ತೊಗರಿ ಬೆಳೆಗೆ ಗೊಡ್ಡು ರೋಗದ ಬಾಧೆ

Team Udayavani, Jan 5, 2022, 11:38 AM IST

5toordaal

ಜೇವರ್ಗಿ: ತಾಲೂಕಿನ ಹಲವೆಡೆ ತೊಗರಿ ಬೆಳೆಗೆ ಗೊಡ್ಡು ರೋಗದ ಬಾಧೆ ಕಾಣಿಸಿಕೊಂಡಿದ್ದು, ರೈತಾಪಿ ವರ್ಗ ಮತ್ತೆ ಆತಂಕ ಎದುರಿಸುವಂತಾಗಿದೆ.

ಈ ಹಿಂದೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅಲ್ಲದೇ ಕಳೆದ ವರ್ಷದ ಭೀಮಾನದಿಯ ಭೀಕರ ಪ್ರವಾಹ ಸಾವಿರಾರು ರೈತರ ಬದುಕು ಬೀದಿಗೆ ತಂದು ನಿಲ್ಲಿಸಿದೆ.

ಪ್ರಸಕ್ತ ವರ್ಷ ಸುರಿದ ಮಳೆಯಿಂದ ಕೂಡ ಸಾಕಷ್ಟು ಬೆಳೆಹಾನಿಯಾಗಿದೆ. ಈಗ ಅಳಿದುಳಿದ ಬೆಳೆಗೂ ಗೊಡ್ಡು ರೋಗದ ಬಾಧೆ ಆವರಿಸಿಕೊಂಡಿದೆ. ಹೀಗಾಗಿ ತಾಲೂಕಿನಲ್ಲಿ ತೊಗರಿ ಇಳುವರಿ ಕಡಿಮೆಯಾಗುವ ಆತಂಕ ಎದುರಾಗಿದೆ. ಸಾವಿರಾರು ರೂ. ಖರ್ಚು ಮಾಡಿ ಬೆಳೆಯಲಾಗಿರುವ ಬೆಳೆಯು ವಿವಿಧ ಕಾರಣಗಳಿಂದ ಹಾಳಾಗುತ್ತಿದ್ದು, ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ತಾಲೂಕಿನ ರೇವನೂರ ಗ್ರಾಮದ ಬಳಿಯ ಅಬ್ದುಲ್‌ ಹಮೀದ್‌ ರಜಾಕಸಾಬ್‌ ಇನಾಂದಾರ ಎಂಬುವರು ರದ್ದೇವಾಡಗಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಳೆದ 2021ರ ಜೂನ್‌ 25ರಂದು 30 ಕೆಜಿ ತೊಗರಿ ಬೀಜ ಟಿಎಸ್‌-3 ಆರ್‌ ಖರೀದಿ ಮಾಡಿ 7.12 ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದಾರೆ. ಕೆವಿಕೆಯಿಂದ ಪಡೆದ ಬೀಜ ಬಿತ್ತನೆ ನಂತರ ಬೆಳೆಗೆ ಸಂಪೂರ್ಣ ಗೊಡ್ಡು ರೋಗದ ಬಾಧೆ ತಗುಲಿದೆ. 5 ರಿಂದ 6 ಅಡಿ ತೊಗರಿ ಗಿಡ ಬೆಳೆದರೂ ಒಂದೂ ಹೂ, ಕಾಯಿ ಬಿಟ್ಟಿಲ್ಲ. ಇದೇ ರೀತಿ ತಾಲೂಕಿನ ಹಲವಾರು ಕಡೆ ತೊಗರಿ ಬೆಳೆಗೆ ಗೊಡ್ಡು ರೋಗ ತಗುಲಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ:‘ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ’ಚಾಲನೆ

ರೈತ ಅಬ್ದುಲ್‌ ಹಮೀದ್‌ ಹಾಗೂ ಇನ್ನಿತರ ರೈತರು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳ ಗಮನಕ್ಕೆ ತಂದ ನಂತರ ರಾಯಚೂರ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಬಂದು ಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಇಲ್ಲಿಯವರೆಗೂ ಯಾವ ಕಾರಣಕ್ಕಾಗಿ ತೊಗರಿ ಬೆಳೆಗೆ ಗೊಡ್ಡು ರೋಗ ಬಾಧೆ ತಗುಲಿದೆ ಎಂಬ ವರದಿ ನೀಡುವಲ್ಲಿ ವಿಜ್ಞಾನಿಗಳು ವಿಫಲರಾಗಿದ್ದಾರೆ. ಈ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡದೇ ಉಡಾಫೆ ಮಾಡುತ್ತಿದ್ದಾರೆ ಎಂದು ಟಿಪ್ಪು ಸುಲ್ತಾನ್‌ ಕಮಿಟಿ ಅಧ್ಯಕ್ಷ ಮೋಹಿಯುದ್ದೀನ್‌ ಇನಾಂದಾರ ಆರೋಪಿಸಿದ್ದಾರೆ.

ರೈತರು ಸಾಲಸೂಲ ಮಾಡಿ ಬೀಜ ಗೊಬ್ಬರ ಖರೀದಿ ಮಾಡಿ ಬಿತ್ತನೆ ಮಾಡಿದ್ದಾರೆ. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನೀಡಿದ ಬೀಜವೇ ಗೊಡ್ಡು ಇರುವಾಗ ರೈತರು ನಂಬ ಬೇಕು ಯಾರಿಗೆ? ಕೂಡಲೇ ಸಂಬಂಧ ಪಟ್ಟವರು ತಾಲೂಕಿನಲ್ಲಿ ಗೊಡ್ಡು ರೋಗಕ್ಕೆ ತುತ್ತಾದ ಎಲ್ಲ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ವಿಳಂಬ ಮಾಡಿದರೇ ರೈತರೊಂದಿಗೆ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಮೋಹಿಯುದ್ದೀನ್‌ ಇನಾಂದಾರ ಎಚ್ಚರಿಸಿದ್ದಾರೆ.

ರೈತರಿಂದ ದೂರು ಬಂದ ನಂತರ ರಾಯಚೂರ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಹೊಲಗಳಿಗೆ ಬಂದು ತೊಗರಿ ಬೆಳೆ ಪರಿಶೀಲನೆ ನಡೆಸಿ ಹೋಗಿದ್ದಾರೆ. ಶೀಘ್ರದಲ್ಲಿಯೇ ಜಂಟಿ ಕೃಷಿ ನಿರ್ದೇಶಕರಿಗೆ ವರದಿ ನೀಡಲಿದ್ದಾರೆ. -ಡಾ| ಸಂಜೀವ್‌ ಬೆಲ್ಲದ, ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ ರದ್ದೇವಾಡಗಿ

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.