ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಲಿ: ಖಾಶೆಂಪುರ್‌


Team Udayavani, Feb 5, 2022, 2:39 PM IST

18people

ಬೀದರ: ಜನರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕೂಡಲೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್‌ ಸೂಚಿಸಿದರು.

ಬೀದರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಉಡಬಾಳ ಗ್ರಾಮದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಅನೇಕ ಸಮಸ್ಯೆಗಳಿರುತ್ತವೆ. ಹಳ್ಳಿ ಜನರು ನಿಮ್ಮ ಹತ್ತಿರ ಹೇಳಿಕೊಂಡಾಗ ಕೂಡಲೇ ಆ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಿರ್ದೇಶನ ನೀಡಿದರು.

ಈ ವೇಳೆ ಗ್ರಾಮದ ಅನೇಕರು ಸರ್ಕಾರದಿಂದ ಮನೆ ನಿರ್ಮಿಸಿಕೊಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್‌ ಅವರಿಗೆ ಮನವಿ ಮಾಡಿದರು. ಕೆಲವರು ವೃದ್ಧಾಪ್ಯ, ವಿಧವಾ ವೇತನಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. ಇವುಗಳಿಗೆ ಪರಿಹಾರ ಒದಗಿಸಿಕೊಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ತಿಳಿಸಿದರು.

ಗ್ರಾಮಕ್ಕೆ ಹೊಸದೊಂದು ಅಂಗನವಾಡಿ ಕೇಂದ್ರ ಒದಗಿಸಿಕೊಡಬೇಕು. ಸದ್ಯ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ನಿರ್ಮೂಲನೆ ಮಾಡಬೇಕೆಂದು ಗ್ರಾಮಸ್ಥರೊಬ್ಬರು ಶಾಸಕರಿಗೆ ಮನವಿ ಮಾಡಿದರು.

ಕೆಕೆಆರ್‌ಡಿಬಿ ಅಡಿ ಅಂಗನವಾಡಿ ಕೇಂದ್ರ ಮಂಜೂರು ಮಾಡುವ ಭರವಸೆ ನೀಡಿದರು. ಉಡಬಾಳವಾಡಿಯ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಆ ಶಾಲೆಗೆ ಹೆಚ್ಚಿನ ಶಿಕ್ಷಕರನ್ನು ನೀಡಬೇಕು. ಶಿಕ್ಷಕರ ಕೊರತೆ ನಿವಾರಣೆಗಾಗಿ ನಾವು ಈಗಾಗಲೇ ಬಿಇಒ, ಡಿಡಿಪಿಐಗಳಿಗೆ ಮನವಿ ಮಾಡಿದ್ದೇವೆ. ಆದರೆ, ಅವರಿಂದ ಇದುವರೆಗೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿದೆ. ಶಿಕ್ಷಕರನ್ನು ಒದಗಿಸಿಕೊಡಬೇಕೆಂದು ಸ್ಥಳೀಯರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಖಾಶೆಂಪುರ್‌, ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕೆಂದರು.

ಗ್ರಾಮದಲ್ಲಿ ವಿದ್ಯುತ್‌ ಪರಿವರ್ತಕ (ಟಿಸಿ) ಸಮಸ್ಯೆಯಿದೆ ಎಂದು ಗ್ರಾಮಸ್ಥರು ಶಾಸಕರ ಮುಂದೆ ಅಳಲು ತೊಡಿಕೊಂಡರು. ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸಿಕೊಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್‌ ಅವರು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಜಮೀನುಗಳಿಗೆ ಹೋಗುವ ರಸ್ತೆಗಳು, ಗ್ರಾಮದಲ್ಲಿರುವ ಸಿಸಿ ರಸ್ತೆಗಳು, ಚರಂಡಿ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಹಂತ-ಹಂತವಾಗಿ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದರು.

ಚಿಟಗುಪ್ಪ ತಾಪಂ ಇಒ ವೆಂಕಟ ಶಿಂಧೆ, ತಹಶೀಲ್ದಾರ್‌ ರವೀಂದ್ರ ದಾಮಾ, ಗ್ರಾಪಂ ಅಧ್ಯಕ್ಷ ನರಸರಡ್ಡಿ ಇದ್ದಾರಡ್ಡಿ, ಉಪಾಧ್ಯಕ್ಷೆ ಜಗದೇವಿ ಮಾಳಗೆ, ಸಂಧ್ಯಾರಾಣಿ, ಮಾಣಿಕರಾವ್‌, ಶಶಿಕಾಂತ್‌ ಇದ್ದರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.