ಬೆಂಗಳೂರು: ಯುವ ವೈದ್ಯನ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ!
Team Udayavani, Jan 14, 2022, 1:24 PM IST
ಬೆಂಗಳೂರು: ಇತ್ತೀಚೆಗೆ ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವ ವೈದ್ಯನ ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂಬುದು ರೈಲ್ವೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಭೂಪಾಲ್ ಮೂಲದ ಯುವಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಹಳಷ್ಟು ಮಂದಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಮೂರು ತಿಂಗಳ ಹಿಂದೆ ಘಟನೆ ನಡೆದಿತ್ತು. ಆಗಷ್ಟೇ ಎಂಬಿಬಿಎಸ್ ವ್ಯಾಸಂಗ ಮುಗಿಸಿದ್ದ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು. ಈ ವೇಳೆ ಭೂಪಾಲ್ ಮೂಲದ ಆರೋಪಿ ಯುವತಿ ಎಂದು ನಕಲಿ ಖಾತೆ ತೆರೆದು, ವೈದ್ಯನ ಜತೆ ಚಾಟಿಂಗ್ ಆರಂಭಿಸಿದ್ದಾನೆ. ಕ್ರಮೇಣ ಇಬ್ಬರ ನಡುವೆ ಸ್ನೇಹ ಬೆಳದಿದೆ. ಈ ವೇಳೆ ಆರೋಪಿ ಯುವತಿಯ ಅಶ್ಲೀಲ ಫೋಟೋಗಳನ್ನು ಕಳುಹಿಸಿ, ವೈದ್ಯನಿಂದ ಕೆಲವೊಂದು ಫೋಟೋಗಳನ್ನು ಪಡೆದುಕೊಂಡು ಹನಿ ಟ್ರ್ಯಾಪ್ ಮಾಡಿದ್ದಾನೆ.
ವೈದ್ಯನ ಫೋಟೋಗಳನ್ನು ಇಟ್ಟುಕೊಂಡು ಆರೋಪಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅದರಿಂದ ಹೆದರಿದ ವೈದ್ಯ ಸುಮಾರು 70 ಸಾವಿರ ರೂ.ಅನ್ನು ಆತನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ. ಆದರೂ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಹೆದರಿದ ವೈದ್ಯ ಮೂರು ತಿಂಗಳ ಹಿಂದೆ ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈಲ್ವೆ ವಿಭಾಗದ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ