ಕಾಗಿಣಾ ಏತ ನೀರಾವರಿಗೆ ಸಂಪುಟ ಅಸ್ತು

Team Udayavani, Dec 22, 2021, 9:51 AM IST

1map

ಕಲಬುರಗಿ: ಬಹು ದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಮಹತ್ವಾಕಾಂಕ್ಷಿಯಾದ ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿಗೆ ಕಟ್ಟುವ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದರಿಂದ ಈ ಭಾಗದಲ್ಲಿ ಹಸಿರು ಕ್ರಾಂತಿಗೆ ನಾಂದಿ ಹಾಡಿದಂತಾಗಿದೆ ಎಂದು ಸೇಡಂ ಮತಕ್ಷೇತ್ರದ ಶಾಸಕ, ಡಿಸಿಸಿ ಬ್ಯಾಂಕ್‌-ಕೆಕೆಆರ್‌ಟಿಸಿ ಅಧ್ಯಕ್ಷ, ರಾಜ್ಯ ಬಿಜೆಪಿ ವಕ್ತಾರ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಸೇಡಂ ತಾಲೂಕಿನ 30 ಹಳ್ಳಿ, ಚಿಂಚೋಳಿ ತಾಲೂಕಿನ 14, ಚಿತ್ತಾಪುರ ತಾಲೂಕಿನ ನಾಲ್ಕು ಹಳ್ಳಿಗಳು ಸೇರಿ ಒಟ್ಟಾರೆ 47 ಹಳ್ಳಿಗಳ 25 ಸಾವಿರ ಹೆಕ್ಟೇರ್‌ ಪ್ರದೇಶ ನೀರಾವರಿಯಾಗುವ ಮಹತ್ವದ ಏತ ನೀರಾವರಿ ಯೋಜನೆಗೆ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದರಿಂದ ಬಹು ದಿನಗಳ ಕನಸು ನನಸಾದಂತಾಗಿದೆ ಎಂದಿದ್ದಾರೆ.

ಕಾಗಿಣಾ ನದಿಗೆ ಈ ಹಿಂದೆಯೇ ಎರಡು ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ವೀರೇಂದ್ರ ಪಾಟೀಲ ಮುಖ್ಯಮಂತ್ರಿ ಆಗಿದ್ದಾಗಲೇ ಕಾಗಿಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಗ್ರಾಮಗಳ ಮುಳುಗಡೆ ಹಾಗೂ ಆರ್ಥಿಕ ಸಮಸ್ಯೆಯಿಂದ ಕೈ ಬಿಡಲಾಗಿತ್ತು. ಸುದೀರ್ಘ‌ ವರ್ಷದ ಬಳಿಕ ಈಗ ನದಿ ನೀರು ಸದುಪಯೋಗಕ್ಕೆ ಚಾಲನೆ ಸಿಕ್ಕಂತಾಗಿದೆ.

ಒಟ್ಟು 639ಕೋಟಿ ರೂ. ವೆಚ್ಚದ ಯಡ್ಡಳ್ಳಿ, ತರನಳ್ಳಿ ಏತ ನೀರಾವರಿ ಯೋಜನೆಗೆ ಮೊದಲ ಹಂತವಾಗಿ 143.80ಕೋಟಿ ರೂ. ಅನುದಾನ ನೀಡಲು ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಜಿಲ್ಲೆಯಲ್ಲಿ ಮಗದೊಂದು ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವ ಸಂಪುಟದ ಎಲ್ಲ ಸದಸ್ಯರು ಅನುಮೋದನೆ ನೀಡಿದಂತಾಗಿದ್ದು, ಅಭಿನಂದನೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಕುರಿತು ಹಿಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿತ್ತು. ನಂತರ 639.30ಕೋಟಿ ರೂ.ಗಳ ವಿಸ್ತೃತ ಯೋಜನಾ ವರದಿ(ಡಿಪಿಆರ್‌)ಗೆ ಆಡಳಿತಾತ್ಮಕ ಅನುಮೋದನೆ ಕಲ್ಪಿಸಲಾಗಿತ್ತು. ಈಗ ಸಿಎಂ ಬಸವರಾಜ ಬೊಮ್ಮಾಯಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಶೀಘ್ರದಲ್ಲೇ ಅವರನ್ನು ಸೇಡಂಗೆ ಕರೆಯಿಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಒಟ್ಟಾರೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಕಲ್ಯಾಣ ಕರ್ನಾಟಕದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ಕಾಗಿಣಾ ಏತ ನೀರಾವರಿ ಯೋಜನೆಯಡಿ ಕಾಲುವೆಗಳಿಂದ ನೀರು ಪೂರೈಕೆಯಾಗುವುದಿಲ್ಲ. ಹೀಗಾಗಿ ಜರ್ಮನ್‌ ತಂತ್ರಜ್ಞಾನ ಮೂಲಕ ದೊಡ್ಡ ಪೈಪ್‌ಲೈನ್‌ ಮುಖಾಂತರ ಜಮೀನುಗಳಿಗೆ ನೀರುಹರಿಸಲಾಗುವುದು. ಒಂದುಹನಿ ನೀರು ಎಲ್ಲಿಯೂ ಸೋರಿಕೆಯಾಗುವುದಿಲ್ಲ. ಜಮೀನುಗಳಿಗೆ ಪೈಪಲೈನ್‌ ಸೇರಿದಂತೆ ನೀರು ಹರಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. -ರಾಜಕುಮಾರ ಪಾಟೀಲ, ತೇಲ್ಕೂರ, ಶಾಸಕ, ಸೇಡಂ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.