ಎಸ್‌ಡಿಎಂ ದೇಶದ ಪ್ರತಿಷ್ಠಿತ ಸಂಸ್ಥೆ: ಡಾ| ಹೆಗ್ಗಡೆ

ವಿದ್ಯಾದಾನ, ಅನ್ನದಾನ, ಅಭಯ ದಾನ ಜತೆಗೆ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದಾರೆ.

Team Udayavani, Nov 26, 2021, 4:05 PM IST

ಎಸ್‌ಡಿಎಂ ದೇಶದ ಪ್ರತಿಷ್ಠಿತ ಸಂಸ್ಥೆ: ಡಾ| ಹೆಗ್ಗಡೆ

ಧಾರವಾಡ: ಇಲ್ಲಿನ ಎಸ್‌ಡಿಎಂ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನವನ್ನು ಸಂಸ್ಥಾಪಕರ ದಿನವನ್ನಾಗಿ ಆಚರಿಸಲಾಯಿತು.

ಈ ವೇಳೆ ವರ್ಚುವಲ್‌ ಮೂಲಕ ಮಾತನಾಡಿದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು, ತಮ್ಮ ಜನ್ಮದಿನವನ್ನು ಸಂಸ್ಥಾಪಕರ ಜನ್ಮದಿನವನ್ನಾಗಿ ಆಚರಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದಲ್ಲದೇ, ಸಿಬ್ಬಂದಿಗಳ ಪ್ರೀತಿ, ಕಾಳಜಿ, ಅಭಿಮಾನಕ್ಕೆ ಆಶೀರ್ವದಿಸಿದರು.

ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸುವ ಬಗ್ಗೆ ಬಹಳಷ್ಟು ಆತಂಕವಿತ್ತು. ಆದರೆ ನ.ವಜ್ರಕುಮಾರ ಅವರು ಅಭಯ ನೀಡಿ, ಹೆಗಲು ಕೊಟ್ಟು ನಿಂತಿದ್ದರಿಂದ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ. ಗುಣಮಟ್ಟದ ಶಿಕ್ಷಣದಿಂದ ಎಸ್‌ಡಿಎಂ ಸಂಸ್ಥೆ ಇದೀಗ ದೇಶದಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿದೆ. ನಿರಂಜನಕುಮಾರ ಶ್ರಮದ ಫಲದಿಂದ ಸಂಸ್ಥೆ ವಿಶ್ವವಿದ್ಯಾಲಯವಾಗಿ ಮಾರ್ಪಟ್ಟಿದೆ. ಮುಂದೆಯೂ ಒಗ್ಗೂಡಿ ಕೆಲಸ ಮಾಡೋಣ ಎಂದರು.

ಉಪಕುಲಪತಿ ಡಾ|ನಿರಂಜನಕುಮಾರ ಮಾತನಾಡಿ, 20ನೇ ವಯಸ್ಸಿನಲ್ಲಿ ಪಟ್ಟಾಧಿಕಾರಿಯಾಗಿ ನೇಮಕಗೊಂಡು ಸಕಲ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆಂದರು. ಅನೇಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ, ಅನ್ನದಾನ, ಅಭಯ ದಾನ ಜತೆಗೆ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದಾರೆ. ಅವರ ಕಾರ್ಯಕ್ಕೆ ರಾಜಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಒಲಿದು ಬಂದಿವೆ ಎಂದರು.

ಹಿರಿಯ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನೈತಿಕತೆ, ಬದ್ಧತೆ ಅಳವಡಿಸಿಕೊಳ್ಳುವ ವಿಧಾನ ಶಿಕ್ಷಣ ಮಾತ್ರವೇ ಕಲಿಸುತ್ತದೆ. ಸಹನೆ, ತಾಳ್ಮೆ ಗುರಿ ತಲುಪಲು ವ್ಯಕ್ತಿಗೆ ಸಹಾಯ ಮಾಡುತ್ತಿವೆ ಎಂದರು. ಪದವಿಗಳು ಇತ್ತೀಚೆಗೆ ಬದುಕಿನ ಮಜಲುಗಳನ್ನು ಕಲಿಸುವ ಬದಲು ಅಂತಸ್ತು ಬೆಳೆಸಿ ಮೌಲ್ಯಗಳನ್ನು ಮಾರುವ ಹಂತಕ್ಕೆ ಬಂದಿವೆ. ಹೀಗಾಗಿ ಪದವಿ ಪಡೆಯುವುದು ಮುಖ್ಯವಲ್ಲ. ಅದು ಜೀವನದ ಮೌಲ್ಯಗಳನ್ನು ಕಲಿಸಬೇಕು ಎಂದರು.

ಪದ್ಮಲತಾ ನಿರಂಜನಕುಮಾರ,ಪ್ರೊ|ಜೀವನಂದಕುಮಾರ, ಎಸ್‌.ಕೆ.ಜೋಶಿ, ರಜಿಸ್ಟಾರ್‌ ಯು.ಎಸ್‌.ದಿನೇಶ, ಆಡಳಿತ ಮಂಡಳಿ ನಿರ್ದೇಶಕ ಸಾಕೇತ ಶೆಟ್ಟಿ, ವಿತ್ತಾ ಧಿಕಾರಿ ವಿ.ಜಿ.ಪ್ರಭು ಸೇರಿದಂತೆ ಹಲವರು ಇದ್ದರು. ಇದೇ ಸಂದರ್ಭದಲ್ಲಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಡಾ|ಎಸ್‌.ಕೆ.ಜೋಶಿ ಸ್ವಾಗತಿಸಿದರು. ಎಸ್‌ ಡಿಎಂ ದಂತ ಮಹಾವಿದ್ಯಾಲಯ ಪ್ರಾಚಾರ್ಯ ಡಾ|ಬಲರಾಮ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.