ಒತ್ತುವರಿ ಜಮೀನನ್ನು ಭೋಗ್ಯಕ್ಕೆ ಕೊಡಲು ಕಾಫಿ ಬೆಳೆಗಾರರ ಬೇಡಿಕೆ

ಕಂದಾಯ, ತೋಟಗಾರಿಕೆ ಸಚಿವರನ್ನು ಭೇಟಿಯಾದ ಕಾಫಿ ಬೆಳೆಗಾರರ ಒಕ್ಕೂಟ

Team Udayavani, Dec 16, 2021, 5:02 PM IST

ಒತ್ತುವರಿ ಜಮೀನನ್ನು ಭೋಗ್ಯಕ್ಕೆ ಕೊಡಲು ಕಾಫಿ ಬೆಳೆಗಾರರ ಬೇಡಿಕೆ

ಬೆಳಗಾವಿ : ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ನಿಗದಿತ ಶುಲ್ಕ ವಿಧಿಸಿ ಭೋಗ್ಯಕ್ಕೆ ನೀಡುವ ಯೋಜನೆಯನ್ನು ಜಾರಿಗೆ ತರಬೇಕೆಂಬ ಬೇಡಿಕೆಯೊಂದಿಗೆ `ಕರ್ನಾಟಕ ಬೆಳೆಗಾರರ ಒಕ್ಕೂಟ’ದ ಪ್ರತಿನಿಧಿಗಳು ಕಂದಾಯ ಸಚಿವ ಆರ್.ಅಶೋಕ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಉನ್ನತ ಶಿಕ್ಷಣ ಸಚಿವ ಮುನಿರತ್ನ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ್ದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಏರ್ಪಡಿಸಿದ್ದ ಈ ಭೇಟಿಯಲ್ಲಿ ಬೆಳೆಗಾರರ ಒಕ್ಕೂಟವು ಕಾಡಾನೆ ಹಾವಳಿಗೆ ಪರಿಹಾರ, 10 ಎಚ್.ಪಿ.ವರೆಗಿನ ಪಂಪ್ ಸೆಟ್ ಬಳಸುವ ಕಾಫಿ ಬೆಳಗಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿ ಮನ್ನಾವನ್ನು 2022ಕ್ಕೂ ವಿಸ್ತರಿಸಬೇಕು ಎಂಬ ಬೇಡಿಕೆಗಳನ್ನೂ ಸಲ್ಲಿಸಿತು.

ಒಕ್ಕೂಟದ ಪರವಾಗಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಡಾ.ಎಚ್.ಟಿ. ಮೋಹನ್ ಕುಮಾರ್, 10 ಎಕರೆ ಕಾಫಿ ತೋಟವಿರುವ ಬೆಳೆಗಾರರಿಗೆ ಇಷ್ಟೇ ವಿಸ್ತೀರ್ಣದ ಒತ್ತುವರಿ ಭೂಮಿಯನ್ನು ಭೋಗ್ಯದ ಆಧಾರದ ಮೇಲೆ ನೀಡಲಾಗುವುದು ಎಂದು ಈ ಹಿಂದೆ ರೂಪಿಸಿದ ಗುತ್ತಿಗೆ ನಿಯಮಗಳಲ್ಲಿ ಹೇಳಲಾಗಿತ್ತು. ಆದರೆ ಈ ಯೋಜನೆ ಜಾರಿಗೆ ಬಂದಿಲ್ಲ. ಇದನ್ನು ಜಾರಿಗೊಳಿಸಿದರೆ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಅನುಕೂಲವಾಗುತ್ತದೆ ಎಂದರು.

ಕಂದಾಯ ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದಲ್ಲದೆ, ಒತ್ತುವರಿ ಜಮೀನಿಗೆ ಈಗ ವಿಧಿಸಿರುವ ನೋಂದಣಿ ಶುಲ್ಕದ ಶೇ.10ರಷ್ಟು ವಾರ್ಷಿಕ ಮೌಲ್ಯವು ಅಧಿಕವಾಗಿದೆ. ಇದನ್ನು ಶೇ.5ಕ್ಕೆ ಇಳಿಸಿ, 35 ವರ್ಷಗಳ ಅವಧಿಗೆ ಭೋಗ್ಯಕ್ಕೆ ಕೊಟ್ಟರೆ ಇದರಿಂದ ಸರಕಾರದ ಬೊಕ್ಕಸಕ್ಕೆ 765 ಕೋಟಿ ರೂ. ವರಮಾನ ಬರಲಿದೆ ಎಂದು ಬೆಳೆಗಾರರ ಒಕ್ಕೂಟದ ನಿಯೋಗವು ಸಚಿವರ ಗಮನಕ್ಕೆ ತಂದಿತು.

ಜೊತೆಗೆ ಸರಕಾರಿ ಭೂ ಕಬಳಿಕೆ ಕಾಯ್ದೆಯ 192ಎ ಪರಿಚ್ಛೇದದ ಅಡಿಯಲ್ಲಿ, ಒತ್ತುವರಿ ಮಾಡಿಕೊಂಡಿರುವ ಸಣ್ಣ ರೈತರು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದು, ಬಂಧನದ ಭೀತಿಯಲ್ಲಿದ್ದಾರೆ. ಆದ್ದರಿಂದ ಈ ಕಠಿಣ ನಿಯಮಗಳಿಗೆ ಸೂಕ್ತ ತಿದ್ದುಪಡಿ ತಂದು, ಗ್ರಾಮೀಣ ಭಾಗದ ಕೃಷಿ ಜಮೀನಿಗೆ ವಿನಾಯಿತಿ ನೀಡಬೇಕು ಎಂದು ಒಕ್ಕೂಟದ ಪ್ರತಿನಿಧಿಗಳು ಕೋರಿದರು. ಇವುಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ : ದೋಟಿಹಾಳ: ಸೂಕ್ತ ಕಟ್ಟಡದ ಕೊರತೆ; ಶಾಲಾ ವರಾಂಡದಲ್ಲಿ ಮಕ್ಕಳಿಗೆ ಪಾಠ ಕೇಳುವ ಶಿಕ್ಷಕರು

ಕಾಡಾನೆ ಹಾವಳಿಗೆ ಪರಿಹಾರ ಕೋರಿಕೆ

ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿಗಳು ವಿಪರೀತವಾಗಿದ್ದು ಬೆಳೆ ಮತ್ತು ಪ್ರಾಣಹಾನಿ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಸೌರಬೇಲಿ ಅಗತ್ಯವಾಗಿದ್ದು ಇದಕ್ಕೆ ಶೇ.90ರಷ್ಟು ಸಬ್ಸಿಡಿ ಕೊಡಬೇಕು. ಅಲ್ಲದೆ, ಕಾಫಿ ಬೆಳೆ ಪ್ರದೇಶದಲ್ಲಿ ಬೀಡು ಬಿಟ್ಟಿರುವ 230ಕ್ಕೂ ಹೆಚ್ಚು ಕಾಡಾನೆಗಳನ್ನು ಸ್ಥಳಾಂತರಿಸಬೇಕು. ರೈಲ್ವೆ ಕಂಬಿ ಬಳಸಿ ತಡೆಗೋಡೆ ನಿರ್ಮಿಸಿ, ಮೂರು ಜಿಲ್ಲೆಗಳಲ್ಲೂ ಟೆಂಟಿಕಲ್ ಫೆನ್ಸಿಂಗ್ ವ್ಯವಸ್ಥೆಯನ್ನು ವಿಸ್ತರಿಸಬೇಕು. ಕಾಡಾನೆ ದಾಳಿಯಿಂದ ಪ್ರಾಣ ಕಳೆದುಕೊಳ್ಳುವವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತು.

ಶಾಸಕರಾದ ಕೆ.ಜಿ.ಬೋಪಯ್ಯ, ಎಸ್. ಕೆ. ಕುಮಾರಸ್ವಾಮಿ, ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಕೃಷ್ಣಪ್ಪ ಇದ್ದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಇದ್ದರು.

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.