ಅಗ್ನಿಶಾಮಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ


Team Udayavani, Nov 23, 2021, 11:05 AM IST

Application of sophisticated technology in firefighting

ದೇವನಹಳ್ಳಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಿಸಲು ಇದೇ ಮೊದಲ ಬಾರಿಗೆ ರೋಸೆನ್‌ಬೌರ್‌ ಪೈರ್‌ಪೈಂಟಿಂಗ್‌ ಸಿಮ್ಯುಲೇಟರ್‌ ಅನ್ನು ಪರಿಚಯಿಸಿದೆ. ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಜ್‌ ಷಣ್ಮುಗಂ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್‌ ಬೌರ್‌ ಪೈರ್‌ಪೈಂಟಿಂಗ್‌ ಸಿಮ್ಯುಲೇಟರ್‌ ಅನ್ನು ಪರಿಚಯಿಸಲಾಗುತ್ತಿದೆ.

ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ, ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹಮುಕ್ತ ಅವಕಾಶವನ್ನು ಒದಗಿಸಿ ಕೊಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:- ಮುಂಬೈ ಷೇರುಪೇಟೆ ಸೆನ್ಸೆಕ್ಸ್ 568 ಅಂಕ ಇಳಿಕೆ; ನಿಫ್ಟಿ ಕುಸಿತ, ಹೂಡಿಕೆದಾರರಿಗೆ ನಷ್ಟ

ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್‌ ಕೆಲಸ ಮಾಡಲಿದೆ. ರೋಸೆನ್‌ಬೌರ್‌ ಸಿಮ್ಯುಲೇಟರ್‌ ಎರಡು ಪ್ಯಾಂಥರ್‌ 6 ಟ್ರಕ್‌ ಹಾಗೂ 8 ಟ್ರಕ್‌ ಇರಿಸಲಾಗಿದೆ. ಈ ಟ್ರಕ್‌ಗಳಲ್ಲಿ ಎರಡು ಹೈರೀಚ್‌ ಎಕ್ಸ್ಟೆಂಡೆಬಲ್‌ ಟರೆಟ್ಸ್ (ಎಚ್‌ಆರ್‌ಇಟಿ)ಯನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

 ಸುರಕ್ಷತೆಗೆ ಮೊದಲ ಆದ್ಯತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ರೋಸೆನ್‌ಬೌರ್‌ ಸಿಎಫ್ಟಿ ಮೂಲಕ ಕಠಿಣವಾದ ಅಗ್ನಿ ಅವಘಡದ ಸಂದರ್ಭ ದಲ್ಲಿ ಈ ಸಿಮ್ಯುಲೇಟರ್‌ ಚಾತುರ್ಯದಿಂದ ಅಗ್ನಿಯನ್ನು ಶಮನ ಮಾಡಲಿದೆ. ವಿಮಾನ ನಿಲ್ದಾಣ ದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ ಅನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್‌ ನಿಯಂತ್ರ ಕರು, ಮೂಲ ಚಾಲಕರು, ಪೋಸಿಶನಿಂಗ್‌ ಇನ್ಸಿ ಡೆಂಟ್‌ ಕಮಾಂಡರ್‌, ಕ್ಯೂ ಕಮಾಂಡರ್‌ ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿ ಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.