ವಾಣಿಜ್ಯ ಎಲ್‌ಪಿಜಿ ಸಿಲಿಂಡರ್100 ರೂ. ಏರಿಕೆ
Team Udayavani, Dec 1, 2021, 10:45 PM IST
ಹೊಸದಿಲ್ಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರವನ್ನು 100 ರೂ. ಏರಿಕೆ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ದರ 1,795.19 ರೂ. ಇದ್ದದ್ದು 1,895.19 ರೂ. ಆಗಲಿದೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 2,101 ರೂ., ಮುಂಬಯಿನಲ್ಲಿ 2,051 ರೂ. ಆಗಲಿದೆ. ಮೂರು ತಿಂಗಳುಗಳ ಅವಧಿಯಲ್ಲಿ ಇದು ಐದನೇ ಬಾರಿಗೆ ದರ ಏರಿಕೆಯಾಗಿದೆ. ನ. 1, ಅ. 15ರಂದು ದರ ಏರಿಕೆ ಮಾಡಲಾಗಿತ್ತು.
ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ
ಇದೇ ವೇಳೆ, ನ್ಯಾಯಬೆಲೆ ಅಂಗಡಿಗಳ ಮೂಲಕ ಮಿನಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 8 ರೂ. ಇಳಿಕೆ
ಈ ಬಗ್ಗೆ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಜತೆಗೆ ಚರ್ಚಿಸಲಾಗುತ್ತದೆ. ಆಹಾರ ಧಾನ್ಯಗಳ ಜತೆಗೆ ಇತರ ಉಪಯುಕ್ತ ವಸ್ತುಗಳನ್ನೂ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!
Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ
Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ