ಬೆಂಗಳೂರಿನಲ್ಲಿ ಒಮಿಕ್ರಾನ್ ಹೆಚ್ಚಳ: ಸೋಂಕಿತರ ಸಂಖ್ಯೆ 479 ಕ್ಕೆ
Team Udayavani, Jan 10, 2022, 5:30 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಸೋಮವಾರ ಒಂದೇ ದಿನ ಬೆಂಗಳೂರಿನಲ್ಲಿ 146 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಬೆಂಗಳೂರಿನಲ್ಲಿ ಇಂದು 146 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 479 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ರವಿವಾರ 12,000 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 4 ಮಂದಿ ಕೊರೊನಾದಿಂದ ಮೃತಪಟ್ಟಿದ್ದರು. ರಾಜ್ಯದ ಪಾಸಿಟಿವಿಟಿ ದರ ಶೇ.6.33ಕ್ಕೆ ಏರಿಕೆಯಾಗಿದ್ದು, ಹತ್ತು ದಿನದಲ್ಲಿ ದಿನವೊಂದಕ್ಕೆ ಸರಾಸರಿ 4,000 ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ನಗರದಲ್ಲಿ 9,020 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 40,000 ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಸೋಂಕಿನ ಪ್ರಮಾಣ ಶೇ.10ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಶೇ.3.91 ಪಾಸಿಟಿವಿಟಿ ದರ ದಾಖಲಾಗಿದೆ. ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕೇವಲ ಹತ್ತು ದಿನಗಳಲ್ಲಿ 41,000ದ ಗಡಿ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ