ವಿರಳಾತಿವಿರಳ ಪ್ರಕರಣ : ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಕೇಸ್

Team Udayavani, Feb 18, 2022, 5:58 PM IST

court

ಮಂಡ್ಯ: ಲೋಕಯುಕ್ತ ಪೋಲಿಸರು ದಾಖಲಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಸುಳ್ಳು ಸಾಕ್ಷಿ ನುಡಿದ ವ್ಯಕ್ತಿ ವಿರುದ್ಧ ಮಂಡ್ಯ ಜಿಲ್ಲಾ ಸತ್ರ ನ್ಯಾಯಾದೀಶ ಎಸ್ ಬಿ ವಸ್ತೃದಮಠ ರವರು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಿದ್ದಾರೆ.

ಮಂಡ್ಯ ನಗರದ ಗುತ್ತಲೂ ಬಡಾವಣೆಯ ನಿವಾಸಿ ರವಿಕುಮಾರ್ ಎಂಬುವವರು 2014ರಲ್ಲಿ ಮಂಡ್ಯ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಯಾಗಿದ್ದ ಯೋಗನಂದ ಎಂಬುವವರ ವಿರುದ್ಧ ಮೂವತ್ತು ಸಾವಿರ ಲಂಚದ ಹಣಕ್ಕೆ ಒತ್ತಾಯಿಸಿದರು ಎಂದು ಮಂಡ್ಯ ಲೋಕಯುಕ್ತ ಪೋಲಿಸರ ಮುಂದೆ ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಲೋಕಯುಕ್ತ ಪೋಲಿಸರು ಯೋಗನಂದ ರವರನ್ನು ಟ್ರಾಪ್ ಮಾಡಿ ಬಂಧಿಸಿ ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದ ಸಂಧರ್ಭದಲ್ಲಿ ದೂರು ನೀಡಿದ್ದ ರವಿಕುಮಾರ್ ರವರು ತಾನು ಆರೋಪಿಸಿದ್ದ ಅಧಿಕಾರಿ ಯೋಗನಂದ ರವರ ಜೊತೆ ಶಾಮೀಲಾಗಿ ನ್ಯಾಯಾಲಯದಲ್ಲಿ ವ್ಯತಿರಿಕ್ತ ಸಾಕ್ಷಿ ನುಡಿದಿದ್ದರಿಂದ ಆರೋಪಿ ಯನ್ನು ನ್ಯಾಯಾಲಯ ಖುಲಾಸೆ ಗೊಳಿಸಿತ್ತು. ನ್ಯಾಯಾಲಯ ತನ್ನ ತೀರ್ಪಿನಲ್ಲಿ ನ್ಯಾಯಾಲಯ ಮತ್ತು ಲೋಕಯುಕ್ತ ಪೋಲಿಸ್ ರನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಸಾಕ್ಷಿ‌ ನುಡಿದ ರವಿಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಿ ನೋಟಿಸ್ ಜಾರಿ ಗೊಳಿಸಿತ್ತು.

ನೋಟಿಸ್ ಗೆ ಉತ್ತರಿಸಿದ ರವಿಕುಮಾರ್ ತಾನು ನುಡಿದ ಸಾಕ್ಷಿ ಸತ್ಯವೆಂದು ಹೇಳಿಕೆ ನೀಡಿದ್ದರು. ಅದನ್ನು ಬಲವಾಗಿ ವಿರೋಧಿಸಿದ ಲೋಕಯುಕ್ತ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಬಿಯೋಜಕ ಟಿ.ಎಸ್.ಸತ್ಯಾನಂದ ರವಿಕುಮಾರ್ ಸುಳ್ಳು ಸಾಕ್ಷ ನುಡಿದ ಬಗ್ಗೆ ನ್ಯಾಯಾಲಯಕ್ಕ ಮನವರಿಕೆ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮನವಿ ಮಾಡಿದ್ದರು.

ನ್ಯಾಯಾಲಯದ ಮುಂದೆ ರವಿಕುಮಾರ್ ಈ ಹಿಂದೆಯು ಇದೇ ರೀತಿ ಲೋಕಯುಕ್ತ ಮತ್ತು ಎಸಿಬಿ ಪೋಲಿಸ್ ರ ಮುಂದೆ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಸಾಕ್ಷಿ ನುಡಿಯುವಾಗ ಆರೋಪಿತರ ಜೊತೆ ಶಾಮೀಲಾಗಿ ವ್ಯತಿರಿಕ್ತ ಸಾಕ್ಷಿ ನುಡಿದಿರುವುದನ್ನು ದಾಖಲೆ ಸಹಿತ ನಿರೂಪಿಸಿ ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಅದರ ಆಧಾರದ ಮೇಲೆ ನ್ಯಾಯಾಲಯ ರವಿಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ದೂರು ದಾಖಲಿಸಲ್ಲಿದ್ದು ಮಂಡ್ಯ ನ್ಯಾಯಾಂಗದ ಇತಿಹಾಸದಲ್ಲಿ ಸುಳ್ಳು ಸಾಕ್ಷಿ ನುಡಿದ ವ್ಯಕ್ತಿ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ವಿರಳಾತಿವಿರಳ ಪ್ರಕರಣ ಇದಾಗಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.