ಸಸ್ಪೆನ್ಸ್‌-ಥ್ರಿಲ್ಲರ್‌ “ಸ್ತಬ್ಧ”: ರಾಘವೇಂದ್ರ ರಾಜಕುಮಾರ್‌ ನಟನೆ


Team Udayavani, Jan 28, 2022, 10:40 AM IST

ಸಸ್ಪೆನ್ಸ್‌-ಥ್ರಿಲ್ಲರ್‌ “ಸ್ತಬ್ಧ”: ರಾಘವೇಂದ್ರ ರಾಜಕುಮಾರ್‌ ನಟನೆ

ಹಿರಿಯ ನಟ ರಾಘವೇಂದ್ರ ರಾಜಕುಮಾರ್‌ ಅಭಿನಯದ ಹೊಸಚಿತ್ರ “ಸ್ತಬ್ಧ’ ಚಿತ್ರಕ್ಕೆ ಇತ್ತೀಚೆಗೆ ಚಾಲನೆ ಸಿಕ್ಕಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್‌ ರಾಮಲಿಂಗಾರೆಡ್ಡಿ ಕ್ಲಾಪ್‌ ಮಾಡಿದರೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್‌ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಮಾಡಿದರು. ಶಾಸಕಿ ಸೌಮ್ಯ ರೆಡ್ಡಿ, ಮಮತಾ ದೇವರಾಜ್‌ ಮುಂತಾದ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು. “ಸಾಯಿ ಸಾಗರ್‌ ಫಿಲಂ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಡಾ. ಡಿ. ವಿ ವಿದ್ಯಾಸಾಗರ್‌ ನಿರ್ಮಿಸುತ್ತಿರುವ “ಸ್ತಬ್ಧ’ ಚಿತ್ರಕ್ಕೆ ಲಾಲಿ ರಾಘವ ನಿರ್ದೇಶನ ಮಾಡುತ್ತಿದ್ದಾರೆ.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಲಾಲಿ ರಾಘವ, “ಈಗಾಗಲೇ ತಮಿಳಿನಲ್ಲಿ ಒಂದು ಸಿನಿಮಾ ನಿರ್ದೇಶಿಸಿರುವ ನನಗೆ ಇದು ಎರಡನೇ ಸಿನಿಮಾ. ಮನುಷ್ಯನ ಮನಸ್ಸು, ಸ್ಥಿಮಿತತೆ ಕಳೆದುಕೊಂಡು ಭ್ರಮಾಲೋಕಕ್ಕೆ ಪಯಣಿಸಿದಾಗ, ಆಗುವಂತಹ ಪರಿಣಾಮಗಳು ಮತ್ತು ಅದರಿಂದ ಹೊರಬರಲು ನಾಯಕ ನಡೆಸುವ ಹೋರಾಟದ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ’ ಎಂದು ಕಥಾಹಂದರ ತೆರೆದಿಟ್ಟರು.

“ಈ ಸಿನಿಮಾದಲ್ಲಿ ಕಥೆಯೇ ಹೈಲೈಟ್‌. ಇದೊಂದು ಸಸ್ಪೆನ್ಸ್‌ ಸಿನಿಮಾವಾಗಿರುವುದರಿಂದ ಕಥೆಯ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ. ನನಗೆ ಇಲ್ಲೊಂದು ಒಳ್ಳೆಯ ಪಾತ್ರವಿದೆ. ಒಂದೊಳ್ಳೆ ಸಿನಿಮಾ ಎದುರು ನೋಡುತ್ತಿದ್ದೇವೆ’ ಎನ್ನುವುದು ರಾಘವೇಂದ್ರ ರಾಜಕುಮಾರ್‌ ಮಾತು.

ಚಿತ್ರದ ಬಗ್ಗೆ ಮಾತನಾಡಿದ ನಟಿ ಹರ್ಷಿಕಾ ಪೂಣಚ್ಛ, “ನನ್ನ ಮೊದಲ ಸಿನಿಮಾದ ನಂತರ ರಾಘಣ್ಣ ಫೋನ್‌ ಮಾಡಿ, ನಮ್ಮ ಪ್ರೊಡಕ್ಷನ್ಸ್‌ನಲ್ಲಿ ನಿರ್ಮಾಣವಾಗುತ್ತಿರುವ “ಜಾಕಿ’ ಸಿನಿಮಾದಲ್ಲಿ ನೀವು ನಟಿಸಬೇಕೆಂದರು. ಆಗ ನನಗಾದ ಖುಷಿ ಅಷ್ಟಿಷ್ಟಲ್ಲ. ಈಗಾಗಲೇ ಶಿವಣ್ಣ, ಪುನೀತ್‌ ಸರ್‌ ಜೊತೆ ನಟಿಸಿದ್ದರೆ, ಈ ಸಿನಿಮಾದಲ್ಲಿ ರಾಘಣ್ಣ ಅವರ ಮಗಳಾಗಿ ಅಭಿನಯಿಸುತ್ತಿದ್ದೇನೆ. ಡಾ. ರಾಜಕುಮಾರ್‌ ಅವರ ಮೂರು ಮಕ್ಕಳ ಜೊತೆ ನಟಿಸುವ ಭಾಗ್ಯ ನನಗೆ ಸಿಕ್ಕಿರುವ ಸಂತೋಷವಿದೆ’ ಎಂದರು.

ಇನ್ನು ಪ್ರತಾಪ್‌ ಸಿಂಹ, ಹರ್ಷಿಕಾ ಪೂಣತ್ಛ, ಪ್ರಶಾಂತ್‌ ಸಿದ್ಧಿ, ಶ್ರುತಿ, ಯಶ್‌ ಶೆಟ್ಟಿ, ಜಯಶ್ರೀ ಆರಾಧ್ಯ, ಬೇಬಿ ಅಂಕಿತಾ, ಮಾ. ಚಿನ್ಮಯ್‌, ಪ್ರಿಯಾಂಕಾ, ಮಂಜುಳಾ, ಶಿವಕುಮಾರ್‌ ಆರಾಧ್ಯ, ರತ್ನ ಕುಮಾರಿ, ರಾಜು ನಾಯಕ್‌, ಕುಮಾರ್‌ ಎಸ್‌. ಮೊದಲಾದವರು “ಸ್ತಬ್ಧ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹಂಸಲೇಖ ಸಾಹಿತ್ಯವಿದ್ದು, ಆರವ್‌ ರಿಷಿಕ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಪಿ.ವಿ. ಆರ್‌ ಸ್ವಾಮಿ ಛಾಯಾಗ್ರಹಣ, ಥ್ರಿಲ್ಲರ್‌ ಮಂಜು ಸಾಹಸ ನಿರ್ದೇಶನವಿದೆ.

– ರವಿ ರೈ

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.