ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರ

ಸೋಂಕಿನಿಂದ ಮೃತರಾದವರ‌ ಕುಟುಂಬಗಳಿಗೆ ಪರಿಹಾರ

Team Udayavani, Jan 19, 2022, 7:10 AM IST

ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರ

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ತಲೆನೋವಾಗಿದ್ದ “ವಾರಸುದಾರಿಕೆ’ ಸಮಸ್ಯೆ ಪರಿಹಾರಕ್ಕೆ ಸರಕಾರ ಮಾರ್ಗೋಪಾಯ ಕಂಡು ಕೊಂಡಿದೆ. ಕುಟುಂಬಗಳಲ್ಲಿ ಮೂರ್‍ನಾಲ್ಕು ಮಂದಿ ನಮಗೇ ಪರಿಹಾರ ಸಿಗಬೇಕು ಎಂದು ಕ್ಲೈಮ್‌ ಮಾಡಿದ್ದ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಅರ್ಜಿ ಇತ್ಯರ್ಥವಾಗದೆ ಗೊಂದಲವೂ ಮೂಡಿತ್ತು.

ಇದಕ್ಕೆ ಪರಿಹಾರ ಎಂಬಂತೆ ಕಂದಾಯ ಇಲಾಖೆಯು ಆಯಾ ಕುಟುಂಬದ ಸದಸ್ಯರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ ಪರಿಹಾರದ ಚೆಕ್‌ ವಿತರಿಸಲು ತೀರ್ಮಾನಿಸಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.ಇದರಿಂದಾಗಿ ಇತ್ಯರ್ಥವಾಗದೆ ಉಳಿದಿದ್ದ ನೂರಾರು ಅರ್ಜಿಗಳಿಗೆ “ಮೋಕ್ಷ’ ದೊರಕಿದಂತಾಗಿದೆ.

ಅರ್ಜಿ ಇತ್ಯರ್ಥಕ್ಕೆ ಆದೇಶ
ಈ ಮಧ್ಯೆ ಕೊರೊನಾದಿಂದ ಸಾವು ಸಂಭವಿಸಿರುವ ಕುರಿತು ವಿವಾದಾತ್ಮಕ ಪ್ರಕರಣಗಳು ಎಂಬ ಕಾರಣಕ್ಕೆ ಸಾವಿರಾರು ಅರ್ಜಿ ವಿಲೇವಾರಿ ಆಗದೇ ಉಳಿದಿದ್ದವು. ಕೊರೊನಾದಿಂದ ಮೃತಪಟ್ಟರೂ ಅವರ ವಿವರಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದತ್ತಾಂಶದಲ್ಲಿ ಲಭ್ಯವಿಲ್ಲ, ನಮೂದಾಗಿಲ್ಲ ಎಂದು ಕೇಂದ್ರ ಸರಕಾರದ 50 ಸಾವಿರ ರೂ. ಪರಿಹಾರ ಕೂಡ ತಲುಪಿರಲಿಲ್ಲ. ಇದಕ್ಕಾಗಿ ಸರಕಾರ ಪ್ರತ್ಯೇಕ ಆದೇಶ ಹೊರಡಿಸಿದೆ.

ಮರಣ ಕಾರಣ ಕುರಿತು “ಮೆಡಿಕಲ್‌ ಸರ್ಟಿಫಿಕೆಟ್‌ ಆಫ್ ಕಾಸ್‌ ಆಫ್ ಡೆತ್‌’ನಲ್ಲಿ ಆಕ್ಷೇಪಣೆ ಸ್ವೀಕೃತವಾದ ಪ್ರಕರಣಗಳಲ್ಲಿ ಸಮಿತಿಯು ಪರಿಶೀಲಿಸಿ, ನಿಗದಿತ ನಮೂನೆಯಲ್ಲಿ ಕೊರೊನಾ ಸಾವಿನ ಬಗ್ಗೆ ಅಧಿಕೃತ ತಿದ್ದುಪಡಿ ಮರಣ ಪ್ರಮಾಣ ವಿತರಿಸಿ, ಜನನ ಮತ್ತು ಮರಣ ಮುಖ್ಯ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ವಾರ್‌ ರೂಂ ಲೈನ್‌ ಲಿಸ್ಟ್‌’ ದತ್ತಾಂಶದಲ್ಲೂ ಸೇರಿಸಲು ಸೂಚನೆ ನೀಡಲಾಗಿದೆ. ಅದೇ ರೀತಿ ಮರಣ ಪ್ರಮಾಣಪತ್ರದಲ್ಲಿ ಕೊರೊನಾ ಸಾವು ಎಂದು ದೃಢಪಟ್ಟಿದ್ದು, ಕೋವಿಡ್‌ ವಾರ್‌ರೂಂ ದತ್ತಾಂಶದಲ್ಲಿ ಮಾಹಿತಿ ಲಭ್ಯವಿಲ್ಲದ ಪ್ರಕರಣಗಳನ್ನೂ ಜಿಲ್ಲಾ ಮಟ್ಟದ ಸಮಿತಿಯೇ ಪರಿಶೀಲಿಸಿ ಇತ್ಯರ್ಥಪಡಿಸಬೇಕು ಎಂದು ತಿಳಿಸಲಾಗಿದೆ. ಇದರಿಂದ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ತ್ವರಿತವಾಗಿ ಇತ್ಯರ್ಥಗೊಳ್ಳಲಿವೆ.

ಎಷ್ಟು ಅರ್ಜಿಗಳು ಇತ್ಯರ್ಥ?
ಡಿಸೆಂಬರ್‌ ಅಂತ್ಯಕ್ಕೆ ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಂದ ಪರಿಹಾರಕ್ಕೆ 38,332 ಅರ್ಜಿಗಳು
ಬಂದಿದ್ದು, 26,852 ಅರ್ಜಿಗಳು ಪರಿಹಾರ ನೀಡಲು ಅಂಗೀಕಾರಗೊಂಡಿವೆ.

ಈ ಪೈಕಿ 13,401 ಎಪಿಎಲ್‌ ಮತ್ತು 13,451 ಬಿಪಿಎಲ್‌ ಕುಟುಂಬಗಳದ್ದಾಗಿದೆ. 7,402 ವಿಲೇವಾರಿಗೆ ಬಾಕಿ ಇದೆ. ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರಕಾರದ ವತಿಯಿಂದ ಒಂದು ಲಕ್ಷ ರೂ. ಮತ್ತು ಕೇಂದ್ರ ಸರಕಾರದ ಸೂಚನೆ ಮೇರೆಗೆ ಎಸ್‌ಆರ್‌ಎಫ್ ಮಾರ್ಗಸೂಚಿಯಡಿ 50 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ.

– ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.