ರಾಜ್ಯ ಬಜೆಟ್ ಗೆ ಮುನ್ನವೇ ಸಂಪುಟ ವಿಸ್ತರಣೆಗಾಗಿ ಸಿಎಂ ಸರ್ಕಸ್; ವಿಜಯೇಂದ್ರಗೆ ಮಣೆ?

ರಾಜ್ಯಕ್ಕೆ ವಾಪಾಸ್ ಆಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ

Team Udayavani, Feb 7, 2022, 10:57 AM IST

ರಾಜ್ಯ ಬಜೆಟ್ ಗೆ ಮುನ್ನವೇ ಸಂಪುಟ ವಿಸ್ತರಣೆಗಾಗಿ ಸಿಎಂ ಸರ್ಕಸ್; ವಿಜಯೇಂದ್ರಗೆ ಮಣೆ?

ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸಂಪುಟ ವಿಸ್ತರಣೆ ಬೇಡಿಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಸ್ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ:ಇವತ್ತು ಹಿಜಾಬ್, ನಾಳೆ ಬುರ್ಕಾ: ಎಲ್ಲಾ ಬೇಡಿಕೆ ಈಡೇರಿಸಲಾಗುತ್ತಾ; ಭರತ್ ಶೆಟ್ಟಿ ಆಕ್ರೋಶ

ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ಪಡೆಯುವುದು ಸೇರಿದಂತೆ ನಾನಾ ಕಾರಣಗಳಿಗಾಗಿ ರಾಜ್ಯದ ಸಂಸದರ ಜತೆ ಸಭೆ ನಡೆಸುವುದಕ್ಕಾಗಿ ಬೊಮ್ಮಾಯಿ ಸೋಮವಾರ ದಿಲ್ಲಿಗೆ ಭೇಟಿ ನೀಡಿದ್ದಾರೆ. ಅವರು ರಾಜ್ಯಕ್ಕೆ ವಾಪಾಸ್ ಆಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜತೆಗೆ ಚರ್ಚೆ ನಡೆಸುವುದಕ್ಕೆ ಸಮಯ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ.

ವಿಜಯೇಂದ್ರ ಇನ್ ?: ಬಿಜೆಪಿ ಮೂಲಗಳ ಪ್ರಕಾರ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪ ಎರಡು ಬಾರಿ ಬೊಮ್ಮಾಯಿ ಅವರಿಗೆ ನಿರ್ದೇಶನ ನೀಡಿದ್ದಾರೆ. ಬೊಮ್ಮಾಯಿ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಆದರೆ ವರಿಷ್ಠರಿಂದ ಇನ್ನೂ ಸಮ್ಮತಿ ದೊರೆತಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಇದೇ ದೊಡ್ಡ ತೊಡಕಾಗಿ ಪರಿಣಮಿಸಿದೆ.

ಅದೇ ಪಂಚಮಸಾಲಿ ಲಿಂಗಾಯಿತ ಸಮುದಾಯದಿಂದ ಯಾರನ್ನು ಕೈ ಬಿಟ್ಟು ಯಾರನ್ನು ಸೇರಿಸಿಕೊಳ್ಳಬೇಕೆಂಬುದು ಇನ್ನೂ ಇತ್ಯರ್ಥವಾಗಿಲ್ಲ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಸಂಪುಟ ಸೇರ್ಪಡೆಗೆ ಬೇರೆ ಬೇರೆ ಮೂಲಗಳಿಂದ ಭಾರಿ ಒತ್ತಡ ಹೇರುತ್ತಿದ್ದಾರೆ. ಇವರಿಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿದ್ದರೆ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಸಿ.ಸಿ.ಪಾಟೀಲ್ ಪೈಕಿ ಇಬ್ಬರನ್ನು ಕೈ ಬಿಡಬೇಕಾಗುತ್ತದೆ. ಇದು ಕೂಡಾ ಬೊಮ್ಮಾಯಿ ಅವರಿಗೆ ಸವಾಲಿನ ಕೆಲಸವಾಗಿದೆ.

ಉತ್ತರ ಪ್ರದೇಶದ ಚುನಾವಣೆಯವರೆಗೆ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗೆ ಅವಕಾಶ ನೀಡುವುದು ಬೇಡ ಎಂಬುದು ವರಿಷ್ಠರ ಲೆಕ್ಕಾಚಾರ. ಅಲ್ಲಿಯವರೆಗೆ ಕಾಯುವುದಕ್ಕೆ ಆಕಾಂಕ್ಷಿಗಳು ಸಿದ್ದರಿಲ್ಲ. ಹೀಗಾಗಿ ಬಜೆಟ್ಗೆ ಮುನ್ನವೇ ವಿಸ್ತರಣೆ ಅಥವಾ ಪುನಾರಚನೆ ಕೆಲಸ ಪರ‍್ಣಗೊಳಿಸುವಂತೆ ಸಿಎಂ ಬೊಮ್ಮಾಯಿ ವರಿಷ್ಠರ ಮೇಲೆ ಒತ್ತಡ ಹೇರಲು ನರ‍್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.