ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Team Udayavani, Nov 30, 2021, 12:38 PM IST

12ishwarappa

ಕಾರಟಗಿ: ದೇಶದಲ್ಲಿ ಕಾಂಗ್ರೆಸ್‌ ತನ್ನ ನೆಲೆ ಕಳೆದುಕೊಳ್ಳುತ್ತಿದ್ದು, ಇದಕ್ಕೆ ನಿನ್ನೆ ಪ್ರಕಟವಾದ ತ್ರಿಪುರಾ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶವೇ ಸಾಕ್ಷಿಯಾಗಿದೆ. ಆದರೂ ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತಾಗಿದೆ ಕಾಂಗ್ರೆಸ್‌ ಪರಿಸ್ಥಿತಿ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ನವರು ಬರೀ ಹಾನಗಲ್ಲ ಗೆಲುವನ್ನೇ ಮುಂದೆ ಮಾಡಿಕೊಂಡು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅದೇ ಸಿಂದಗಿಯಲ್ಲಿನ ಬಿಜೆಪಿಯ ಪ್ರಚಂಡ ಗೆಲುವು ಅವರಿಗೆ ಲೆಕ್ಕಕ್ಕಿಲ್ಲ. ಈಗಾಗಲೇ ರಾಜ್ಯದಲ್ಲೂ ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕಳೆದುಕೊಂಡು ಪ್ರಾದೇಶಿಕ ಪಕ್ಷ ಎಂದು ಕರೆಯುವ ಸ್ಥಿತಿಗೆ ಬಂದು ನಿಂತಿದೆ. ಕಾಂಗ್ರೆಸ್‌ ಈಗಾಗಲೇ ಇಡೀ ದೇಶದಲ್ಲಿ ತನ್ನ ನೆಲೆ ಕಳೆದುಕೊಳ್ಳುತ್ತಿದೆ ಎಂದರು.

ನಿನ್ನೆ ದಿನ ಪ್ರಕಟವಾದ ತ್ರಿಪುರಾ ರಾಜ್ಯದ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ 334 ಸ್ಥಾನಗಳಲ್ಲಿ ಬಿಜೆಪಿ 329 ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್‌ ಸ್ವಿಪ್‌ ಮಾಡುವ ಮೂಲಕ ಪ್ರಚಂಡ ಗೆಲುವು ದಾಖಲಿಸಿದೆ. ಇನ್ನು ಅಲ್ಲಿ ಕಾಂಗ್ರೆಸ್‌ಗೆ ಸಿಕ್ಕಿದ್ದು ಒಂದೇ ಒಂದು ಸ್ಥಾನ, ಅವರಿಗೆ ನಾಚಿಕೆಯಾಗಬೇಕು. ಚಾಮುಂಡೇಶ್ವರಿಯಲ್ಲಿ ಪಲ್ಟಿ ಹೊಡೆಯುವ ಪರಿಸ್ಥಿತಿ ಎದುರಾಗಿ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿ ಬಾದಾಮಿಗೆ ಓಡಿದರು. ಈಗ ಅಲ್ಲಿ ಬಿಟ್ಟು ಜಮೀರನ ಕ್ಷೇತ್ರಕ್ಕೆ ಓಡಿ ಹೋಗೋ ಪರಿಸ್ಥಿತಿ ಬಂದಿದ್ದಾದರೂ ಏಕೆ ಎನ್ನುವುದನ್ನು ಮೊದಲು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಲಿ. ಬರೀ ಹಿಂದುಳಿದವರನ್ನು ಉದ್ಧಾರ ಮಾಡಿದ್ದೀವಿ, ದಲಿತರನ್ನು ಉದ್ಧಾರ ಮಾಡಿದ್ದೀವಿ ಎಂದು ಜಂಬ ಕೊಚ್ಚಿಕೊಳ್ಳುವವರಿಗೆ ಯಾವಾಗ ಬುದ್ದಿ ಬರುತ್ತೋ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನಿರಾಣಿ ಆದಷ್ಟು ಬೇಗ ಸಿ.ಎಂ. ಆಗ್ತಾರೆ ಎನ್ನುವ ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ಅವರು, ನಾನು ಹೇಳಿದ್ದು ಅವರು ಮುಖ್ಯಮಂತ್ರಿಯಾಗುವುದು ಈಗಲ್ಲ. ಮುಂದಿನ ದಿನಗಳಲ್ಲಿ ಆಗೇ ಆಗುತ್ತಾರೆ ಎನ್ನುವ ಅರ್ಥದಲ್ಲಿ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ನಾವು ಬಹಿರಂಗವಾಗಿಯೇ ಬೆಂಬಲ ಕೇಳಿದ್ದೇವೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎರಡು ದಿನ ಬಿಟ್ಟು ಹೇಳುವುದಾಗಿ ಹೇಳಿದ್ದಾರೆ ಎಂದರು. ಶಾಸಕ ಬಸವರಾಜ ದಢೇಸುಗೂರು ಇನ್ನಿತರರು ಇದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.