ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ


Team Udayavani, Jan 4, 2022, 8:16 PM IST

ದ್ಗಹಜಹಗ್ದಸ್ಗಹುಯತ್ದ

ಬೆಳಗಾವಿ: ಜಿಲ್ಲೆಯಲ್ಲಿ 298 ಲಸಿಕಾ ಕೇಂದ್ರ ಸ್ಥಾಪಿಸುವ ಮೂಲಕ 2.47 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಕುರಿತು ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳ ಮನವೊಲಿಸಿ 15ರಿಂದ 18 ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ನಗರದ ಎಸ್‌.ಜಿ. ಬಾಳೇಕುಂದ್ರಿ ಎಂಜಿನಿಯರ್‌ ಕಾಲೇಜು ಸಭಾಂಗಣದಲ್ಲಿ ಸೋಮವಾರ 15ರಿಂದ 18 ವಯಸ್ಸಿನ ಮಕ್ಕಳಿಗೆ ಕೊವ್ಯಾಕ್ಸಿನ್‌ ಲಸಿಕಾಕರಣ ಜಿಲ್ಲಾಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಜಿಲ್ಲೆಯ 2.47 ಲಕ್ಷ ಮಕ್ಕಳಿಗೆ ಲಸಿಕೆ ಒದಗಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸಂಭವನೀಯ 3ನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಲಸಿಕಾಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜ. 10ರಿಂದ ಬೂಸ್ಟರ್‌ ಡೋಸ್‌ ನೀಡಲಾಗುವುದು. ಲಸಿಕಾಕರಣ ಕುರಿತು ಮಾಧ್ಯಮಗಳು ಮಕ್ಕಳು ಮತ್ತು ಪಾಲಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಲಸಿಕಾಕರಣ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಂಭವನೀಯ 3ನೇ ಅಲೆಯ ನಿರ್ವಹಣೆಗೆ ಸಂಬಂ ಧಿಸಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್‌ ನಿಯಂತ್ರಣಕ್ಕಾಗಿ ಎಲ್ಲರೂ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಸೋಂಕು ಹರಡುವಿಕೆ ತಡೆಗಟ್ಟಲು ಸಹಕರಿಸಬೇಕು. ದೇಶದಲ್ಲಿ 240 ಕೋಟಿ ಲಸಿಕೆಗಳನ್ನು ಉತ್ಪಾದಿಸುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದರು. ಇದಲ್ಲದೇ ಆಕ್ಸಿಜನ್‌ ಬೆಡ್‌, ಆಕ್ಸಿಜನ್‌ ಉತ್ಪಾದನೆ, ಪ್ರಯೋಗಾಲಯ ಸ್ಥಾಪನೆ ಸೇರಿದಂತೆ ದೇಶದ ವೈದ್ಯಕೀಯ ವ್ಯವಸ್ಥೆ ಬಲಪಡಿಸಿದರು.

ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಜತೆಗೆ ಪ್ರತಿ ಜಿಲ್ಲೆಗಳಲ್ಲಿ ಪ್ರಯೋಗಾಲಯ ಹಾಗೂ ಆಕ್ಸಿಜನ್‌ ಉತ್ಪಾದನಾ ಘಟಕಗಳನ್ನು ಕೂಡ ಸ್ಥಾಪಿಸಲು ಕ್ರಮಗಳನ್ನು ಕೈಗೊಂಡರು ಎಂದು ವಿವರಿಸಿದರು. ವಿಧಾನ ಪರಿಷತ್‌ ಸದಸ್ಯ ಸಾಬಣ್ಣ ತಳವಾರ ಮಾತನಾಡಿ, ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಸೋಂಕಿನಿಂದ ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಇದನ್ನು ಅರಿತುಕೊಂಡು ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.

ಆರ್‌ಸಿಎಚ್‌ ಅ ಧಿಕಾರಿ ಡಾ| ಐ.ಪಿ. ಗಡಾದ ಪ್ರಾಸ್ತಾವಿಕ ಮಾತನಾಡಿದರು. ಶಾಸಕ ಅನಿಲ್‌ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪೊಲೀಸ್‌ ಆಯುಕ್ತ ಡಾ| ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ಡಾ| ರುದ್ರೇಶ ಘಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಎಸ್‌.ವಿ. ಮುನ್ಯಾಳ, ಡಿಡಿಪಿಐ ಬಸವರಾಜ ನಾಲತವಾಡ ಇತರರು ಇದ್ದರು.

 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.