ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ರಸ್ತೆ ತಡೆ

Team Udayavani, Jan 30, 2022, 2:23 PM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ರಸ್ತೆ ತಡೆ

ಹನೂರು: ಚೆಂಗಡಿ ಗ್ರಾಮ ಸ್ಥಳಾಂತರ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆವತಿಯಿಂದ ಹನೂರು ಪಟ್ಟಣದಲ್ಲಿ ರಸ್ತೆತಡೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಮುಖ್ಯ ವೃತ್ತದ ಬಳಿ ಜಮಾಯಿಸಿದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಮತ್ತು ಪ್ರತಿಭಟನಾಕಾರರು‌ ಜಿಲ್ಲಾಡಳಿತ, ಸರ್ಕಾರ,ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಧಿಕ್ಕಾರ ಮೊಳಗಿಸಿದರು.

ಈ ವೇಳೆ ಹೊನ್ನೂರು ಪ್ರಕಾಶ್‌ ಮಾತನಾಡಿ, ಅರಣ್ಯದೊಳಗಿನ ಚೆಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಕಳೆದ 5 ವರ್ಷದಿಂದ ಜರುಗುತ್ತಿದೆ. ಸ್ಥಳಾಂತರಗೊಂಡ ಚೆಂಗಡಿ ಗ್ರಾಮಸ್ಥರಿಗೆ ಪುನರ್ವಸತಿಕಲ್ಪಿಸಲು ಅರಣ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದರೂ ಇತರೆ ಇಲಾಖೆಗಳು ಸಹಕಾರನೀಡುತ್ತಿಲ್ಲ. ದೊಡ್ಡಾಣೆ ಗ್ರಾಮದಲ್ಲಿ ಇಡೀ ಗ್ರಾಮವೇ ಅಸ್ವಸ್ಥಗೊಂಡು ನರಳಾಡುತ್ತಿದ್ದರೂ ನಾವು ಕರೆಮಾಡುವವರೆಗೆ ಅವರಿಗೆ ವೈದ್ಯಕೀಯ ಸೇವೆ ದೊರಕಿರಲಿಲ್ಲ. ಇನ್ನು ವಿದ್ಯುತ್‌ ಇಲಾಖೆಯಿಂದಅರಣ್ಯದೊಳಗಿನ ಗ್ರಾಮಗಳ ಸಾರ್ವಜನಿಕರಿಗೆನೀಡಿರುವ ಸೋಲಾರ್‌ ದೀಪಗಳು 6 ಗಂಟೆಗೆ ಆಫ್ಆಗುತ್ತಿದೆ. ಗ್ರಾಮಸ್ಥರು ಕಗ್ಗತ್ತಲಿನಲ್ಲಿ ಬೆಂಕಿ ಹಾಕಿ ಒಲೆಹಚ್ಚಿ ಊಟಮಾಡುವ ಪರಿಸ್ಥಿತಿಯಿದೆ. ಇನ್ನು ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಸ್ತುವಾರಿ ಸಚಿವರಿಗೆ ತರಾಟೆ: ಈ ವೇಳೆ ಹೊನ್ನೂರು ಪ್ರಕಾಶ್‌ ಮಾತನಾಡಿ, ಜಿಲ್ಲಾ ಉಸ್ತುವಾರಿಸಚಿವರು ಬೃಹತ್‌ ಹಾರ, ಸ್ವಾಗತ ಫ್ಲೆಕ್ಸ್‌ ಹಾಕಿಸಿಕೊಳ್ಳುತ್ತಿದ್ದಾರೆ. ಮಲೆ ಮಹದೇಶ್ವ ಬೆಟ್ಟಕ್ಕೆ ಬಂದ ಸಚಿವರು ಈ ಭಾಗದ ಸಮಸ್ಯೆಗಳ ಬಗ್ಗೆ ಚಕಾರವೆತ್ತಿಲ್ಲ. ಕೆಡಿಪಿ ಸಭೆಯಲ್ಲಿ ಕಾಡಂಚಿನ ಸಮಸ್ಯೆಗಳ ಬಗ್ಗೆಯೂ ಯಾವುದೇ ಚರ್ಚೆ ಮಾಡಿಲ್ಲ.ಜಿಲ್ಲಾ ಉಸ್ತುವಾರಿ ಸಚಿವರು ಮಾದಪ್ಪನ ದರ್ಶನಪಡೆದು ಪೂಜೆ ಸಲ್ಲಿಸಲು ಮಾತ್ರ ಈ ಭಾಗಕ್ಕೆ ಬರುತ್ತಾರೆ. ಮುಂದಿನ 15 ದಿನಗಳೊಳಗಾಗಿ ನಮ್ಮಸಮಸ್ಯೆಗಳನ್ನು ಬಗೆಹರಿಸಿದ್ದಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಮುಖ್ಯಮಂತ್ರಿಗಳೇ ಆಗಲಿ, ಸಚಿವರೇ ಆಗಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಮತ್ತು ಅವರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್‌ ನಾಗರಾಜು ಮತ್ತು ಸೆಸ್ಕ್ ಎಇಇ ಶಂಕರ್‌ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕಪ್ರತಿಭಟನೆಯನ್ನು ಕೈಬಿಡಲಾಯಿತು. ಈಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಹೊನ್ನೂರುಬಸವಣ್ಣ, ತಾಲೂಕು ಅಧ್ಯಕ್ಷ ಚೆಂಗಡಿ ಕರಿಯಪ್ಪ, ದೊಡ್ಡೇಗೌಡ, ಲಕ್ಷ್ಮಣ ಇತರರಿದ್ದರು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.