ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ : ಸಚಿವೆ ಜೊಲ್ಲೆ

Team Udayavani, Dec 24, 2021, 1:11 PM IST

1-joll

ಬೆಳಗಾವಿ : ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರಾದ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ 3 ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15 ನೇ ಸಭೆಯಲ್ಲಿ ಮಾತನಾಡಿದ ಅವರು,
ಬೆಳಗಾವಿ ಜಿಲ್ಲೆಯಲ್ಲಿರುವ ಪ್ರಮುಖ ಎ ದರ್ಜೆಯ ದೇವಸ್ಥಾನ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಭಕ್ತರುಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ದಿಯ ಕುರಿತು ಚರ್ಚೆ ನಡೆಸಿದರು. ಈಗಾಗಲೇ 3.58 ಕೋಟಿ ವೆಚ್ಚದಲ್ಲಿ ಬಳಿಗಾರ ಕಟ್ಟೆ ರಸ್ತೆಯ ಅಭಿವೃದ್ದಿ ಕಾರ್ಯದ ಬಗ್ಗೆ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನದ ಬಿಡುಗಡೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು. ದೇವಾಲಯದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಂಸ್ಕರಣಾ ಯೋಜನೆಯ ಡಿಪಿಆರ್‌ ನ್ನು ಶೀಘ್ರವಾಗಿ ಸಿದ್ದಗೊಳಿಸಿ ಅನುಷ್ಠಾನಗೊಳಿಸಲು ಆದೇಶಿದರು.

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲೊಂದಾಗಿರುವ ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳನ್ನು ದತ್ತು ತಗೆದುಕೊಳ್ಳುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳ ಸೂಕ್ತ ನಿರ್ವಹಣೆ ಸಾಧ್ಯವಾಗಲಿದ್ದು, ಈ ಬಗ್ಗೆ ದತ್ತು ತಗೆದುಕೊಳ್ಳಬೇಕಾದ ಸಿ ದರ್ಜೆಯ ದೇವಸ್ಥಾನಗಳ ಪಟ್ಟಿಯನ್ನು ತಯಾರಿಸಿ ಪ್ರಾಧಿಕಾರಕ್ಕೆ ಕಳುಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಸಾಮಾನ್ಯ ಸಂಗ್ರಹಣ ನಿಧಿಗೆ ಪ್ರತಿವರ್ಷ ಶೇಕಡಾ 10 ರಷ್ಟು ವಂತಿಗೆಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಕಡಿಮೆ ಆದಾಯವಿರುವ ದೇವಸ್ಥಾನಗಳ ಅಭಿವೃದ್ದಿಗೆ ಬಳಸಲಾಗುತ್ತದೆ. ಈ ನಿಧಿಗೆ ವಂತಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕಾಗಿದೆ. ಪ್ರತಿವರ್ಷ ದೇವಸ್ಥಾನದ ಲೆಕ್ಕಪತ್ರ ಪರಿಶೀಲನೆಯಾಗಿ ಜೂನ್‌ ತಿಂಗಳ ಒಳಗಾಗಿ ಆಯುಕ್ತರಿಗೆ ಆಡಿಟ್‌ ವರದಿ ನೀಡದಿದ್ದಲ್ಲಿ ಆಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದರು.

ರಾಮದುರ್ಗದ ಗೊಡಚಿ ವೀರಭದ್ರ ದೇವಸ್ಥಾನ, ಬೆಳಗಾವಿಯ ಪಂಥಬಾಳೇಕುಂದ್ರಿ ಶ್ರೀ ದತ್ತ ದೇವಸ್ಥಾನ, ಶ್ರೀ ಪರಮಾರ್ಥನಿಕೇತನ ಹರಿಮಂದಿರ, ರಾಯಭಾಗದ ಮಹಾಕಾಳಿ (ಮಾಯಕ್ಕ) ದೇವಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಅಭಿವೃದ್ದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರಕಾರದ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಮುಜರಾಯಿ ಆಯುಕ್ತರಾದ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.