ಮುಂಜಾನೆ ಮಂಜಿಗೆ ಸೊರಗಿದ ತರಕಾರಿ ಬೆಳೆ

Team Udayavani, Dec 6, 2021, 12:01 PM IST

8crop

ಮಾದನಹಿಪ್ಪರಗಿ: ಅತಿವೃಷ್ಟಿಯಿಂದ ತೊಗರಿ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿರುವಾಗಲೇ ಪ್ರಕೃತಿ ಇನ್ನೊಂದು ಹೊಡೆತ ನೀಡಿದೆ. ಮಳೆ ಬಾರದೆ, ಬಿಸಿಲು ಬೀಳದೇ ದಿನವಿಡಿ ಮಂಜು ಬಿದ್ದು ತರಕಾರಿ ಬೆಳೆಗಳು ಸೊರಗಿ ಹೋಗಿವೆ. ಹೂವುಗಳು ಉದುರಿವೆ. ಕಾಯಿಗಳು ನೆಲಕಚ್ಚಿವೆ. ಸತತವಾಗಿ ಎರಡ್ಮೂರು ದಿನಗಳಿಂದ ಆಕಾಶ, ಭೂಮಿ ಮಧ್ಯೆ ಹೊಗೆಯಂತೆ ಮಂಜು ಆವರಿಸಿದ ಹಿನ್ನೆಲೆಯಲ್ಲಿ ತರಕಾರಿ ಬೆಳೆಗಳಿಗೆ ರೋಗ ಬಿದ್ದು ಮಾದನಹಿಪ್ಪರಗಿ ವಲಯದೊಳಗಿನ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಈ ಭಾಗದ ರೈತರು ತರಕಾರಿ ಬೆಳೆ ಬೆಳೆಯಲು ಪ್ರಸಿದ್ಧರು. ದೂರದ ಮುಂಬೈ, ಪುಣೆ, ಸೊಲ್ಲಾಪುರ, ಹೈದ್ರಾಬಾದ, ಕಲಬುರಗಿ, ಯಾದಗರಿ, ಅಕ್ಕಲಕೋಟ, ಆಳಂದ ಈ ಎಲ್ಲ ನಗರಗಳಿಗೆ ದಿನಾಲು ಲಾರಿಗಳಲ್ಲಿ ತರಕಾರಿಗಳನ್ನು ಕಳುಹಿಸುತ್ತಾರೆ. ಟೊಮ್ಯಾಟೋ, ಬದನೆಕಾಯಿ, ಹಿರೇಕಾಯಿ, ಹಸಿ ಮೆಣಸಿನಕಾಯಿ, ಹಾಗಲಕಾಯಿ, ಈರುಳ್ಳಿ, ಮುಖ್ಯವಾಗಿ ಅವರೆಕಾಯಿ, ಡಬ್ಬು ಮೆಣಸಿನಕಾಯಿ, ನುಗ್ಗೆಕಾಯಿ, ಗಜ್ಜರಿ ಸೇರಿದಂತೆ ಇನ್ನು ಅನೇಕ ತರಹದ ತರಕಾರಿಗಳನ್ನು ಬೆಳೆಯುತ್ತಾರೆ.

ಕಳೆದ ಎರಡ್ಮೂರು ದಿನಗಳಿಂದ ಮಂಜು ಕವಿದಿದ್ದರಿಂದ ರೈತ ಶ್ರೀಶೈಲ ಶಿವಶರಣಪ್ಪ ಹಡಲಗಿ ಎನ್ನುವರ ಮೂರು ಎಕರೆ ನುಗ್ಗೆ, ಒಂದೂವರೆ ಎಕರೆ ಅವರೆಕಾಯಿ ತೋಟದಲ್ಲಿ ಇವುಗಳ ಹೂವುಗಳೆಲ್ಲ ಉದುರಿ ನೆಲಕಚ್ಚಿವೆ. ಆದರೂ ಮಾರ್ಕೆಟ್‌ನಲ್ಲಿ ಅವರೆಕಾಯಿ, ನುಗ್ಗೆಕಾಯಿ ಬೆಳೆಗೆ ಒಳ್ಳೆಯ ಬೆಲೆ ಇರುವುದರಿಂದ ಹೂವು, ಕಾಯಿ ಉಳಿಸಿಕೊಳ್ಳಲು ರೈತ ಔಷಧಗಳ ಮೊರೆ ಹೋಗಿದ್ದಾನೆ.

ಇದನ್ನೂ ಓದಿ:ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

ಮಾದನಹಿಪ್ಪರಗಿ ಸುತ್ತಮುತ್ತ ನೂರಾರು ಎಕರೆ ಅವರೆಕಾಯಿ ಬೆಳೆ ಇದ್ದರೆ, ಸಾವಿರಾರು ಎಕರೆ ನುಗ್ಗೆ ಬೆಳೆ ಇದೆ. ಈ ಗ್ರಾಮದಿಂದ ಲಾರಿಗಳು ತರಕಾರಿಗಳನ್ನು ಹೊತ್ತು ನಗರಕ್ಕೆ ಹೋಗುತ್ತವೆ. ಹೈದ್ರಾಬಾದ್‌ಗೆ ನುಗ್ಗೆಕಾಯಿ, ಹಸಿ ಮೆಣಸಿನಕಾಯಿ, ಡಬ್ಬು ಮೆಣಸಿನಕಾಯಿ ಸರಬರಾಜು ಆಗುತ್ತದೆ. ಆದರೆ ಹವಾಮಾನ ಬದಲಾವಣೆಯಿಂದ ರೈತರ ಬದುಕು ಪ್ರಸಕ್ತ ವರ್ಷ ಮೂರಾಬಟ್ಟೆ ಆಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರಿಗೆ ಅಕಾಲಿಕ ಮಳೆ, ಮಂಜು ಈ ವರ್ಷ ಅಮದಾನಿ(ಲಾಭ) ಬಾರದಂತೆ ಮಾಡಿದೆ.

ಪರಮೇಶ್ವರ ಭೂಸನೂರ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.