ಗೋವಾ: ಕನ್ನಡಿಗರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿದ್ಧರಾಮಯ್ಯ
Team Udayavani, Feb 8, 2022, 3:15 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಪರ ಚುನಾವಣಾ ಪ್ರಚಾರ ನಡೆಸಲು ಕರ್ನಾಟಕದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಗೋವಾಕ್ಕೆ ಆಗಮಿಸಿದ್ದು ಮಂಗಳವಾರ ಗೋವಾ ರಾಜಧಾನಿ ಪಣಜಿಯಲ್ಲಿ ಕನ್ನಡ ಸಂಘಟನೆ ನಾಯಕರೊಂದಿಗೆ ಚರ್ಚೆ ನಡೆಸಿ, ಕನ್ನಡಿಗರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.
ಗೋವಾದಲ್ಲಿ ಕನ್ನಡ ಭವನ ನಿರ್ಮಾಣ, ಗೋವಾದಲ್ಲಿ ಕರ್ಮಯೋಗಿ ಕಾರ್ಪೊರೇಶನ್ ಸ್ಥಾಪನೆ, ಕನ್ನಡಿಗರಿರುವ ಸ್ಲಂ ಏರಿಯಾಗಳ ಅಭಿವೃದ್ಧಿ, ಗೋವಾದ ಜಾತಿ ಪ್ರಮಾಣ ಪತ್ರ ಲಭಿಸುವಂತೆ ಮಾಡುವುದು, ಗೋವಾದ ಎಲ್ಲ ಸರ್ಕಾರಿ ಯೋಜನೆಗಳು ಕನ್ನಡಿಗರಿಗೂ ಲಭಿಸಬೇಕು, ಬೈನಾ ನಿರಾಶ್ರಿತ ಕನ್ನಡಿಗ ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವುದು, ಹೀಗೆ ವಿವಿಧ ಬೇಡಿಕೆಗಳನ್ನು ಅಖಿಲ ಗೋವಾ ಮಹಾಸಂಘದ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ ರವರು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರವರ ಬಳಿ ಮನವಿ ಮಾಡಿದರು.
ಗೋವಾದಲ್ಲಿ ಕನ್ನಡಿಗರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಕರ್ನಾಟಕ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಶಾಸಕ ಜಮೀರ್ ಅಹಮ್ಮದ್, ಅಶೋಕ ಪಟ್ಟಣ, ಸುರೇಶ್ ಭೈರತ್ತಿ, ರಾಘವೇಂದ್ರ ಯತ್ನಾಳ, ಪ್ರಕಾಶ ರಾಠೋಡ್, ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್