ತುರ್ತು ಸೇವೆಗೆ 112 ಸಹಾಯವಾಣಿ


Team Udayavani, Nov 27, 2021, 4:04 PM IST

22emergency

ಹುಮನಾಬಾದ: ಯಾವುದೇ ಭಾಗದಲ್ಲಿ ಸಮಸ್ಯೆ ಕಂಡುಬಂದ ಕೂಡಲೇ ತುರ್ತು ಸೇವೆಗಾಗಿ 112ಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಸಿಪಿಐ ಮಲ್ಲಿಕಾರ್ಜುನ ಯಾತನೂರ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆ ವತಿಯಿಂದ ಪಟ್ಟಣದ ಥೇರ್‌ ಮೈದಾನ, ಬಸ್‌ ನಿಲ್ದಾಣ ಸೇರಿದಂತೆ ವಿವಿಧೆಡೆ ಏರ್ಪಡಿಸಿದ್ದ 112 ಜನಜಾಗೃತಿ ಹಾಗೂ ಕಬ್ಬಿನ ಲಾರಿಗಳಿಗೆ ರೇಡಿಯಂ ಅಳವಡಿಸುವ ಮೂಲಕ ಜನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಈ ಹಿಂದೆ ಅಗ್ನಿ ಅವಘಡಕ್ಕೆ ಪೊಲೀಸ್‌, ಆರೋಗ್ಯ ಇಲಾಖೆಗಳಿಗೆ ಪ್ರತ್ಯೇಕ ಕರೆ ಸಂಖ್ಯೆಗಳಿದ್ದವು. ಆದರೆ ಇದೀಗ ಸರ್ಕಾರ 112 ಸಹಾಯವಾಣಿ ಆರಂಭಿಸಿದ್ದು, ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ಇತರೆ ತುರ್ತು ಸೇವೆ ತ್ವರಿತಗತಿಯಲ್ಲಿ ಸಾರ್ವಜನಿಕರು ಪಡೆಯಬಹುದು. ಪ್ರತಿಯೊಬ್ಬರೂ 112 ಸಹಾಯವಾಣಿಗೆ ದಿನದ 24 ಗಂಟೆಗಳಲ್ಲಿ ಕರೆ ಮಾಡಿ ಲಾಭ ಪಡೆದುಕೊಳ್ಳಬಹುದು ಎಂದರು.

ಪಿಎಸ್‌ಐ ರವಿಕುಮಾರ ನಾಯ್ದೊಡಿ ಮಾತನಾಡಿ, 112ಗೆ ಕರೆ ಮಾಡುವ ಮೂಲಕ ಕಡಿಮೆ ಅವಧಿಯಲ್ಲಿ ಸರ್ಕಾರಿ ಇಲಾಖೆ ಸೇವೆ ಲಭ್ಯವಾಗುತ್ತದೆ. ಈಗಾಗಲೇ ಎಲ್ಲೆಡೆ 112 ಪೊಲೀಸ್‌ ವಾಹನಗಳು ಸಂಚರಿಸುತ್ತಿದ್ದು, ದೂರು ಬರುವ ಕಡೆಗೆ ಕೂಡಲೇ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡುತ್ತಿದ್ದಾರೆ. ಎಲ್ಲ ತುರ್ತು ಸೇವೆಗಳಿಗೆ 112 ಎಂಬುದು ಎಲ್ಲರೂ ನೆನಪಿಸಿಕೊಳ್ಳುವ ಮೂಲಕ ಇತರರಿಗೂ ಜಾಗೃತಿ ಮೂಡಿಸಿ ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿನ ಆಟೋ, ಬಸ್‌ ಸೇರಿದಂತೆ ಇತರೆ ವಾಹನಗಳಿಗೆ 112 ಭಿತ್ತಿಪತ್ರ ಅಂಟಿಸಿದರು. ಪಟ್ಟಣದ ಹೊರವಲಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಸಾಗುವ ಲಾರಿ ತಡೆದು ರೇಡಿಯಂ ಅಳವಡಿಸುವ ಮೂಲಕ ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ವಾಹನ ಚಾಲಕರಿಗೆ ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಬಸವರಾಜ ತಿಳಿವಳಿಕೆ ನೀಡಿದರು. ಈ ವೇಳೆ ಪೊಲೀಸ್‌ ಸಿಬ್ಬಂದಿಗಳಾದ ವಿಜಯಕುಮಾರ ಮೇಟಿ, ಮಲ್ಲು ಮಳ್ಳಿ, ಆಕಾಶ ಸಿಂಧೆಮ ಭಗವಾನ, ಶಿವಾನಂದ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.