ಜೆಡಿಎಸ್‌ ಟಿಕೆಟ್‌ಗೆ ಶಿವರಾಮೇಗೌಡ ಪೈಪೋಟಿ


Team Udayavani, Jan 23, 2022, 2:16 PM IST

ಜೆಡಿಎಸ್‌ ಟಿಕೆಟ್‌ಗೆ ಶಿವರಾಮೇಗೌಡ ಪೈಪೋಟಿ

ನಾಗಮಂಗಲ: ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್‌ ಪಕ್ಷದಲ್ಲಿ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದೆ.

ಹಾಲಿ ಶಾಸಕ ಸುರೇಶ್‌ಗೌಡರ ಅಧಿಕಾರ ಅವಧಿ ಇರುವಾಗಲೇ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ತಾಲೂಕಿನದ್ಯಾಂತ ಹೇಳಿಕೊಂಡು ಬರುತ್ತಿರುವ ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ, ಜೆಡಿಎಸ್‌ ಟಿಕೆಟ್‌ಗಾಗಿ ಶತಪ್ರಯತ್ನ ಪಡುತ್ತಿರುವುದು ಜೆಡಿಎಸ್‌ ಕಾರ್ಯಕರ್ತರಲ್ಲಿಗೊಂದಲಕ್ಕೆ ಕಾರಣವಾಗಿದೆ.

1989-1999 ರವರೆಗೆ ಪಕ್ಷೇತರವಾಗಿಸ್ಪರ್ಧಿಸಿ ಎರಡು ಅವಧಿಗೆ ಶಾಸಕರಾಗುವ ಮೂಲಕ ರಾಜಕೀಯ ಅಸ್ತಿತ್ವ ಕಂಡುಕೊಂಡಿದ್ದ ಶಿವರಾಮೇಗೌಡಅವರು, ಕೇವಲ ಆರು ತಿಂಗಳ ಅವಧಿಗೆ ಸಂಸದರಾಗಿದ್ದು, ಪೂರ್ಣಾವಧಿ ಅಧಿಕಾರ ಅನುಭವಿಸಲು ಸಾಧ್ಯವಾಗದ ಕಾರಣ ಈಗ ಶಾಸಕರಾಗುವ ಮಹತ್ವಾಕಾಂಕ್ಷೆಯೊಂದಿಗೆ ರಾಜಕೀಯಚಟುವಟಿಕೆಗಳನ್ನು ಬಿರುಸುಗೊಳಿಸಿರು ವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಕಾರ್ಯಚಟುವಟಿಕೆ ಬಿರುಸು: ಈ ಹಿಂದಿನಿಂದಲೂ ರಾಜಕೀಯವಾಗಿ ಒಂದಿಲ್ಲೊಂದು ವಿವಾದಗಳನ್ನು ಮೈಗಂಟಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದರೂ, ಅಧಿಕಾರ ಇರಲಿ ಇಲ್ಲದಿ ರಲಿ ಕ್ಷೇತ್ರದಲ್ಲಿ ಹಿಡಿತ ಸಾಧಿಸಿಕೊಂಡು ಬಂದಿರುವ ಶಿವರಾಮೇಗೌಡ ಅವರು ಇತ್ತೀಚಿನ ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಅಪ್ಪಾಜಿ ಗೌಡರು ಪರಾಭವಗೊಂಡಿದ್ದರೂ ತಮ್ಮ ಉತ್ಸಾಹವನ್ನು ಕಳೆದುಕೊಂಡಿಲ್ಲ. ಮತ್ತೂಮ್ಮೆ ಕ್ಷೇತ್ರದಲ್ಲಿ ಅಸ್ತಿತ್ವ ಕಂಡುಕೊಳ್ಳಲು ಕಾರ್ಯಚಟುವ ಟಿಕೆಗಳನ್ನು ಬಿರುಸುಗೊಳಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಟಿಕೆಟ್‌ಗಾಗಿ ಲಾಬಿ: ಎದುರಾಳಿ ಪಕ್ಷದ ನಾಯಕ ಚಲುವರಾಯಸ್ವಾಮಿ ಅವರ ಬಗ್ಗೆ ಮಾತನಾಡದಶಿವರಾಮೇಗೌಡರು, ಸ್ವಪಕ್ಷದ ಶಾಸಕ ಸುರೇಶ್‌ಗೌಡರ ಕಾರ್ಯವೈಖರಿಯನ್ನು ಮಾತ್ರ ಕಟುವಾಗಿ ಟೀಕಿಸುತ್ತಲೇ, ಶಾಸಕರ ವರ್ತನೆ ಸರಿಯಿಲ್ಲ ಎಂಬುದನ್ನು ಜೆಡಿಎಸ್‌ ವರಿಷ್ಠರಿಗೆ ಮನವರಿಕೆ ಮಾಡಿಕೊ ಡುವ ಪ್ರಯತ್ನದ ಜೊತೆಯಲ್ಲೇ ಪಕ್ಷದ ಟಿಕೆಟ್‌ ತಮಗೇ ಕೊಡುವಂತೆ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ನಿರೀಕ್ಷಿತ ಅಧಿಕಾರ ಸಿಗದೆ ಹತಾಶೆ: ಜೆಡಿಎಸ್‌ ಸೇರ್ಪಡೆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯ ಟಿಕೆಟ್‌ ನೀಡುವರೆಂಬ ವಿಶ್ವಾಸ ಹೊಂದಿದ್ದ ಶಿವರಾಮೇಗೌಡರು, ನಂತರ ಅಲ್ಪಾವಧಿಗೆ ಸಂಸದರಾಗಿ ಕಾರ್ಯನಿರ್ವಹಿಸಿ ದ್ದರೂ ನಿರೀಕ್ಷಿತ ಅಧಿಕಾರ ಸಿಗದ ಕಾರಣ ಶಾಸಕರಾಗುವಕನಸ್ಸನ್ನೊತ್ತು ಕಣಕ್ಕಿಳಿಯುವ ತಯಾರಿ ನಡೆಸಿದ್ದಾರೆ. 66 ವರ್ಷ ತುಂಬಿರುವ ತಮಗೆ 2023ರ ಚುನಾವಣೆಯಲ್ಲಿ ಅವಕಾಶ ಸಿಗದಿದ್ದರೆ ಮುಂದಿನ ದಿನಗಳಲ್ಲಿ ರಾಜಕೀಯ ಭವಿಷ್ಯ ಇರುವುದಿಲ್ಲ ಎಂದು ವರಿಷ್ಠರ ಬಳಿ ಟಿಕೆಟ್‌ಗೆ ಮೊರೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್‌ ವರಿಷ್ಠರ ಮನವೊಲಿಕೆಗೆ ಕಸರತ್ತು :

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಅಖಾಡ ಪ್ರವೇಶಿಸಲೇಬೇಕೆಂಬ ಹಠದೊಂದಿಗೆ ಜೆಡಿಎಸ್‌ ವರಿಷ್ಠರ ಗಮನ ಸೆಳೆಯುವ ಮತ್ತು ಮನವೊಲಿಸುವ ಪ್ರಯತ್ನವನ್ನು ಶಿವರಾಮೇಗೌಡರು ಮಾಡುತ್ತಿದ್ದಾರೆ. ಅದಕ್ಕಾಗಿಯೇ ಕ್ಷೇತ್ರದಲ್ಲಿ ಆಗೊಮ್ಮೆ ಈಗೊಮ್ಮೆ ಪ್ರವಾಸ ಹಮ್ಮಿಕೊಂಡು ಶಾಸಕರ ಕಾರ್ಯವೈಖರಿ ಟೀಕಿಸುತ್ತಾ, ಜೆಡಿಎಸ್‌ ಕಾರ್ಯಕರ್ತರನ್ನು ಶಾಸಕರು ಕಡೆಗಣಿಸುತ್ತಿದ್ದಾರೆ ಎಂಬ ದೂರನ್ನು ವರಿಷ್ಠರ ಗಮನಕ್ಕೆ ತಂದು ಟಿಕೆಟ್‌ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ವರಿಷ್ಠರು, ನಾಗಮಂಗಲ ಕ್ಷೇತ್ರದ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಶಿವರಾಮೇಗೌಡರಿಗೆ ಟಿಕೆಟ್‌ ಕೊಟ್ಟರೆ ತಾಲೂಕಿನಲ್ಲಿ ರಾಜಕೀಯ ವಾತಾವರಣಹೇಗಿರಬಹುದೆಂಬ ಬಗ್ಗೆ ಅಭಿಪ್ರಾಯ, ಮಾಹಿತಿಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.

ಸ್ಪರ್ಧಿಸುವುದಕ್ಕೆ ಅತ್ಯುತ್ಸಾಹ : ದಳಪತಿಗಳಿಂದ ಟಿಕೆಟ್‌ ಖಚಿತವಾಗದಿದ್ದರೂ ತಮ್ಮ ಅಭಿಮಾನಿಗಳನ್ನು ಕಟ್ಟಿಕೊಂಡು ಕ್ಷೇತ್ರದಲ್ಲಿ ರಾಜಕೀಯ ಕಾರ್ಯ ಚಟುವಟಿಕೆಗಳನ್ನು ಬಿರುಸುಗೊಳಿಸಿರುವ ಶಿವರಾಮೇಗೌಡರು, ವಾರದಲ್ಲಿ ಎರಡು-ಮೂರು ದಿನ ಕ್ಷೇತ್ರದಲ್ಲೇ ಉಳಿದು ಜನರ ಕಷ್ಟ-ಸುಖಗಳಿಗೆಸ್ಪಂದಿಸುವುದಾಗಿ ಪ್ರಚಾರ ಮಾಡುತ್ತಾ ಮತದಾರರ ವಿಶ್ವಾಸ ಮತ್ತುಅನುಕಂಪ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. 22 ವರ್ಷಗಳಿಂದಅಧಿಕಾರದಿಂದ ದೂರ ಉಳಿದಿರುವ ಶಿವರಾಮೇಗೌಡರಿಗೆ 2023ರಚುನಾವಣೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇದೇ ಕಾರಣಕ್ಕೆಮುಂದಿನ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಅತ್ಯುತ್ಸಾಹ ತೋರುತ್ತಿದ್ದಾರೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಮಾಜಿ ಶಾಸಕ ಶಿವರಾಮೇಗೌಡರು ನೀಡಿರುವ ಹೇಳಿಕೆ ಹೊಸದೇನುಅಲ್ಲ (2023ರಚುನಾವಣೆಯಲ್ಲಿ ಸ್ಪರ್ಧಿಸುವುದುಖಚಿತ ಹಾಗೂತಾಲೂಕಿನಲ್ಲಿಭ್ರಷ್ಟಾಚಾರಆರೋಪ). ಅವರ ಆರೋಪ, ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. – ಸುರೇಶ್‌ಗೌಡ, ಶಾಸಕರು, ನಾಗಮಂಗಲ ಕ್ಷೇತ

– ಪಿ.ಜೆ.ಜಯರಾಂ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.