ಕೊಟ್ಟೂರು ಸ್ವಾಮಿ ಮಠದ ಡಾ.ಸಂಗನಬಸವ ಸ್ವಾಮೀಜಿ ಲಿಂಗೈಕ್ಯ


Team Udayavani, Nov 22, 2021, 9:01 AM IST

gyyuytr

ಬಳ್ಳಾರಿ: ಹಂಪಿ ಹೇಮಕೂಟ ಸಿಂಹಾಸನಾಧೀಶ್ವರ ಕೊಟ್ಟೂರು ಸ್ವಾಮಿ ಮಠದ ಡಾ. ಸಂಗನಬಸವ ಸ್ವಾಮೀಜಿ ಭಾನುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ವಯೋಸಹ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿಗಳು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೆ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

1972 ರಲ್ಲಿ ಬಳ್ಲಾರಿ-ಹೊಸಪೇಟೆ ಕೊಟ್ಟೂರು ಸ್ವಾಮಿ ಮಠದ ಅಧಿಕಾರ ವಹಿಸಿಕೊಂಡ ಡಾ.ಸಂಗನಬಸವ ಸ್ವಾಮೀಜಿಗಳು, 1987 ರಲ್ಲಿ ಹಾಲಕೆರೆ ಅನ್ನದಾನೇಶ್ವರ ಮಠದ ಅಧಿಕಾರ‌ ವಹಿಸಿಕೊಂಡರು. ಶಿವಯೋಗ ಮಂದಿರದ ಅಧ್ಯಕ್ಷರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಳಿಕ ಆಜೀವ ಅಧ್ಯಕ್ಷರಾದರು. 9 ಬಸವ ಪುರಾಣಗಳ ಪ್ರತಿಪಾದಕರಾಗಿದ್ದ ಶ್ರೀಗಳು, ಈ ಮೂಲಕ ಸರ್ವಧರ್ಮಗಳ ಸಾಮೂಹಿಕ ವಿವಾಹಗಳನ್ನು ನೆರೆವೇರಿಸಿ, ಸಮಾಜದ ಅಭ್ಯುದಯಕ್ಕೆ ಸೇವೆ ಸಲ್ಲಿಸಿದ್ದಾರೆ. ಹರಿಜನ-ಗಿರಿಜನ ಓಣಿಗಳಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ಪ್ರಸಾದ ವಿತರಿಸಿದರು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ 9 ಮಠಗಳಲ್ಲಿ ನಿರಂತರವಾಗಿ ಶಿವಾನುಭವಗೋಷ್ಠಿ ರೂಪಿಸಿದ್ದರು. ಹೀಗೆ ಸಾಮಾಜದ ಬಗ್ಗೆ ಕಳಕಳಿ ಹೊಂದಿದ್ದ ಶ್ರೀಗಳು ಹಲವಾರು ಸಮಾಜಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಸ್ವಾಮೀಜಿಗಳು, ಭಾನುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ಹಿನ್ನೆಲೆ;

ಜಮಖಂಡಿ ತಾಲೂಕಿನ ಬಿದರೆ ಗ್ರಾಮದ ಸ್ವತಂತ್ರ ಮಠದ ಶ್ರೀ ಬಸವಲಿಂಗಯ್ಯ, ಗುರಮ್ಮ ದಂಪತಿಗಳಿಗೆ 1938 ರಲ್ಲಿ ಜನಿಸಿದರು. ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಸಂಗನಬಸವ ಶ್ರೀಗಳು, ಬೈಲಹೊಂಗಲದ ಕುಂಬಾರಗೇರಿ ಮಠದ ಶಿವಬಸಯ್ಯನವರ ಆಶ್ರಮದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮುಗಿಸಿದರು. ಕೆಲದಿನ ಅನ್ನದಾನೀಶ್ವರ ಮಠದಲ್ಲಿಯೂ ಓದಿದ್ದರು. ಶ್ರೀಗಳ ತಂದೆ ಬಸವಲಿಂಗಯ್ಯನವರು ಸಂಗನಬಸವರು ಬಾಲಕರಾಗಿದ್ದಾಗ ಒಮ್ಮೆ ಹಾವೇರಿಯ ಮಹಾತಪಸ್ವಿ ಶಿವನಸವ ಸ್ವಾಮಿಗಳ ದರ್ಶನಕ್ಕೆ ಕರೆದೊಯ್ದಿದ್ದರಂತೆ. ಬಾಲಕನ ಲಕ್ಷಣಗಳನ್ನು ನೋಡಿದ್ದ ಸ್ವಾಮೀಜಿಗಳು, ದಯಾದೃಷ್ಟಿ ಬೀರಿ, ತಲೆಯ ಮೇಲೆ ಹಸ್ತವನ್ನಿಟ್ಟು, ಸಂತೋಷದಿಂದ ಹರಿಸಿದರಂತೆ. ಇದು ಸಂಗನಬಸವ ಸ್ವಾಮಿಗಳ ಭವಿಷ್ಯದ ಸಂಕೇತವಾಗಿದ್ದು, ಮುಂದೆ ಮಗನಬಸವರನ್ನು ಜಮಖಂಡಿ ವಿರಕ್ತ ಮಠಕ್ಕೆ ನೇಮಿಸಿ ಮುಂದಿನ ಅಭ್ಯಾಸಕ್ಕೆ ಶಿವಯೋಗ ಮಂದಿರಕ್ಕೆ ಸೇರಿಸಲಾಯಿತು ಎಂದು ಪುಸ್ತಕವೊಂದರಲ್ಲಿ ಉಲ್ಲೇಖಿಸಲಾಗಿದೆ.

ಬಳಿಕ 12 ವರ್ಷಗಳ ಕಾಲ ಶಿವಯೋಗ ಮಂದಿರದಲ್ಲಿದ್ದು ಒಬ್ಬ ಆದರ್ಶ ಸ್ವಾಮಿಗಿರಬೇಕಾದ ಎಲ್ಲವನ್ನು ಕರಗತ ಮಾಡಿಕೊಂಡರು. ಶಿವಯೋಗ ಸಾಧನೆಗೆ ತಮ್ಮನ್ನು ಪರಿಪೂರ್ಣವಾಗಿ ಒಪ್ಪಿಕೊಂಡರು. ಕನ್ನಡ, ಇಂಗ್ಲೀಷ್, ಸಂಸ್ಕೃತ ಭಾಷೆಗಳ ಜತೆಗೆ ಹಿಂದಿ ಭಾಷೆಯನ್ನು ಸಹ ಕಲಿತು ಕರಗತ ಮಾಡಿಕೊಂಡರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.