ನನ್ನಷ್ಟು ಯೋಗ್ಯತೆ ಬಿಜೆಪಿಯಲ್ಲಿ ಯಾರಿಗಿದೆ ? ನಾನೊಬ್ಬ ಸಾಮಾನ್ಯ ಕಾರ್ಯಕರ್ತ; ಯತ್ನಾಳ್

Team Udayavani, Jan 10, 2022, 8:23 PM IST

ನನ್ನಷ್ಟು ಯೋಗ್ಯತೆ ಬಿಜೆಪಿಯಲ್ಲಿ ಯಾರಿಗಿದೆ ? ನಾನೊಬ್ಬ ಸಾಮಾನ್ಯ ಕಾರ್ಯಕರ್ತ;  ಯತ್ನಾಳ್

ಧಾರವಾಡ : ರಾಜಕೀಯ ಜ್ಯೋತಿಷಿ ನಾನಲ್ಲ. ಆದರೆ ಕಾಕತಾಳೀಯ ಎಂಬಂತೆ ನಾನು ಹೇಳಿದ್ದು ನಿಜವಾಗುತ್ತದೆ. ಅದರನ್ವಯ ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಪಂಚ ರಾಜ್ಯ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸ್ವಲ್ಪ ಹೆಚ್ಚೂ ಕಡಿಮೆ ಆಗಬಹುದು. ಆದರೆ, ಒಟ್ಟಾರೆ ಒಳ್ಳೆಯ ದಿನಗಳು ಬರಲಿವೆ. 2023ರ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಏನೇ ನಿರ್ಣಯ ಕೈಗೊಂಡರೂ ಅದಕ್ಕೆ ನಾವು ಬದ್ಧ ಎಂದರು.

ಅಟಲ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಸಮಯದಲ್ಲಿ ಅವರ ನೇತೃತ್ವದ ಸರಕಾರದಲ್ಲಿ ಮಂತ್ರಿ ಆಗಿದ್ದೆ. ನನ್ನಷ್ಟು ಯೋಗ್ಯತೆ ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ? ಸಚಿವ ಸಂಪುಟದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಕ್ಕಾಗಿ ವಾಜಪೇಯಿ ನನಗೆ ಪತ್ರ ಕೊಟ್ಟಿದ್ದಾರೆ. ಅಟಲಜೀ ಹಸ್ತಾಕ್ಷರದಿಂದ ಪತ್ರ ಪಡೆದ ವ್ಯಕ್ತಿ ನಾನಾಗಿದ್ದೇನೆ. ಆದರೆ, ದುರ್ದೈವ ಅಂದರೆ ರಾಜಕಾರಣದಲ್ಲಿ ನೇರವಾಗಿ ಮಾತನಾಡಬಾರದು. ಇಲ್ಲಿ ಚಮಚಾಗಿರಿ ಮಾಡಬೇಕು. ಆದರೆ, ನಾನು ಅದನ್ನು ಮಾಡೋದಿಲ್ಲ. ಹೀಗಾಗಿಯೇ ನಾನು ಹಿಂದೆ ಉಳಿದಿದ್ದೇನೆ ಎಂದರು.

ಬಿಜೆಪಿ ಪಕ್ಷದಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಅತಿವೃಷ್ಟಿ ಸಂಬಂಧ, ಸಾಮಾಜಿಕ ನ್ಯಾಯದ ಸಲುವಾಗಿ ಗುಡುಗಿದ್ದೇನೆ ಹೊರತು ಮಂತ್ರಿ ಮಾಡಿ, ಸಿಎಂ ಮಾಡಿ ಎಂದಿಗೂ ಗುಡುಗಿಲ್ಲ. ಶಾಸಕ ಅರವಿಂದ ಬೆಲ್ಲದ ಅವರು ಸಚಿವರಾಗಲು ಅರ್ಹತೆ ಹೊಂದಿದ್ದಾರೆ. ನಾನು ಕೇಳುತ್ತಿರುವುದು ಎಲ್ಲ ಸಮುದಾಯಗಳಿಗೆ ನ್ಯಾಯ ಮಾತ್ರ. ಆ ನ್ಯಾಯ ಕೊಟ್ಟರೆ ಮಾತ್ರ ನಾನು ಸಚಿವ ಸಂಪುಟ ಸೇರುತ್ತೇನೆ ಎಂದರು.

ಇದನ್ನೂ ಓದಿ : ನನಗೆ ಕೋವಿಡ್ ದೃಢಪಟ್ಟಿದೆ, ಆರೋಗ್ಯವಾಗಿದ್ದೇನೆ : ಸಿಎಂ ಬೊಮ್ಮಾಯಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗದಂತೆ ಮಾಡಿದ್ದು, ಅಲ್ಲದೇ ಉದ್ದೇಶಪೂರ್ವಕವಾಗಿ ಅಧಿವೇಶನವನ್ನು ಕಾಂಗ್ರೆಸ್ ಹಾಳು ಮಾಡಿದೆ. ಸಿದ್ದರಾಮಯ್ಯ ಎಂಟೆಂಟು ತಾಸು ಮಾತನಾಡುತ್ತಾರೆ. ಅವರ ಶಾಸಕರಿಗೂ ಅವಕಾಶ ಕೊಡುವುದಿಲ್ಲ. ಇದು ದೊಡ್ಡ ದುರಂತ. ಸಿದ್ದರಾಮಯ್ಯ ಹೇಳಿದ್ದನ್ನೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಅವರಿಗೆ ಗೊತ್ತಿಲ್ಲ. ಟಿಪ್ಪು ಸುಲ್ತಾನ್ ವರ್ಣನೆಯಲ್ಲೇ ಕಾಂಗ್ರೆಸ್ ಹಾಳಾಗುತ್ತಿದೆ. ಇದೀಗ ಪಾದಯಾತ್ರೆಯಲ್ಲೂ ಅವರೆಲ್ಲರ ಬಣ್ಣ ಬಯಲಾಗುತ್ತಿದ್ದು, ಎಲ್ಲಾ ಚಾನಲ್ನಲ್ಲೂ ಬಣ್ಣ ಬಯಲಾಗುತ್ತಿದೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕೆಂಬುದು ಸಿಎಂ ಬಸವರಾಜ ಬೊಮ್ಮಾಯಿ ಮನಸ್ಸಿನಲ್ಲೂ ಇದೆ. ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಡುವಂತೆ ನಾವು ಕೇಳಿದ್ದೇವೆ. ಯಾರಿಗೂ ಅಂಜಿಕೆ, ಬೆದರಿಕೆ ಹಾಕಿಲ್ಲ. ಮೀಸಲಾತಿ ಕೊಡುವ ದಿಕ್ಕಿನಲ್ಲಿ ಸಿಎಂ ಕೆಲಸ ಮಾಡುತ್ತಿದ್ದು, ಬಜೆಟ್ ಪೂರ್ವದಲ್ಲಿ ನಮ್ಮ ಬೇಡಿಕೆ ಈಡೇರಿಸುವ ಭರವಸೆ ಇದೆ.
-ಬಸನಗೌಡ ಪಾಟೀಲ ಯತ್ನಾಳ

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.