ವಿಳಂಬ ಮಾಡದೇ ಕಾಮಗಾರಿಗಳ ಪ್ರಗತಿ ಸಾಧಿಸಿ


Team Udayavani, Dec 16, 2021, 4:21 PM IST

22DC

ಯಾದಗಿರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅಧಿಕಾರಿಗಳು ವಿಳಂಬ ಮಾಡದೇ ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌ ಸೂಚಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಈ ಯೋಜನೆಯಡಿ ಆವರಣ ಗೋಡೆ, ಶಾಲಾ ಕಟ್ಟಡ ನಿರ್ಮಾಣ, ದುರಸ್ತಿ, ರಸ್ತೆ, ಸಮುದಾನ ಭವನ, ಬಸ್‌ ಶೆಟ್ಟರ್‌, ದೇವಸ್ಥಾನಗಳ ದುರಸ್ತಿ, ಮತ್ತಿತರ ಸಣ್ಣಪುಟ್ಟ ಕಾಮಗಾರಿಗಳನ್ನು ಕೈಗೊಂಡು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಅಪ್‌ಲೋಡ್‌ ಮಾಡಿ

ಅಧಿಕಾರಿ, ಎಂಜಿನಿಯರ್‌ಗಳು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಆ ಕಾಮಗಾರಿಗಳ ಪ್ರಗತಿ ಮೇಲೆ ಕಣ್ಣಿಡಲು ವರ್ಕ್‌ಸಾಫ್ಟ್‌ (ಗಾಂಧಿ ಸಾಕ್ಷಿ) ಎಂಬ ತಂತ್ರಾಂಶವನ್ನು ಹೊಸದಾಗಿ ಸೃಜಿಸಲಾಗಿದೆ. ಶಾಸಕರ ನಿಧಿಯಡಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿಯನ್ನು ಕಡ್ಡಾಯವಾಗಿ ಈ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಬೇಕು ಎಂದು ಸೂಚಿಸಿದರು.

ಶಾಸಕರು ಪ್ರಸ್ತಾವನೆ ಸಲ್ಲಿಸಿದ ನಿಗದಿತ ದಿನದೊಳಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಕಾರಣಾಂತರಗಳಿಂದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗದಿದ್ದ ಸಂದರ್ಭದಲ್ಲಿ ಸೂಕ್ತ ಕಾರಣ ನೀಡಿ ಶಾಸಕರಿಗೆ ಸ್ಪಷ್ಟನೆ ನೀಡಬೇಕು. ಪ್ರಗತಿ ಸಾಧಿಸದೆ ಉದಾಸೀನ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಿದಲ್ಲಿ ನಿಗದಿತ ದಿನದೊಳಗಾಗಿ ಸಹಾಯಕ ಆಯುಕ್ತರು ಆಡಳಿತಾತ್ಮಕ ಅನುಮೋದನೆ ನೀಡಬೇಕು. ಶಾಸಕರ ನಿಧಿಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ನಿಗದಿತ ಸಮಯದೊಳಗಾಗಿ ಪೂರ್ಣ ಗೊಳಿಸಬೇಕೆಂಬ ನಿಯಮವಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ಈ ನಿಯಮ ಪಾಲಿಸಬೇಕು ಎಂದರು.

ಪಂಚಾಯತ ರಾಜ್‌ ಇಂಜಿನಿಯರಿಂಗ್‌, ಪಿಡಬ್ಲ್ಯೂಡಿ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್‌ ಐಡಿಎಲ್‌, ವಿಕಲಚೇತನಾ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳಲ್ಲಿನ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.