ನರ್ಸಿಂಗ್ ಪರೀಕ್ಷೆ:ಬೀದರ್ ನಲ್ಲಿ ಹಿಜಾಬ್ ತೆಗೆಯುವಂತೆ ಒತ್ತಡ;ಸುಳ್ಳು ಮಾಹಿತಿ ವಿಡಿಯೋ ವೈರಲ್
Team Udayavani, Feb 11, 2022, 6:36 PM IST
ಬೀದರ್ : ನಗರದ ಬ್ರಿಮ್ಸ್ ಕಾಲೇಜಿನಲ್ಲಿ ಹಿಜಾಬ್ ತೆಗೆದು ಬಿಎಸ್ಸಿ ನರ್ಸಿಂಗ್ ಪರೀಕ್ಷೆ ಬರೆಯುವಂತೆ ಒತ್ತಡ ಹೇರಿದ್ದಾರೆನ್ನಲಾದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆದರೆ, ಬ್ರಿಮ್ಸ್ ನಿರ್ದೇಶಕರು ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ಮಾಹಿತಿ ಸುಳ್ಳಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಗುರುವಾರ ಬ್ರಿಮ್ಸ್ ಕಾಲೇಜು ಕೇಂದ್ರದಲ್ಲಿ ಬಿಎಸ್ಸಿ ಪರೀಕ್ಷೆ ನಡೆದಿದ್ದು, ಈ ವೇಳೆ ೧೦ಕ್ಕೂ ಹೆಚ್ಚು ಮಹಿಳೆಯರು ಹಿಜಾಬ್ ಧರಿಸಿ ಆಗಮಿಸಿದ್ದರು. ಹಿಜಾಬ್ ತೆಗೆದರೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡುವುದಾಗಿ ಮೇಲ್ವಿಚಾರಕರು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ಯುವಕರು ಗಲಾಟೆ ಮಾಡಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದರೆ, ಬ್ರಿಮ್ಸ್ ನಿರ್ದೇಶಕ ಡಾ. ಚಿಲ್ಲರ್ಗಿ ಅವರು ಇದನ್ನು ನಿರಾಕರಿಸಿದ್ದು, ಮುಖ ಮತ್ತು ಐಡಿ ಕಾರ್ಡ್ ತೋರಿಸಿ ಪರೀಕ್ಷೆ ಬರೆಯಬೇಕೆಂದು ತಿಳಿಸಲಾಗಿತ್ತು. ನಂತರ ಮಹಿಳೆಯರು ಹಿಜಾಬ್ ಧರಿಸಿಯೇ ಪರೀಕ್ಷೆಯನ್ನು ಬರೆದಿದ್ದಾರೆ. ವೈರಲ್ ಆಗಿರುವ ವಿಡಿಯೋ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?