ತೊಗರಿಗೆ ಕಂಟಕವಾದ ವಾಯುಭಾರ

ತೊಗರಿ ವಾಣಿಜ್ಯ ಬೆಳೆ ಎನ್ನುವುದು ಎಷ್ಟು ಸತ್ಯವೋ ಖರ್ಚಿನ ಬೆಳೆ ಎನ್ನುವುದು ಅಷ್ಟೇ ಸತ್ಯ.

Team Udayavani, Nov 17, 2021, 5:48 PM IST

ತೊಗರಿಗೆ ಕಂಟಕವಾದ ವಾಯುಭಾರ

ರಾಯಚೂರು: ಕೇರಳ, ತಮಿಳುನಾಡಿನಲ್ಲಿ ಸಂಭವಿಸಿದ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಅಷ್ಟಾಗಿ ಬೀರದಿದ್ದರೂ ಸತತ ಮೂರ್‍ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಇರುವುದು ತೊಗರಿಗೆ ಕಂಟಕವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಹಿಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿದಿದ್ದು, ಬೆಳೆಗಳು ಉತ್ತಮ ರೀತಿಯಲ್ಲಿವೆ. ಹಿಂಗಾರು ಮಳೆ ತುಸು ಹೆಚ್ಚಾಗಿದ್ದರಿಂದ ಅಲ್ಲಲ್ಲಿ ತೊಗರಿ, ಹತ್ತಿ ಬೆಳೆಗೆ ಸ್ವಲ್ಪ ಕಂಟಕ ಎನಿಸಿದರೂ ಇಳುವರಿ
ಚೆನ್ನಾಗಿ ಬರಲು ನೆರವಾಯಿತು.

ಆದರೆ, ಕಳೆದ ಮೂರ್‍ನಾಲ್ಕು ದಿನಗಳಿಂದ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲೂ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು. ಜತೆಗೆ ಆಗಾಗ ತುಂತುರು ಮಳೆ ಸುರಿದಿದೆ. ಮಂಗಳವಾರ ಕೂಡ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಈಗ ಎಲ್ಲೆಡೆ ಭತ್ತ ಕಟಾವು ನಡೆದಿದ್ದರೆ, ಕೆಲವೆಡೆ ಇನ್ನೂ ಮಾಡಲಾಗುತ್ತಿದೆ. ಅದರ ಜತೆಗೆ ಹತ್ತಿ ಬಿಡಿಸಲಾಗುತ್ತಿದೆ. ಬಹುತೇಕ ಕಡೆ ಮೊದಲ ಹಂತದ ಹತ್ತಿ ಬಿಡಿಸಿದ್ದು, ಎರಡನೇ ಹಂತ ಬಿಡಿಸಲಾಗುತ್ತಿದೆ.

ಇಂತಹ ವೇಳೆ ಮಳೆ ಸುರಿದ ಪರಿಣಾಮ ಹತ್ತಿ ಕೆಂಪಾಗಲಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿಯಲಿದೆ. ಕೂಲಿಯವರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸಾಕಷ್ಟು ಜನ ಹತ್ತಿ ಬಿಡಿಸಿಲ್ಲ. ಮಂಗಳವಾರ ಮಧ್ಯಾಹ್ನ ಸುಮಾರು ಅರ್ಧ ಗಂಟೆ ಮಳೆ ಸುರಿದಿದ್ದು, ಹತ್ತಿ ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಇನ್ನೂ ಭತ್ತ ಕಟಾವು ಮಾಡಿ ಸಂಗ್ರಹಿಸಿಕೊಂಡಿರುವ ರೈತರಿಗೂ ಅಕಾಲಿಕ ಮಳೆ ಸಮಸ್ಯೆ ಉಂಟು ಮಾಡಿದೆ. ಭತ್ತ ತೇವಗೊಂಡರೆ ಮೊಳಕೆ ಬರುತ್ತದೆ. ಇನ್ನೂ ಭತ್ತ ಕಟಾವಾಗಿರದಿದ್ದರೆ ತೆನೆಗಳೆಲ್ಲ ನೆಲಕ್ಕೆ ಬಾಕಿ ಭತ್ತ ಹಾಳಾಗುತ್ತಿದೆ. ಅದೃಷ್ಟವಶಾತ್‌ ಜಿಲ್ಲೆಯ ಕೆಲವೆಡೆ ಮಾತ್ರ ಮಳೆ ಸುರಿದಿದ್ದು, ಎಲ್ಲಿಯೂ ಭಾರೀ ಪ್ರಮಾಣದ ಹಾನಿ ಉಂಟಾಗಿಲ್ಲ.

ತೊಗರಿಗೆ ಕೀಟಬಾಧೆ: ತೊಗರಿ ವಾಣಿಜ್ಯ ಬೆಳೆ ಎನ್ನುವುದು ಎಷ್ಟು ಸತ್ಯವೋ ಖರ್ಚಿನ ಬೆಳೆ ಎನ್ನುವುದು ಅಷ್ಟೇ ಸತ್ಯ. ಮೂರು ಬಾರಿ ಕ್ರಿಮಿನಾಶಕ ಸಿಂಪರಣೆ ಮಾಡಬೇಕು. ಅಂತಹದರಲ್ಲಿ ವಾತಾವರಣ ಕೈ ಕೊಟ್ಟರೆ ಖರ್ಚು ಇನ್ನಷ್ಟು ಹೆಚ್ಚಾಗುತ್ತದೆ. ಈಚೆಗೆ ವಾತಾವರಣ ತಂಪಾಗಿರುವ ಕಾರಣ ತೊಗರಿಗೆ ಹಸಿರುಳು ಕಾಟ ಶುರುವಾಗಿದೆ. ಇದರಿಂದ ಮತ್ತೂಮ್ಮೆ ಕ್ರಿಮಿನಾಶಕ ಸಿಂಪರಣೆ ಮಾಡಬೇಕು. ಈಗ ತೊಗರಿ ಕಾಯಿ ಕಟ್ಟಿದ್ದು, ಇಂತಹ ವೇಳೆ ಈ ಕೀಟಗಳು
ತೊಗರಿಯನ್ನೆಲ್ಲ ತಿಂದು ಹಾಕುತ್ತವೆ.ಇನ್ನೂ ಹೆಚ್ಚಿನ ಸಮಸ್ಯೆ ಎದುರಾಗಿಲ್ಲ. ಒಂದು ವೇಳೆ ಇದೇ ಪರಿಸ್ಥಿತಿ ಮುಂದುವರಿದರೆ ತೊಗರಿ ಬೆಳೆಗಾರರು ನಷ್ಟಕ್ಕೀಡಾಬೇಕಾಗುತ್ತದೆ.

ಶೇ.35ರಷ್ಟು ಮಳೆ ಕೊರತೆ:
ಅಕ್ಟೋಬರ್‌ನಿಂದ ಈವರೆಗೆ ಸುರಿದ ಮಳೆಯಲ್ಲಿ ಶೇ.35ರಷ್ಟು ಕೊರತೆಯಾಗಿದೆ. ಈ ಬಾರಿ ಸರಾಸರಿ ವಾಡಿಕೆಯಷ್ಟು ಮಳೆ ಸುರಿದಿದೆ. ಅಕಾಲಿಕ ಮಳೆ ಹೊರತಾಗಿಯೂ ತುಸು ಮಳೆ ಅಭಾವ ಕಂಡು ಬಂದಿದೆ. ಆದರೆ, ಕೆಲವೆಡೆ ಮಾತ್ರ ಅಕಾಲಿಕ ಮಳೆದ ಸುರಿದಾಗ ಬೆಳೆ ಹಾನಿ ಪರಿಗಣಿಸಲು ಬರುವುದಿಲ್ಲ ಎನ್ನುತ್ತಾರೆ. ಎನ್‌ಡಿಆರ್‌ ಎಫ್‌ ನಿಧಿಯಮಾನುಸಾರ ಶೇ.33ರಷ್ಟು ಬೆಳೆ ಹಾನಿಯಾದರೆ ಮಾತ್ರ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುವುದು. ಈಗ ಜಿಲ್ಲೆಯಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.