮಾರ್‌ ಶಿವಾಳೆ ಮಾತನಾಡಿ, ಲಾಕ್‌ಡೌನ್‌ ಬಳಿಕ ಸರ್ಕಾರಿ ಶಾಲೆಗಳ ಆವರಣ ಅಶುಚಿತ್ವದ ಸಮಸ್ಯೆ ತಲೆದೂರಿರುವ ಕಾರಣ ಶಾಲೆಗಳನ್ನು ಸ್ವತ್ಛಗೊಳಿಸುವ ಜೊತೆಗೆ ಸಸಿ ನೆಡಲಾಗುವುದು. ಶಾಲಾ ಕಟ್ಟಡಗಳಿಗೆ ಸುಣ್ಣ-ಬಣ್ಣ ಮಾಡಿಸುವ ಸಂಕಲ್ಪ ಮಾಡಿದ್ದೇವೆ. ವಾರಕ್ಕೊಂದು ಶಾಲೆಯಂತೆ ಬರುವ ದಿನಗಳಲ್ಲಿ ನಗರದ ಎಲ್ಲ 10-15 ಶಾಲೆಗಳಲ್ಲಿ ಅಭಿಯಾನ ನಡೆಸಲಾಗುವುದು ಎಂದರು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರತಿಜ್ಞಾವಿಧಿ ಬೋ ಧಿಸಲಾಯಿತು. ಈ ವೇಳೆ ಲಯನ್ಸ್‌ ಕ್ಲಬ್‌ ಹಿರಿಯ ಸದಸ್ಯ ಗೋವಿಂದರಾಜ, ಹಿರಿಯ ಶಸ್ತ್ರಚಿಕಿತ್ಸಕ ಡಾ| ಎಂ.ಕೆ. ರಾಮಕೃಷ್ಣ, ಬಿಇಒ ಚಂದ್ರಶೇಖರ್‌ ದೊಡ್ಡಮನಿ, ಪ್ರಕಾಶ್‌ ಕುಲಕರ್ಣಿ, ಉದಯ್‌ ಕಿರಣ, ಪಿಯುಶ್‌ ಜೈನ್‌, ಉಪನ್ಯಾಸಕ ವಿಜಯ್‌ ಸರೋದೆ, ಅಮಿತ್‌ ದಂಡಿನ, ವಿನೋದ್‌, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ರಾಜ್ಯ ಸದಸ್ಯರಾದ ಸರಸ್ವತಿ ಕಿಲಕಿಲೆ, ಶಿಕ್ಷಕಿ ಎಂ. ಸರೋಜಾ, ಶ್ರೀದೇವಿ ಇತರರಿದ್ದರು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.