ವಿಷ ಸೇವನೆಗೆ ರೈತನ ಪ್ರಯತ್ನ; ಮೆಸ್ಕಾಂ ಕಚೇರಿ ಎದುರು ರೈತರ ಅರೆಬೆತ್ತಲೆ ಪ್ರತಿಭಟನೆ


Team Udayavani, Jan 11, 2022, 12:48 PM IST

ವಿಷ ಸೇವನೆಗೆ ರೈತನ ಪ್ರಯತ್ನ; ಮೆಸ್ಕಾಂ ಕಚೇರಿ ಎದುರು ರೈತರ ಅರೆಬೆತ್ತಲೆ ಪ್ರತಿಭಟನೆ

ಸಾಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರೈತರಿಗೆ ಮೆಸ್ಕಾಂ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಸೋಮವಾರ ತಾಲೂಕು ರೈತ ಸಂಘದ ವತಿಯಿಂದ ಮೆಸ್ಕಾ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ನಂತರ ರೈತ ಸೂರಜ್ ತಮಗೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ವಿಷ ಸೇವಿಸುವ ಪ್ರಯತ್ನ ನಡೆಸಿದಾಗ ಪೊಲೀಸರು ಮತ್ತು ರೈತ ಸಂಘದವರು ತಡೆದ ಘಟನೆ ಸಹ ನಡೆಯಿತು.

ರೈತರಿಗೆ ರಾಜಕಾರಣಿಗಳೇ ಶತ್ರುಗಳಾಗಿದ್ದಾರೆ. ರೈತರು ಮೆಸ್ಕಾಂಗೆ ಸಂಬಂಧಪಟ್ಟಂತೆ ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಮುಂದಾದರೆ ಜನಪ್ರತಿನಿಧಿಗಳ ಪಟಾಲಂಗಳು ವಿರೋಧ ಮಾಡುವ ಮೂಲಕ ರೈತವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಸಾಗರ, ಹೊಸನಗರ, ಸೊರಬ ತಾಲ್ಲೂಕಿನ ರೈತರಿಗೆ ಈತನಕ ಗುಣಮಟ್ಟದ ವಿದ್ಯುತ್ ಸಿಗುತ್ತಿಲ್ಲ. ಅಕ್ರಮ ಸಕ್ರಮದಲ್ಲಿ ರೈತರಿಗೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ. ಟ್ರಾನ್ಸ್‌ಫಾರ್ಮರ್ ಹಾಕಿಕೊಡಿ ಎಂದು ಕೇಳಿದರೆ ಅದಕ್ಕೂ ಸ್ಪಂದಿಸುತ್ತಿಲ್ಲ. ಒಂದರ್ಥದಲ್ಲಿ ರೈತರಿಗೆ ಮೆಸ್ಕಾಂ ಶಾಪವಾಗಿ ಪರಿಣಮಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮೆಸ್ಕಾಂನ ಪ್ರಚಾರ ಸಮಿತಿ ಸಂಚಾಲಕ ಸೂರಜ್ ಎಂಬುವವರು ತಮ್ಮ ಜಮೀನಿಗೆ ಟ್ರಾನ್ಸ್‌ಫಾರ್ಮರ್ ಹಾಕಿಕೊಡಿ ಎಂದು ಹಣ ಕಟ್ಟಿದ್ದರೂ ಈತನಕ ಸಂಪರ್ಕ ನೀಡಿಲ್ಲ. ಶಾಸಕರ ಹಿಂಬಾಲಕರು ಒತ್ತಡ ತರುತ್ತಿದ್ದಾರೆ ಎಂದು ಮೆಸ್ಕಾಂ ಅಧಿಕಾರಿಗಳು ಹೇಳುತ್ತಿರುವುದು ದುರದೃಷ್ಟಕರ ಸಂಗತಿ. ತಕ್ಷಣ ರೈತ ಸೂರಜ್ ಅವರ ಸಮಸ್ಯೆಯನ್ನು ಬಗೆಹರಿಸಬೇಕು. ತಾಲೂಕಿನಲ್ಲಿ ರೈತರ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ರೈತ ಸಂಘ ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಲೂಕಿನಲ್ಲಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಶಾಸಕರ ಹಿಂಬಾಲಕರು ಎಲ್ಲದ್ದಕ್ಕೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಶಾಸಕರು ತಮಗೆ ಮತ ನೀಡಿದವರಿಗೆ ಮಾತ್ರ ಸೌಲಭ್ಯ ಕೊಡುತ್ತಿದ್ದಾರೆ. ರೈತರು ತೀವ್ರ ಸಂಕಷ್ಟದಲ್ಲಿದ್ದರೂ ಶಾಸಕರು ಗಮನ ಹರಿಸುತ್ತಿಲ್ಲ ಎಂದು ದೂರಿದರು.

ವಿಷ ಸೇವನೆ ಯತ್ನ: ರೈತರು ಮತ್ತು ಮೆಸ್ಕಾಂ ಅಧಿಕಾರಿಗಳು ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಕೊಠಡಿಯಲ್ಲಿ ಸಭೆ ನಡೆಯುತ್ತಿದ್ದಾಗ ರೈತ ಸೂರಜ್ ವಿಷ ಸೇವನೆ ಮಾಡಲು ಮುಂದಾದ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಮತ್ತು ರೈತರು ಸೂರಜ್ ಅವರಿಂದ ವಿಷದ ಬಾಟಲ್ ಕಿತ್ತುಕೊಂಡರು. ನಂತರ ಸೂರಜ್ ನಮ್ಮ ಹಕ್ಕು ಪಡೆಯಲು ಸಾಧ್ಯವಾಗದೆ ಇದ್ದಲ್ಲಿ ಬದುಕಿದ್ದು ಏನು ಪ್ರಯೋಜನ ಸತ್ತು ಹೋಗುತ್ತೇನೆ ಎಂದು ಪಟ್ಟುಹಿಡಿದ ಘಟನೆ ನಡೆಯಿತು. ನಂತರ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಅವರು ತ್ರೈಮಾಸಿಕ ಸಭೆಗೆ ಹೋಗಲು ಮುಂದಾದಾಗ ಸೂರಜ್ ಅವರು ಜೀಪ್‌ಗೆ ಅಡ್ಡ ಮಲಗಿದ ಘಟನೆ ಸಹ ನಡೆಯಿತು.

ಪ್ರತಿಭಟನೆಯಲ್ಲಿ ಹೊಯ್ಸಳ ಗಣಪತಿಯಪ್ಪ, ಸುರೇಶ್ ಬೆಳ್ಳಿಕೊಪ್ಪ, ಸೂರಜ್, ಮಾಲತೇಶ್, ಚಂದ್ರಪ್ಪ, ದೇವರಾಜ್, ಲೋಹಿತ್, ಶಶಿ ಬರೂರು, ಕುಮಾರ ಗೌಡ, ಸುನಿಲ್, ಕಿರಣ್, ಬದರೀಶ್, ಅಮೃತರಾಜ್, ಓಂಕಾರ್ ಎಸ್.ವಿ., ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಆರ್.ಜಯಂತ್, ತೀ.ನ.ಶ್ರೀನಿವಾಸ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.