ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಾಸಕ ಅಮರೇಗೌಡ ಪಾಟೀಲರಿಗೆ ಮನವಿ

Team Udayavani, Dec 11, 2021, 10:58 AM IST

5MLA

ಕುಷ್ಟಗಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವಾ ನಿರತ ಅತಿಥಿ ಉಪನ್ಯಾಸಕ ಸೇವಾ ಭದ್ರತೆ, ವೇತನ ಹೆಚ್ಚಳ‌ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ಶುಕ್ರವಾರದಿಂದ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟವಾಧಿ ಪ್ರತಿಭಟನೆ ಹಮ್ಮಿಕೊಂಡಿರುವ ಅತಿಥಿ ಉಪನ್ಯಾಸಕರು, ಕಾಲೇಜು ತರಗತಿ ಬಹಿಷ್ಕರಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.

ಸೇವಾ ಭದ್ರತೆ ಇಲ್ಲದೇ ಕನಿಷ್ಠ ವೇತನದಲ್ಲಿ ಕೆಲಸ ನಿರ್ವಹಿಲಾಗುತ್ತಿದ್ದರೂ ಸೇವೆಯನ್ನು ಪರಿಗಣಿಸದೇ ಸಕಾಲಿಕ ವೇತನ ಸಹ ಇಲ್ಲ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಅತಿಥಿ ಉಪನ್ಯಾಸಕರ ವಿಷಯ ಪ್ರಸ್ತಾಪಿಸಿ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಅತಿಥಿ ಉನ್ಯಾಸಕರನ್ನು ಅವೈಜ್ಞಾನಿಕ ವಾಗಿ ನೇಮಿಸಲಾಗುತ್ತಿದೆ. ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪಠ್ಯಕ್ರಮ ಅಳವಡಿಸಲಾಗಿದ್ದು, ಪುಸ್ತಕಗಳು ಅಲಭ್ಯವಾಗಿದೆ. ಜೂನ್, ಜುಲೈ ತಿಂಗಳಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸದೇ ಸೆಪ್ಟೆಂಬರ್, ನವೆಂಬರ್ ತಿಂಗಳಿನಲ್ಲಿ ಅವೈಜ್ಞಾನಿಕ ವಾಗಿ ನೇಮಿಸುತ್ತಿರುವುದು ಎಷ್ಟು ಸರಿ‌? ಎಂದು ಪ್ರಶ್ನಿಸಿದರು.

ಪಸಕ್ತ ಅವಧಿಯಲ್ಲಿ ಪಠ್ಯಕ್ರಮ ಹಿಂದುಳಿಯಲು ವಿವಿ ಮಟ್ಟದ ಧೊರಣೆ ಕಾರಣ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದರು.  ಶಾಸಕ ಬಯ್ಯಾಪೂರ ಮನವಿ ಸ್ವೀಕರಿಸಿ ಅತಿಥಿ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದ್ದು, ಈ ವಿಷಯ ಸದನದಲ್ಲಿ ಪ್ರಸ್ತಾಪಿಸುವ ಭರವಸೆ ನೀಡಿದರು.

ನಂತರ ಅತಿಥಿ ಉಪನ್ಯಾಸಕರು ಇಲ್ಲಿನ ಬುತ್ತಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜಮಾಯಿಸಿ ಮುಂದಿನ ಹೋರಾಟದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಶಂಕರ ಅಡವಿಬಾವಿ, ಶಂಕರ ಕರಪಡಿ, ಶಿವರಾಜ ಬಂಡಿಹಾಳ, ಅತಿಥಿ ಉಪನ್ಯಾಸಕರಾದ ಭೀಮಣ್ಣ.ಸಿ, ಫಕೀರಪ್ಪ ತಳವಾರ, ಬಸಯ್ಯ ಮಠಪತಿ, ಡಾ.ಆಯ್.ಎನ್.ಹುರಳಿ, ವಿಶ್ವನಾಥ ತೊಂಡಿಹಾಳ, ರಾಜಶೇಖರ ಕಲಕಬಂಡಿ, ಶಿವಲೀಲಾ ಸಾಲಿಮಠ, ಮಾಲತಿ ದರ್ಮಾಯತ್, ಮಂಜುನಾಥ, ಫೀರಸಾಬ ವೈ.ಎನ್.,ರಾಘವೇಂದ್ರ ಆರ್.ಸಿ., ಲಕ್ಷ್ಮಿ ಎಚ್.,ಬಸವರಾಜ ಕೋನಾಪುರ ಸೇರಿದಂತೆ ಇತರರು ಇದ್ದರು. ಈ ಪ್ರತಿಭಟನೆಯಲ್ಲಿ ಕುಷ್ಟಗಿ, ತಾವರಗೇರಾ, ಹಿರೇವಂಕಲಕುಂಟ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.