ರಾಜ್ಯಗಳಿಂದ ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ ಆಂಶಿಕ ವಾಪಸ್?
Team Udayavani, Dec 26, 2021, 7:20 AM IST
ಹೊಸದಿಲ್ಲಿ: ದಶಕಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿರುವ ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ (ಎಎಫ್ಎಸ್ಪಿಎ)ಯನ್ನು ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ಭಾಗದ ಕೆಲವು ರಾಜ್ಯಗಳಿಂದ ಆಂಶಿಕವಾಗಿ ವಾಪಸ್ ಪಡೆವ ಸಾಧ್ಯತೆಗಳು ಇವೆ. ಮಾಸಾಂತ್ಯದ ಒಳಗಾಗಿ ಕೇಂದ್ರ ಸರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಶರ್ಮ ಬಿಸ್ವಾ ಮತ್ತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಪ್ಯೂ ರಿಯೋ ಅವರ ಜತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ನಾಗಾಲ್ಯಾಂಡ್ನಲ್ಲಿ ಮಾಸಾಂತ್ಯಕ್ಕೆ ಸದ್ಯ ವಿಸ್ತರಿಸಲಾಗಿ ರುವ ವಿಶೇಷ ಕಾಯ್ದೆಯ ಅವಧಿ ಮುಕ್ತಾಯವಾಗಲಿದೆ. ಒಂದು ವೇಳೆ, ಕಾಯ್ದೆ ಮುಂದುವರಿಸದೇ ಇದ್ದರೆ ರಾಜ್ಯ ಪೊಲೀಸ್ ಇಲಾಖೆಯೇ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಹೊಣೆ ಹೊರಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ನಾಗಾಲ್ಯಾಂಡ್ ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಪ್ರಧಾನಿ ಜತೆಗೆ ಕೇಂದ್ರ ಗೃಹ ಸಚಿವರು ಮಾತುಕತೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಪ್ರಕಟವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು