ಪುನೀತ್ ಸ್ಮರಣಾರ್ಥ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ನಟಿ ರಿಷಿಕಾ ರಾಜ್
Team Udayavani, Jan 6, 2022, 4:17 PM IST
ಮೈಸೂರು: ಸ್ಯಾಂಡಲ್ವುಡ್ ನಟಿ ರಿಷಿಕಾ ರಾಜ್ ಅವರು ತಮ್ಮ 14 ಇಂಚಿನಷ್ಟು ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಮಾದರಿಯಾಗಿದ್ದಾರೆ.
ಟಗರು ಚಿತ್ರದ ಮೂಲಕ ಖ್ಯಾತಿ ಗಳಿಸಿರುವ ರಿಷಿಕಾ ಅವರು ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ಹೇರ್ ಮತ್ತು ಬ್ಯೂಟಿ ಅಸೋಸಿಯೇಷನ್ ಮೈಸೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಂಗವಾಗಿ ತಮ್ಮ ಕೂದಲನ್ನು ದಾನ ಮಾಡಿದರು. ರಿಷಿಕಾ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಸುಮಾರು 70 ದಾನಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
”ಕ್ಯಾನ್ಸರ್ ರೋಗಿಗಳಿಗೆ ತನ್ನ ಕೂದಲನ್ನು ದಾನ ಮಾಡಲು ತುಂಬಾ ಸಂತೋಷವಾಗಿದೆ. ‘ವಿದ್ಯಾದಾನ,ಕನ್ಯಾದಾನದಂತೆ ಕೇಶದಾನ ಕೂಡ ಮಹತ್ವದ್ದಾಗಿದೆ” ಎಂದು ಅವರು ಹೇಳಿಕೆ ನೀಡಿದ್ದಾರೆ.
“ನನ್ನ ಅನೇಕ ಸ್ನೇಹಿತರು ಮತ್ತು ಸಂಬಂಧಿಕರು ಕ್ಯಾನ್ಸರ್ನಿಂದ ಬಳಲುತ್ತಿರುವುದನ್ನು ನಾನು ನೋಡಿದ್ದೇನೆ. ಕೀಮೋಥೆರಪಿಗೆ ಒಳಗಾದ ನಂತರ ರೋಗಿಗಳು ತಮ್ಮ ಕೂದಲನ್ನು ಕಳೆದುಕೊಳ್ಳುತ್ತಾರೆ. ಅದನ್ನು ನೋಡುವುದು ತುಂಬಾ ನೋವಿನ ಸಂಗತಿ. ದೇವರು ನಮಗೆ ಉತ್ತಮ ಆರೋಗ್ಯ ಮತ್ತು ಉತ್ತಮ ಕೂದಲನ್ನು ನೀಡಿದ್ದಾನೆ, ಆದ್ದರಿಂದ ನಾನು ದಾನ ಮಾಡುತ್ತಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು