ಜೋಹಾನ್ಸ್ ಬರ್ಗ್ ಟೆಸ್ಟ್: ರಬಾಡಾ, ಅಂಪೈರ್ ಗೆ ಕ್ಷಮೆ ಕೇಳಿದ ಕೆ.ಎಲ್.ರಾಹುಲ್

Team Udayavani, Jan 4, 2022, 9:41 AM IST

ಜೋಹಾನ್ಸ್ ಬರ್ಗ್ ಟೆಸ್ಟ್: ರಬಾಡಾ, ಅಂಪೈರ್ ಗೆ ಕ್ಷಮೆ ಕೇಳಿದ ಕೆ.ಎಲ್.ರಾಹುಲ್

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 202 ರನ್ ಗಳಿಗೆ ಆಟ ಮುಗಿಸಿದೆ. ಹಂಗಾಮಿ ನಾಯಕ ಕೆ.ಎಲ್ ರಾಹುಲ್ ಅರ್ಧಶತಕ ಮತ್ತು ರವಿಚಂದ್ರನ್ ಅಶ್ವಿನ್ ಅವರ ಬಹುಮೂಲ್ಯ 46 ರನ್ ಸಹಾಯದಿಂದ ಭಾರತ ತಂಡ ಇನ್ನೂರರ ಗಡಿ ದಾಟಿದೆ.

ಬೆನ್ನು ನೋವಿನ ಕಾರಣದಿಂದ ವಿರಾಟ್ ಕೊಹ್ಲಿ ಪಂದ್ಯದಿಂದ ಹೊರಗುಳಿದ ಕಾರಣ ಕೆ ಎಲ್ ರಾಹುಲ್ ನಾಯಕತ್ವ ವಹಿಸಿದರು. ಈ ಮೂಲಕ ಭಾರತದ 34 ನೇ ಟೆಸ್ಟ್ ನಾಯಕರಾದರು.

ಕಳೆದ ಪಂದ್ಯದ ಶತಕವೀರ ರಾಹುಲ್ ಈ ಪಂದ್ಯದಲ್ಲೂ ಉತ್ತಮ ಆರಂಭ ಒದಗಿಸಿದ್ದಾರೆ. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಕ್ರೀಸ್ ಕಚ್ಚಿ ನಿಂತ ರಾಹುಲ್ ಅರ್ಧಶತಕ ಬಾರಿಸಿದರು.

ಇದನ್ನೂ ಓದಿ:ಪ್ರೊ ಕಬಡ್ಡಿ 8ನೇ ಆವೃತ್ತಿ: ಬೆಂಗಾಲ್‌ಗೆ ಬೆದರಿದ ಪಿಂಕ್‌ ಪ್ಯಾಂಥರ್

ಭಾರತದ ಮೊದಲ ಇನ್ನಿಂಗ್ಸ್‌ನ ಐದನೇ ಓವರ್‌ನಲ್ಲಿ ರಾಹುಲ್ ಆಫ್ರಿಕಾ ಬೌಲರ್ ಕಗಿಸೋ ರಬಾಡಗೆ ಕ್ಷಮೆ ಕೇಳಿದ ಘಟನೆ ನಡೆಯಿತು. ಐದನೇ ಓವರ್ ನ ಮೂರನೇ ಎಸೆತ ಎಸೆಯಲು ರಬಾಡಾ ಓಡಿ ಬಂದರು. ಕೊನೆ ಕ್ಷಣದಲ್ಲಿ ಕೈ ಎತ್ತಿದ ರಾಹುಲ್, ರಬಾಡರನ್ನು ತಡೆದರು. ಕೂಡಲೇ ಎದುರು ಬಂದ ರಾಹುಲ್ ಅವರು, ಬೌಲರ್ ರಬಡಾ, ಸ್ಲಿಪ್ ಫೀಲ್ಡರ್ಸ್ ಮತ್ತು ಅಂಪೈರ್ ಗೆ ಕ್ಷಮೆ ಕೇಳಿದರು.

ಮಿಂಚಿದ ರಾಹುಲ್‌, ಅಶ್ವಿ‌ನ್‌: ಭಾರತದ ಸರದಿಯಲ್ಲಿ ಮಿಂಚಿದ ಇಬ್ಬರು ಆಟಗಾರರೆಂದರೆ ಕೆ.ಎಲ್‌.ರಾಹುಲ್‌ ಮತ್ತು ಆರ್‌.ಅಶ್ವಿ‌ನ್‌. ದಿಢೀರ್‌ ನಾಯಕತ್ವದ ಒತ್ತಡದ ನಡುವೆಯೂ ಗಟ್ಟಿಯಾಗಿ ನಿಂತ ರಾಹುಲ್‌ 133 ಎಸೆತಗಳನ್ನು ನಿಭಾಯಿಸಿ ಭರ್ತಿ 50 ರನ್‌ ಹೊಡೆದರು. ಸಿಡಿಸಿದ್ದು 9 ಬೌಂಡರಿ. ಇದು ಭಾರತದ ಸರದಿಯ ಏಕೈಕ ಅರ್ಧ ಶತಕವಾಗಿತ್ತು. ರಾಹುಲ್‌ 46ನೇ ಓವರ್‌ನಲ್ಲಿ 5ನೇ ವಿಕೆಟ್‌ ರೂಪದಲ್ಲಿ ಪೆವಿಲಿಯನ್‌ ಸೇರಿಕೊಂಡರು. ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯದ ಬಳಿಕ ತಂಡವನ್ನು ಆಧರಿಸಿ ನಿಂತ ಆರ್‌. ಅಶ್ವಿ‌ನ್‌ 50 ಎಸೆತ ಎದುರಿಸಿ ಬಹುಮೂಲ್ಯ 46 ರನ್‌ ಹೊಡೆದರು. ಇದರಲ್ಲಿ 6 ಬೌಂಡರಿ ಸೇರಿತ್ತು.

ಕೈಕೊಟ್ಟ ಪೂಜಾರ, ರಹಾನೆ: ಕೈಕೊಟ್ಟವರಲ್ಲಿ ಪ್ರಮುಖರೆಂದರೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ. ನಾಯಕ ವಿರಾಟ್‌ ಕೊಹ್ಲಿ ಗೈರಲ್ಲಿ ನಿಂತು ಆಡಬೇಕಿದ್ದ ಈ ಅನುಭವಿ ಆಟಗಾರರು ತೀರಾ ಬೇಜವಾಬ್ದಾರಿಯಿಂದ ಆಡಿ ತಮಗೆ ಲಭಿಸಿದ ಮತ್ತೂಂದು ಅವಕಾಶವನ್ನು ವ್ಯರ್ಥಗೊಳಿಸಿದರು. ಪೂಜಾರ 33 ಎಸೆತ ಎದುರಿಸಿದರೂ ಗಳಿಸಿದ್ದು ಮೂರೇ ರನ್‌. ರಹಾನೆ ಅವರದು “ಶೂನ್ಯ ಸಾಧನೆ’. ಇವರಿಬ್ಬರನ್ನು ಡ್ನೂನ್‌ ಒಲಿವರ್‌ ಸತತ ಎಸೆತಗಳಲ್ಲಿ ಕೆಡವಿ ದಕ್ಷಿಣ ಆಫ್ರಿಕಾಕ್ಕೆ ಮೇಲುಗೈ ಒದಗಿಸಿದರು. ಜತೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಬೇಟೆಯನ್ನೂ ಪೂರ್ತಿಗೊಳಿಸಿದರು. ಇವರಂತೆ ಮತ್ತೂಂದು ಅವಕಾಶ ಪಡೆದ ಶಾರ್ದೂಲ್‌ ಠಾಕೂರ್‌ ಕೂಡ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದರು

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.