ಅಂಗನವಾಡಿ ನೌಕರರ ಸಂಘ ಪ್ರತಿಭಟನೆ


Team Udayavani, Jan 11, 2022, 12:40 PM IST

11anganavadi

ಜೇವರ್ಗಿ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಿಂದ ನೂರಾರು ಜನ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಹಶೀಲ್ದಾರ್‌ ವಿನಯಕುಮಾರ ಪಾಟೀಲ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡಬೇಕು. ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲ ಸೌಲಭ್ಯ ಒದಗಿಸಬೇಕು. ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಬಿಡುಗಡೆ ಮಾಡಬೇಕು. ಮೊಟ್ಟೆಗಳನ್ನು ಆಹಾರ ಪದಾರ್ಥಗಳ ಜತೆಯಲ್ಲಿಯೇ ಸರಬರಾಜು ಮಾಡಬೇಕು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಐಎಲ್‌ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿಷ್ಟ ವೇತನ ಜಾರಿ ಮಾಡಬೇಕು. ಅಂಗನವಾಡಿ ನೌಕರರನ್ನು ಖಾಯಂಗೊಳಿಸಬೇಕು, ಖಾಯಂಗೊಳಿಸುವವೆಗೂ ಕನಿಷ್ಟ 26 ಸಾವಿರ ರೂ. ವೇತನ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಗಜರಾಬಾಯಿ ಹಾಲಘತ್ತರಗಾ, ಪ್ರಾಂತ ರೈತ ಸಂಘದ ಅಧ್ಯಕ್ಷ ಸುಭಾಷ ಹೊಸಮನಿ, ಸುಮಿತ್ರಾ ಕಟ್ಟಿ ಜೇವರ್ಗಿ, ಇಂದಿರಾ ಶಿವಪೂರ, ಅನುಸುಬಾಯಿ ರೇವನೂರ, ನೀಲಮ್ಮ ಅರಳಗುಂಡಗಿ, ಸುನಿತಾ ನೇರಡಗಿ, ಧುರ್ಗಮ್ಮ ಕೂಡಿ, ಲಲಿತಾ ಮುತ್ತಕೋಡ, ಬಸಮ್ಮ ಪಾಟೀಲ, ಹಸೀನಾಬೇಗಂ ಅರಳಗುಂಡಗಿ, ಗೀತಾ ನರಿಬೋಳ, ಕಮಲಾ ಬಿರಾಳ, ಕಮಲಾ ನೆಲೋಗಿ, ಶಂಕರಲಿಂಗ ರೇವನೂರ ಸೇರಿದಂತೆ ನೂರಾರು ಜನ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.