ಹೊಸ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ಉತ್ತಮ ಸೇವೆ ಕೊಡಲು ಕರ್ನಾಟಕ ಬ್ಯಾಂಕ್ ಸದಾ ಸಿದ್ದ


Team Udayavani, Dec 28, 2021, 7:42 PM IST

ಹೊಸ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ಉತ್ತಮ ಸೇವೆ ಕೊಡಲು ಕರ್ನಾಟಕ ಬ್ಯಾಂಕ್ ಸದಾ ಸಿದ್ದ

ಭಟ್ಕಳ: ಕರ್ಣಾಟಕ ಬ್ಯಾಂಕ್ ತಂತ್ರಜ್ಞಾನದಲ್ಲಿ ಮುಂದೆ ಇದ್ದು ಈಗಾಗಲೇ ನಾವು 2020-24ಕ್ಕೆ ಅಗತ್ಯವಾದ ತಂತ್ರಜ್ಞಾನದ ಅವಿಷ್ಕಾರದಲ್ಲಿದ್ದೇವೆ ಎಂದು ಕರ್ಣಾಟಕ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಅವರು ಹೇಳಿದರು.

ಅವರು ಕರ್ಣಾಟಕ ಬ್ಯಾಂಕ್ ಭಟ್ಕಳ ಶಾಖೆಯ 46ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇಂದು ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಯು ಅನಿವಾರ್ಯವಾಗಿದೆ. ನಮ್ಮ ಬ್ಯಾಂಕು ಬಹಳ ಹಿಂದೆಯೇ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದ ಅವರು ಭಟ್ಕಳ ಶಾಖೆಯು ನಡೆದು ಬಂದ ಕುರಿತು ವಿವರಿಸುತ್ತಾ ಗ್ರಾಹಕರ ಸಹಕಾರದಿಂದ ಬ್ಯಾಂಕು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಗ್ರಾಹಕರ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬ್ಯಾಂಕು ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೆಲವೊಂದು ಸಾಲದ ಬಡ್ಡಿದರವನ್ನು ಕಡಿಮೆ ಇಟ್ಟಿದೆ. ಗ್ರಾಹಕರ ವ್ಯವಹಾರವನ್ನು ನೋಡಿಕೊಂಡು ಬಡ್ಡಿದರಲ್ಲಿ ಸ್ವಲ್ಪ ವ್ಯತ್ಯಾಸವನ್ನು ಕೂಡಾ ಮಾಡಿಕೊಡಲು ಬ್ಯಾಂಕು ತಯಾರಿದೆ ಎಂದೂ ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು ಮಾತನಾಡಿದ ಶ್ರೀ ಕುಟುಮೇಶ್ವರ ಸೌಹಾರ್ಧ ಸಹಕಾರಿಯ ಅಧ್ಯಕ್ಷ ರಾಮಾ ಖಾರ್ವಿ ಬ್ಯಾಂಕ್ ಬೆಳವಣಿಗೆಗೆ ಗ್ರಾಹಕರು ನೀಡುವ ಸಹಕಾರ ಕಾರಣ. ಇಲ್ಲಿನ ಶಾಖೆಯು ಅತ್ಯಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಸಿಬ್ಬಂದಿಗಳ ಉತ್ತಮ ಸೇವೆಯಿಂದ ತಾಲೂಕಿನಲ್ಲಿ ಗ್ರಾಹಕರನ್ನು ಸೆಳೆದುಕೊಳ್ಳುವತ್ತ ಯಶಸ್ವೀಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿವೃತ್ತ ಶಾಖಾಧಿಕಾರಿ ತಿಮ್ಮಪ್ಪಯ್ಯ ಶಿರೂರು ಅವರು ಮಾತನಾಡಿ ಕರ್ಣಾಟಕ ಬ್ಯಾಂಕ್ ನಡೆದು ಬಂದ ದಾರಿಯನ್ನು ವಿವರಿಸುತ್ತಾ, ಭಟ್ಕಳ ಶಾಖೆಯ ಆರಂಭದಿಂದ ಇಲ್ಲಿಯ ತನಕದ ಬೆಳವಣಿಗೆಯನ್ನು ವಿವರಿಸಿದರು. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಬ್ಯಾಂಕಿನ ಶಾಖೆಯನ್ನು ಗಣಕೀಕೃತಗೊಳಿಸಿದ್ದನ್ನು ಸ್ಮರಿಸಿದ ಅವರು ಗ್ರಾಹಕರ ಸಹಕಾರದಿಂದ ಶಾಖೆ 46 ವರ್ಷಗಳ ಕಾಲ ಬೆಳೆದು ಬಂದಿದ್ದು ಪ್ರೌಢಾವಸ್ಥೆಯಲ್ಲಿದೆ ಎಂದರು.

ಇದನ್ನೂ ಓದಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಲಲಿತ ಕಲೆಗಳಿಗೆ ಉತ್ತಮ ಪ್ರೋತ್ಸಾಹ:ಶಾಸಕ ಸುನಿಲ್ ನಾಯ್ಕ್

ಗ್ರಾಹಕರುಗಳಾದ ಗುತ್ತಿಗೆದಾರ ಟಿ.ಡಿ. ನಾಯ್ಕ, ಎಂ.ಜಿ. ಎಂಟರ್‍ಪ್ರೈಸಸ್ ಮಾಲಕ ಪರಮೇಶ್ವರ ಭಟ್ಟ, ನ್ಯಾಯವಾದಿ ಜೆ.ಡಿ. ಭಟ್ಟ, ಹೋಟೆಲ್ 4ಸೀಸನ್ ಪಾಲುದಾರ ನರೇಶ ಶೆಟ್ಟಿ, ಹಿರಿಯ ಗ್ರಾಹಕ ಹಾಗೂ ಕಟ್ಟಡದ ಮಾಲಿಕ ರಾಧಾಕೃಷ್ಣ ಭಟ್ಟ, ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಾಯಲದ ಕಾರ್ಯದರ್ಶಿ ಪ್ರಕಾಶ ಎನ್. ಭಟ್ಟ ಸಾಲೆಮನೆ ಮುಂತಾದವರು ಮಾತನಾಡಿದರು.

ಶಾಖೆಯ ಪ್ರಬಂಧಕ ಸುನಿಲ್ ಪೈ, ಹಿಂದಿನ ಶಾಖಾಧಿಕಾರಿ ವಿನಾಯಕ ಮೊಗೇರ, ಸಿಬ್ಬಂದಿಗಳು, ಬ್ಯಾಂಕಿನ ಚಾನಲ್ ಪಾರ್ಟನರ್ ಎಲ್.ಐ.ಸಿ. ಶಾಖಾಧಿಕಾರಿ ಗುರುದತ್ತ ನಾಯಕ, ಭಾರತಿ ಎಕ್ಸಾದ ರಘುನಂದನ್ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.