‌ ರೈತ ಹೋರಾಟದ ವಿಜಯೋತ್ಸವ-ಸಂಭ್ರಮ

Team Udayavani, Dec 12, 2021, 10:15 AM IST

5farmerರೈತ ಹೋರಾಟದ ವಿಜಯೋತ್ಸವ-ಸಂಭ್ರಮ

ಆಳಂದ: ದೆಹಲಿಯಲ್ಲಿ ಕಳೆದ ಒಂದೂ ವರೆ ವರ್ಷದಿಂದಲೂ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ನೀಡಲು ರಾಜ್ಯ ಸರ್ಕಾರಗಳತ್ತ ಬೆರಳು ತೋರದೇ, ಕೇಂದ್ರ ಸರ್ಕಾರವೇ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪೂಜಾ ರಮೇಶ ಲೋಹಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಪಟ್ಟಣದ ಗುರುಭವನ ಮುಂಭಾಗದ ರಾಜ್ಯ ಹೆದ್ದಾರಿ ಮೇಲೆ ಶನಿವಾರ ಸಂಯುಕ್ತ ಕಿಸಾನ್‌ ಮೋರ್ಚಾ ಕೈಗೊಂಡಿದ್ದ ದೆಹಲಿಯ ರೈತರ ಹೋರಾಟದ ವಿಜಯೋತ್ಸವದ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೆಹಲಿ ಹೋರಾಟದಲ್ಲಿ 700ಕ್ಕೂ ಅಧಿಕ ರೈತರು ಮೃತಪಟ್ಟಿದ್ದಾರೆ. ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳು ಈಗಲೂ ನ್ಯಾಯ ಕೇಳುತ್ತಿವೆ. ರೈತರ ಅಹವಾಲುಗಳಿಗೆ ಸರ್ಕಾರ ಹಿಂದೆಯೇ ಸ್ಪಂದಿಸಿದ್ದರೆ ಹಾಗೂ ಅವರ ಕಳವಳವನ್ನು ಗಂಭೀರವಾಗಿ ಪರಿಗಣಿಸಿದ್ದರೆ ಬಹುಶಃ ಈ ಜೀವಗಳನ್ನು ಉಳಿಸಬಹುದಿತ್ತು. ಆದರೆ ಸರ್ಕಾರದ ವಿಳಂಬ ನೀತಿಯಿಂದಾಗಿ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ತುರ್ತಾಗಿ ಸರ್ಕಾರ ವರದಿ ತರಿಸಿಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ದೆಹಲಿ ರೈತರ ಹೋರಾಟಕ್ಕೆ ಬೆಂಬಲಿಸಿ ಆಳಂದದಲ್ಲೂ ತಿಂಗಳ ಕಾಲ ಮೌಲಾ ಮುಲ್ಲಾ ನೇತೃತ್ವದಲ್ಲಿ ನಿರಂತರ ಹೋರಾಟವನ್ನು ದೆಹಲಿಗೆ ವಿಸ್ತರಿಸಿ ಹೋರಾಟ ನಡೆದಿತ್ತು. ಈ ವೇಳೆ ಕೇಂದ್ರ ಸರ್ಕಾರ ಕೊಂಚವೂ ಕರುಣೆ ತೋರದೆ ಕಾಲಹರಣ ಮಾಡಿದ್ದರಿಂದ ರೈತರ ಜೀವಬಲಿಯಾಗಿದೆ. ಮೃತಪಟ್ಟ ರೈತರ ಕುಟುಂಬದವರು ಆತ್ಮ ಸ್ಥೈರ್ಯ ಕಳೆದುಕೊಳ್ಳದೆ, ಧೈರ್ಯದಿಂದ ಮುಂದುವರಿಯಬೇಕು ಎಂದು ಹೇಳಿದರು.

ತಾಲೂಕಿನಲ್ಲೂ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಎಕರೆಗೆ 20 ಸಾವಿರ ರೂ. ಪರಿಹಾರ ಒದಗಿಸಬೇಕು. ಪಂಪಸೆಟ್‌ಗಳಿಗೆ ನಿರಂತರ ವಿದ್ಯುತ್‌ ಉಚಿತವಾಗಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಸಮರ್ಪಕ ಜಾರಿಗೊಳಿಸಿ ಕಾರ್ಮಿಕರಿಗೆ ಸಕಾಲಕ್ಕೆ ಕೆಲಸ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಕಾರ್ಯಾಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ, ತಾಲೂಕು ಅಧ್ಯಕ್ಷ ಚಂದ್ರಕಾಂತ ಖೋಬ್ರೆ, ತಡೋಳಾ ಗ್ರಾಪಂ ಅಧ್ಯಕ್ಷ ಮೈಲಾರಿ ಜೋಗೆ, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಜಾನೆ, ಕಲ್ಯಾಣಿ ತುಕಾಣೆ ಮಾತನಾಡಿ, ದೇಶಕ್ಕೆ ಅನ್ನ ನೀಡುವ ರೈತರ ಬೇಡಿಕೆ ಈಡೇರಿಸಲು ಸರ್ಕಾರ ಹಿಂದೇಟು ಹಾಕಿ ಕೊನೆಗೆ ತಪ್ಪಿನ ಅರಿವಾಗಿ ತನ್ನ ನಿರ್ಧಾರ ಹಿಂದಕ್ಕೆ ಪಡೆದುಕೊಂಡಿದ್ದು, ರೈತರ ಶಕ್ತಿ ಪ್ರದರ್ಶನವೇ ಕಾರಣವಾಗಿದೆ. ಆದ್ದರಿಂದ ರೈತರು ತಮ್ಮ ಹಕ್ಕು, ಬೇಡಿಕೆ, ನ್ಯಾಯಕ್ಕಾಗಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.

ಕಲ್ಯಾಣಿ ತುಕಾಣೆ ಮಾತನಾಡಿ, ಇಂದಿಗೂ ಎಂದೆಂದಿಗೂ ಗೆಲವು ನಮ್ಮದೇ ಎಂಬ ಕ್ರಾಂತಿ ಗೀತೆಗೆ ಮುಖಂಡರು ಕುಣಿದು, ರೈತರಿಗೆ ಜಯವಾಗಲಿ ಎಂಬ ಘೋಷಣೆ ಕೂಗಿದರು. ನಂತರ ಹೂ ಹಾರಿಸಿ ಲಾಡು ಹಂಚಿ ಸಂಭ್ರಮಿಸಿದರು. ಮುಖಂಡ ಫಕ್ರೋದ್ದೀನ್‌ ಗೋಳಾ, ಪುರಸಭೆ ಸದಸ್ಯ ಸೈಫಾನ್‌ ಜವಳೆ, ಆಶ್ಪಾಕ್‌ ಮುಲ್ಲಾ, ಮಹಾವೀರ ಕಾಂಬಳೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.