ರಾಮದುರ್ಗದಲ್ಲಿ ಸಂಪೂರ್ಣ ಬೆಂಬಲ

Team Udayavani, Jan 9, 2022, 10:35 PM IST

vಗದಹಗಹ್​ದದಚಷ

ರಾಮದುರ್ಗ: ಕೊರೊನಾ ರೂಪಾಂತರಿ ವೈರಸ್‌ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಶನಿವಾರ ಹಾಗೂ ರವಿವಾರ ಜಾರಿ ಮಾಡಿದ ವೀಕೆಂಡ್‌ ಕರ್ಫ್ಯೂಗೆ ತಾಲೂಕಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.

ಪಟ್ಟಣ ಪ್ರದೇಶ ಸೇರಿದಂತೆ ತಾಲೂಕಿನಲ್ಲಿನ ಎಲ್ಲ ಗ್ರಾಮೀಣ ಪ್ರದೇಶಗಳಲ್ಲೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಸ್ತೆಗೆ ಬರದೇ ಮನೆಯಲ್ಲಿ ಕುಳಿತು ರಾಜ್ಯ ಸರ್ಕಾರದ ಆದೇಶಕ್ಕೆ ಬೆಂಬಲ ಸೂಚಿಸಿದರು. ಅಂಗಡಿ-ಮುಂಗಟ್ಟು ಬಂದ್‌: ಪಟ್ಟಣದಲ್ಲಿ ದಿನವಿಡೀ ಜನಜಂಗುಳಿಯಿಂದ ತುಂಬಿರುವ ಹೋಟೆಲ್‌, ಅಂಗಡಿ-ಮುಂಗಟ್ಟುಗಳು, ಮಾರುಕಟ್ಟೆಯನ್ನು ಕರ್ಫ್ಯೂಗೆ ಬೆಂಬಲಿಸಿ ಸ್ವಯಂ ಪ್ರೇರಣೆಯಿಂದ ಬಂದ್‌ ಮಾಡಲಾಗಿತ್ತು. ಇದರಿಂದ ರಾಮದುರ್ಗ ಪಟ್ಟಣ ಜನ ಹಾಗೂ ವಾಹನ ಸಂಚಾರವಿಲ್ಲದೇ ಸಂಪೂರ್ಣ ಬಿಕೋ ಎನ್ನುತ್ತಿತ್ತು.

ತರಕಾರಿ-ಕಿರಾಣಿ ವ್ಯಾಪಾರ: ವೀಕೆಂಡ್‌ ಕರ್ಫ್ಯೂ ಇರುವುದರಿಂದ ಬೆಳಗ್ಗೆ 6ರಿಂದ 10ರವರೆಗೆ ತರಕಾರಿ ಹಾಗೂ ಕಿರಾಣಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಜನರು ಬೇಗ ಮಾರುಕಟ್ಟೆಗೆ ಆಗಮಿಸಿ ದಿನಸಿ ಸೇರಿದಂತೆ ತರಕಾರಿ ವಸ್ತು ಖರೀದಿಸಿದರು. 10 ಗಂಟೆ ನಂತರ ಎಲ್ಲವನ್ನು ಬಂದ್‌ ಮಾಡಲಾಯಿತು. ರಸ್ತೆಗಿಳಿಯದ ಜನ: ಶನಿವಾರ ಹಾಗೂ ರವಿವಾರ ಕರ್ಫ್ಯೂ ಜಾರಿ ಮಾಡಿದ್ದರಿಂದ ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರ ಬರದಂತೆ ಸರ್ಕಾರ ಆದೇಶ ನೀಡಿದೆ.

ಮೊದಲ ದಿನದ ಕರ್ಫ್ಯೂಗೆ ಜನತೆ ಸ್ಪಂದಿಸಿದ್ದರಿಂದ ದಿನವೆಲ್ಲ ಜನಸಂಚಾರ ದಿಂದ ತುಂಬಿರುವ ಪಟ್ಟಣದ ರಸ್ತೆಗಳು ಸಂಪೂರ್ಣ ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಚಾರ ಆರಂಭ: ಕರ್ಫ್ಯೂ ಇದ್ದರೂ ಬೇರೆ ಬೇರೆ ನಗರ ಪ್ರದೇಶಕ್ಕೆ ತೆರಳುವ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸರ್ಕಾರ ಸಾರಿಗೆ ವ್ಯವಸ್ಥೆಗೆ ಅವಕಾಶ ನೀಡಿದ್ದರಿಂದ ಸೇವೆ ಕಲ್ಪಿಸಲಾಗಿತ್ತು. ಅಗತ್ಯ ವಸ್ತುಗಳ ಸೇವೆ ಓಪನ್‌: ಅಗತ್ಯ ವಸ್ತುಗಳ ಸೇವೆಗಳಾದ ಔಷಧಿ, ಹಾಲು, ಆಸ್ಪತ್ರೆ, ಗ್ಯಾಸ್‌ ಸೇರಿದಂತೆ ಇತರೆ ಕೆಲ ಅಗತ್ಯ ಸೇವೆ ತೆರೆಯಲಾಗಿತ್ತು

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.