ಹಿಜಾಬ್- ಕೇಸರಿ ವಿವಾದ: ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ
Team Udayavani, Feb 8, 2022, 4:32 PM IST
ಬೆಂಗಳೂರು: ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಪ್ರೌಢ ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಹೈಕೋರ್ಟ್ ನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022