ನಾಳೆಯಿಂದ ಕೆಎಸ್‌ಆರ್‌ಟಿಸಿ ಡಿಪೋ ನವೀಕರಣ

4.5 ಕೋ.ರೂ. ವೆಚ್ಚದಲ್ಲಿ ಕಾಮಗಾರಿ; 2018ರಲ್ಲಿ ಘೋಷಣೆಯಾಗಿದ್ದ ಯೋಜನೆ

Team Udayavani, Jan 30, 2022, 5:50 AM IST

ನಾಳೆಯಿಂದ ಕೆಎಸ್‌ಆರ್‌ಟಿಸಿ ಡಿಪೋ ನವೀಕರಣ

ಕುಂದಾಪುರ: ಅಂತೂ ಇಂತೂ ಕುಂದಾಪುರದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ನವೀಕರಣ ಕಾಮಗಾರಿಗೆ ಕಾಲ ಕೂಡಿ ಬಂದಿದೆ. ಇಲ್ಲಿನ ಬಸ್‌ ಡಿಪೋದ ಕಟ್ಟಡ ಹಾಗೂ ಎಲ್ಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 4.5 ಕೋ.ರೂ. ಮಂಜೂರಾಗಿದ್ದು, ಜ. 31ರಿಂದ ಕಾಮಗಾರಿ ಆರಂಭವಾಗಲಿದೆ.

2018ರ ನ. 16ರಂದು ಕುಂದಾಪುರಕ್ಕೆ ಭೇಟಿ ನೀಡಿದ್ದ ಆಗಿನ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು, ಕುಂದಾಪುರದ ಬಸ್ರೂರು ಮೂರುಕೈ ಬಳಿಯಿರುವ ಹಳೆಯ ಕೆಎಸ್‌ಆರ್‌ಟಿಸಿ ಘಟಕವನ್ನು ಕೆಡವಿ, ಮರು ನಿರ್ಮಾಣಕ್ಕೆ 4.5 ಕೋ.ರೂ. ಅನುದಾನವನ್ನು ಘೋಷಿಸಿದ್ದರು. ಸಚಿವರು ಅನುದಾನ ಘೋಷಿಸಿ, 3 ವರ್ಷ ಕಳೆದರೂ, ಇನ್ನೂ ನವೀಕರಣ ಕಾಮಗಾರಿ ಮಾತ್ರ ಕೈಗೂಡಿರಲಿಲ್ಲ.

ಏನೇನು ಅಭಿವೃದ್ಧಿ ?
ಈಗಿರುವ ಕೆಎಸ್‌ಆರ್‌ಟಿಸಿ ಡಿಪೋ ಇರುವ ಜಾಗದಲ್ಲಿಯೇ ಅದನ್ನು ಕೆಡವಿ ಹೊಸದಾಗಿ ಕಟ್ಟಡ, ಬಸ್‌ ನಿಲ್ಲಿಸುವ ಬೇ, ದುರಸ್ತಿಗೆ ಅನುಕೂಲವಾಗುವಂತಹ ಬೇಗಳು, ಹೊಸ ಜನರೇಟರ್‌, ಚಾಲಕ – ನಿರ್ವಾಹಕರಿಗೆ ವಿಶ್ರಾಂತಿ ಕೊಠಡಿ, ವಾಷಿಂಗ್‌ ರ್‍ಯಾಂಪ್‌, ಆವರಣ ಗೋಡೆ ಹೊಸದಾಗಿ ನಿರ್ಮಾಣವಾಗಲಿದೆ. ಇದಲ್ಲದೆ ಹೆದ್ದಾರಿಯ ಮಳೆ ನೀರು ಹರಿದು ಬರದಂತೆ ಸಹ ವ್ಯವಸ್ಥೆಯಾಗಲಿದೆ. ಈಗ ಕಾಮಗಾರಿ ಆರಂಭವಾಗಲಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ.

103 ಬಸ್‌ ನಿಲುಗಡೆ
ಕುಂದಾಪುರದಿಂದ ಬೆಂಗಳೂರು, ಶಿವಮೊಗ್ಗ, ಮೈಸೂರು, ಉತ್ತರ ಕನ್ನಡ, ಹುಬ್ಬಳ್ಳಿ ಸಹಿತ ರಾಜ್ಯದ ಹೆಚ್ಚಿನ ಎಲ್ಲ ಜಿಲ್ಲೆಗಳಿಗೂ ಬಸ್‌ ಸಂಪರ್ಕವಿದೆ. ಪ್ರಸ್ತುತ ಇಲ್ಲಿ 103 ಬಸ್‌ಗಳ ನಿಲುಗಡೆಯಿದೆ.

ಬದಲಿ ವ್ಯವಸ್ಥೆ
ಡಿಪೋ ನವೀಕರಣ ಕಾಮಗಾರಿ ಸಲುವಾಗಿ ಈಗ ಇಲ್ಲಿರುವ ಬಸ್‌ಗಳನ್ನು ನಿಲ್ಲಿಸಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಜಾಗ ಸಮತಟ್ಟು ಮಾಡಲಾಗಿದೆ. ಇಲ್ಲಿ ಕೆಲವು ಬಸ್‌ಗಳನ್ನು ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

1 ವರ್ಷದವರೆಗೆ ಕಾಮಗಾರಿ
ಕುಂದಾಪುರ ಕೆಎಸ್‌ಆರ್‌ಟಿಸಿ ಘಟಕದ ನವೀಕರಣ ಕಾಮಗಾರಿ ಜ.31 ರಿಂದ ಆರಂಭವಾಗಲಿದೆ. ಈಗಿರುವ ಬಸ್‌ಗಳ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಆಗಬೇಕಿರು ವುದರಿಂದ ಸ್ವಲ್ಪ ವಿಳಂಬವಾಗಿದೆ. ಮುಂದಿನ ಒಂದು ವರ್ಷದವರೆಗೆ ಕಾಮಗಾರಿ ನಡೆಯಲಿದೆ. ಹೊಸ ಕಟ್ಟಡ, ರ್‍ಯಾಂಪ್‌, ಬಸ್‌ ಬೇ ಸಹಿತ 4.5 ಕೋ.ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
-ಸುಜಾತಾ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಪ್ರಭಾರ), ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ

ಟಾಪ್ ನ್ಯೂಸ್

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.