“ಕೋರ್ಟ್‌ ಡಿಕ್ರಿಯಂತೆ ಆರ್‌ಟಿಸಿ ದಾಖಲಿಸಿ’


Team Udayavani, Dec 24, 2021, 5:40 AM IST

“ಕೋರ್ಟ್‌ ಡಿಕ್ರಿಯಂತೆ ಆರ್‌ಟಿಸಿ ದಾಖಲಿಸಿ’

ಬೆಳಗಾವಿ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ಡಿಕ್ರಿ/ರಾಜಿ ಡಿಕ್ರಿಯ ಆಧಾರದಲ್ಲಿ ಆರ್‌ಟಿಸಿ ದಾಖಲಾಗದೆ ಅತಂತ್ರದಲ್ಲಿರುವ ಸಾರ್ವಜನಿಕರ ಪರವಾಗಿ ವಿಧಾನ ಪರಿಷತ್‌ನ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಗಮನ ಸೆಳೆದಿದ್ದಾರೆ.

ಅನೇಕ ವರ್ಷಗಳಿಂದ ದ.ಕ. ಸಹಿತ ಉಡುಪಿ ಜಿಲ್ಲೆಯಲ್ಲಿ ನ್ಯಾಯಾಲಯದ ಡಿಕ್ರಿ ಆಧಾರ ದಲ್ಲಿ ಆರ್‌ಟಿಸಿ ದಾಖಲಾಗದೆ 8 ಸಾವಿರಕ್ಕೂ ಅಧಿಕ ಪ್ರಕರಣಗಳಿವೆ. ಈ ಕುರಿತು ಉದಯವಾಣಿ ಮುಖ್ಯ ಆವೃತ್ತಿಯಲ್ಲಿ ವರದಿ ಸಹಿತ ಬಿತ್ತರಿಸಿ ಸರಕಾರದ ಗಮನ ಸೆಳೆಯಲಾಗಿತ್ತು.

ಒಂದು ವರ್ಷಗಳ ಬಳಿಕ ಪುತ್ತೂರು ಪ್ರಕರಣ ಹಾಗೂ ಬೆಳ್ತಂಗಡಿ ಪ್ರಕರಣವೊಂದಕ್ಕೆ ಸಂಬಂಧಿಸಿ ಕಕ್ಷಿದಾರರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳು 11ಇ ನಕ್ಷೆ ಕಡ್ಡಾಯವಲ್ಲ ಎಂದು ಆದೇಶ ನೀಡಿ ಪಹಣಿ ದಾಖಲಿಸಲು ನಿರ್ದೇಶನ ನೀಡಿತ್ತು.

ಇದನ್ನೂ ಓದಿ:ರೌಡಿಶೀಟರ್ ಗಳ ಪರೇಡ್; ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ!

ಆದರೆ ಉಳಿದ ಸಾವಿರಾರು ಮಂದಿ ಪಹಣಿ ದಾಖಲಾಗದೆ, ಗೃಹ ನಿರ್ಮಾಣ ಸಹಿತ ಪ್ರತಿಯೊಂದು ಹಂತದ ಯೋಜನೆಗೆ ತಡೆಯಾ ಗಿದೆ. ಈ ವಿಚಾರವನ್ನು ಕೆ. ಹರೀಶ್‌ ಕುಮಾರ್‌ ಅಧಿವೇಶನದಲ್ಲಿ ಪ್ರಸ್ತಾವಿಸಿದ್ದು, ಇದಕ್ಕೆ ಕಂದಾಯ ಸಚಿವ ಆರ್‌. ಅಶೋಕ್‌ ಅವರ ಪರ ಉತ್ತರಿಸಿದ ಸಭಾ ನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೋರ್ಟ್‌ ಡಿಕ್ರಿಯಂತೆ ಪಹಣಿ ದಾಖಲಿಸಲು ಇರುವ ತೊಡಕು ಸರಿಪಡಿಸುವಂತೆ ಬೆಳ್ತಂಗಡಿ ವಕೀಲರ ಸಂಘ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪಸಿಂಹ ನಾಯಕ್‌ ಮತ್ತು ಕೆ. ಹರೀಶ್‌ ಕುಮಾರ್‌ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.